ಜೀವ ಉಳಿಸಿಕೊಳ್ಳಬೇಕಾದರೆ 3 ವಾರ ಎಲ್ಲವನ್ನೂ ಸಹಿಸಿಕೊಳ್ಳಬೇಕು; ಸಚಿವ ಸುಧಾಕರ್

ಫೀವರ್ ಕ್ಲಿನಿಕ್ ಇನ್ನೆರಡು ದಿನಗಳಲ್ಲಿ ಪ್ರಾರಂಭ ಮಾಡುತ್ತೇವೆ. 31 ಹರ್ಬನ್ ಪ್ರೈಮರಿ ಹೆಲ್ತ್ ಸೆಂಟರ್ ಗುರುತಿಸಲಾಗಿದೆ. ಅಗತ್ಯ ವಸ್ತುಗಳಿಗಾಗಿ ಸೂಪರ್ ಮಾರ್ಕೆಟ್, ದಿನಸಿ ಅಂಗಡಿಗಳಿಗೆ ಅನುಮತಿ ಕೊಟ್ಟಿದ್ದೇವೆ. ಜನರು ಬದುಕಬೇಕು. ಹೀಗಾಗಿ ಮುಂಜಾಗ್ರತಾ ಕ್ರಮ ತೆಗೆದುಕೊಂಡು ಸೂಪರ್ ಮಾರ್ಕೆಟ್​​​ಗಳಿಗೆ ಅನುಮತಿ ನೀಡಲಾಗಿದೆ. ಸೂಪರ್ ಮಾರ್ಕೆಟ್​​ಗಳಲ್ಲಿ ಥರ್ಮಲ್ ಸ್ಕ್ಯಾನರ್ ಅಳವಡಿಸಲಾಗಿದೆ.

news18-kannada
Updated:March 26, 2020, 11:31 AM IST
ಜೀವ ಉಳಿಸಿಕೊಳ್ಳಬೇಕಾದರೆ 3 ವಾರ ಎಲ್ಲವನ್ನೂ ಸಹಿಸಿಕೊಳ್ಳಬೇಕು; ಸಚಿವ ಸುಧಾಕರ್
ಕೆ.ಸುಧಾಕರ್
  • Share this:
ಬೆಂಗಳೂರು(ಮಾ.26): ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಕರ್ನಾಟಕದಲ್ಲಿ ಇಲ್ಲಿಯವರೆಗೆ 51 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಸದ್ಯ ಯಾವುದೇ ಹೊಸ ಪ್ರಕರಣ ಪತ್ತೆಯಾಗಿಲ್ಲ. ಕೊರೋನಾ ಕುರಿತಾದ ಕ್ಷಣ-ಕ್ಷಣದ ಮಾಹಿತಿ ನೀಡಲು ಡ್ಯಾಶ್​ ಬೋರ್ಡ್​ ವ್ಯವಸ್ಥೆ ಮಾಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್​ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ 21 ದಿನಗಳ ಲಾಕ್​ ಡೌನ್​ನಿಂದಾಗಿ ಜನರಿಗೆ ತೊಂದರೆ ಆಗುತ್ತಿದೆ. ಆದರೆ ಜನರ ಜೀವ ಉಳಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಜೀವ ಉಳಿಸಿಕೊಳ್ಳಬೇಕಾದರೆ 3 ವಾರ ಎಲ್ಲವನ್ನು ತಡೆದುಕೊಳ್ಳಬೇಕು. ಮೂರು ವಾರಗಳಲ್ಲಿ ಯಾರಿಗಾದರೂ ಕೊರೋನಾ ಪಾಸಿಟಿವ್​ ಕಂಡು ಬಂದರೆ ಅವರಿಗೆ ಸೂಕ್ತ ಚಿಕಿತ್ಸೆ ಕೊಟ್ಟು ಗುಣಪಡಿಸುತ್ತೇವೆ ಎಂದು ಭರವಸೆ ನೀಡಿದರು.

ರಸ್ತೆಗಿಳಿದು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಆರೋಪಿಯ ಕಾಲಿಗೆ ಗುಂಡು ಹಾರಿಸಿದ ಪೊಲೀಸರು

ಮುಂದುವರೆದ ಅವರು, ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಜನರು ಇದನ್ನು ಕಡ್ಡಾಯವಾಗಿ ಪಾಲಿಸಲೇಬೇಕು. ರಾಜ್ಯದಲ್ಲಿ ಈವರೆಗೆ ಕೊರೋನಾ ಸೋಂಕು ತಗುಲಿದ್ದ 5 ಜನ ಗುಣಮುಖರಾಗಿದ್ದಾರೆ. ಆದರೆ ಅವರನ್ನು ಇನ್ನೂ 14 ದಿನ ನಿಗಾದಲ್ಲಿ ಇಡಬೇಕು. ಈಗ ಆ ಕೆಲಸ ಆಗುತ್ತಿದೆ ಎಂದರು.

ಸದ್ಯ ರಾಜ್ಯದಲ್ಲಿ ಔಷಧಿ ಕೊರತೆ ಇಲ್ಲ. ಅಗತ್ಯ ಔಷಧಿ ರಾಜ್ಯದಲ್ಲಿ ಸಂಗ್ರಹ ಮಾಡಲಾಗಿದೆ. ಈಗಾಗಲೇ ಈ ನಿಟ್ಟಿನಲ್ಲಿ ಕ್ರಮ ವಹಿಸಲಾಗಿದೆ. ಅಗತ್ಯ ಔಷಧಿ ಖರೀದಿಗೂ ಕ್ರಮ ತೆಗೆದುಕೊಂಡಿದ್ದೇವೆ. ಸಿಎಂ ಕೂಡಾ ಇದಕ್ಕೆ ಹಣದ ಮಿತಿ ಇಟ್ಟಿಲ್ಲ ಎಂದು ಹೇಳಿದರು.

ಫೀವರ್ ಕ್ಲಿನಿಕ್ ಇನ್ನೆರಡು ದಿನಗಳಲ್ಲಿ ಪ್ರಾರಂಭ ಮಾಡುತ್ತೇವೆ. 31 ಹರ್ಬನ್ ಪ್ರೈಮರಿ ಹೆಲ್ತ್ ಸೆಂಟರ್ ಗುರುತಿಸಲಾಗಿದೆ. ಅಗತ್ಯ ವಸ್ತುಗಳಿಗಾಗಿ ಸೂಪರ್ ಮಾರ್ಕೆಟ್, ದಿನಸಿ ಅಂಗಡಿಗಳಿಗೆ ಅನುಮತಿ ಕೊಟ್ಟಿದ್ದೇವೆ. ಜನರು ಬದುಕಬೇಕು. ಹೀಗಾಗಿ ಮುಂಜಾಗ್ರತಾ ಕ್ರಮ ತೆಗೆದುಕೊಂಡು ಸೂಪರ್ ಮಾರ್ಕೆಟ್​​​ಗಳಿಗೆ ಅನುಮತಿ ನೀಡಲಾಗಿದೆ. ಸೂಪರ್ ಮಾರ್ಕೆಟ್​​ಗಳಲ್ಲಿ ಥರ್ಮಲ್ ಸ್ಕ್ಯಾನರ್ ಅಳವಡಿಸಲಾಗಿದೆ. ಜನರಿಗೆ ತೊಂದರೆಯಾಗಬಾರದು ಎಂದು ಈ ಕ್ರಮ ತೆಗೆದುಕೊಂಡಿದ್ದೇವೆ. ಜನರು ಸಾಮಾಜಿಕ ಅಂತರ ಕಾಯ್ದುಕೊಂಡು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

 
First published:March 26, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading