• Home
 • »
 • News
 • »
 • coronavirus-latest-news
 • »
 • ಸಚಿವರಾದ ಈಶ್ವರಪ್ಪ-ಶಶಿಕಲಾ ಜೊಲ್ಲೆಗೂ ತಗುಲಿದ ಕೊರೋನಾ ಸೋಂಕು; ಬೇಗ ಗುಣಮುಖರಾಗಿ ಎಂದು ಹಾರೈಸಿದ ಸಿಎಂ

ಸಚಿವರಾದ ಈಶ್ವರಪ್ಪ-ಶಶಿಕಲಾ ಜೊಲ್ಲೆಗೂ ತಗುಲಿದ ಕೊರೋನಾ ಸೋಂಕು; ಬೇಗ ಗುಣಮುಖರಾಗಿ ಎಂದು ಹಾರೈಸಿದ ಸಿಎಂ

ಕೆ.ಎಸ್‌. ಈಶ್ವರಪ್ಪ, ಶಶಿಕಲಾ ಜೊಲ್ಲೆ.

ಕೆ.ಎಸ್‌. ಈಶ್ವರಪ್ಪ, ಶಶಿಕಲಾ ಜೊಲ್ಲೆ.

ಈ ಹಿಂದೆ ಸಚಿವರಾದ ಶ್ರೀರಾಮುಲು ಸ್ವತಃ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಸಹ ಕೊರೋನಾ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆದು ನಂತರ ಗುಣಮುಖರಾಗಿದ್ದರು. ಅಲ್ಲದೆ, ರಾಜ್ಯದಲ್ಲಿ ದಿನೇ ದಿನೇ ಸೋಂಕಿತರ ಪ್ರಮಾಣವೂ ಹೆಚ್ಚಾಗುತ್ತಿದ್ದು, ಪ್ರಸ್ತುತ ರಾಜ್ಯದಲ್ಲಿ 3ಲಕ್ಷಕ್ಕಿಂತ ಹೆಚ್ಚಿನ ಸೋಂಕಿತರು ಇದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಮುಂದೆ ಓದಿ ...
 • Share this:

  ಬೆಂಗಳೂರು (ಸೆಪ್ಟೆಂಬರ್‌ 01); ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಇಬ್ಬರೂ ಮಾರಣಾಂತಿಕ ಕೊರೋನಾ ಸೋಂಕಿಗೆ ತುತ್ತಾಗಿರುವುದು ಖಚಿತವಾಗಿದೆ. ಈ ಕುರಿತು ಇಬ್ಬರೂ ಸಚಿವರೂ ಟ್ವೀಟ್‌ ಮೂಲಕ ಸ್ಪಷ್ಟೀಕರಿಸಿದ್ದು, ಸಚಿವರು ಶೀಘ್ರ ಮುಖಮುಖರಾಗಿ ಸಾರ್ವಜನಿಕ ಸೇವೆಗೆ ತಮ್ಮನ್ನು ತೊಡಗಿಸಿಕೊಳ್ಳಲಿ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಾರೈಸಿದ್ದಾರೆ.


  ಟ್ವೀಟ್‌ ಮೂಲಕ ತಮಗೆ ಕೊರೋನಾ ತಗುಲಿರುವುದನ್ನು ಬಹಿರಂಗಪಡಿಸಿದ್ದ ಸಚಿವ ಈಶ್ವರಪ್ಪ, "ನನಗೆ ಇಂದು ಕರೊನಾ ಸೋಂಕು ದೃಡ ಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ . ಸದ್ಯಕ್ಕೆ ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ ಹಾರೈಕೆಯಿಂದ ಶೀಘ್ರ ಗುಣಮುಖನಾಗುವ ವಿಶ್ವಾಸ ನನಗಿದೆ" ಎಂದು ತಿಳಿಸಿದ್ದರು.  ಇನ್ನೂ ಸಚಿವೆ ಶಶಿಕಲಾ ಜೊಲ್ಲೆ ಸಹ ತಮಗೆ ಕೊರೋನಾ ಸೋಂಕು ತಗುಲಿರುವ ಕುರಿತು ಟ್ವೀಟ್‌ ಮಾಡಿದ್ದು, "ನನಗೆ ಕೊವಿಡ್ ಪಾಸಿಟಿವ್ ಧೃಡಪಟ್ಟಿದ್ದು , ವೈದ್ಯರ ಸಲಹೆಯ ಮೇರೆಗೆ 14 ದಿನಗಳ ಕಾಲ ಮನೆಯಲ್ಲಿಯೇ ಕ್ವಾರೆಂಟೇನ್ ಆಗಲಿದ್ದೇನೆ. ನನ್ನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದವರು, ಕೊವಿಡ್ ಪರೀಕ್ಷೆ ಮಾಡಿಸಿಕೊಂಡು ಕ್ವಾರೆಂಟೇನ್ ಆಗಬೇಕಾಗಿ ವಿನಂತಿ" ಎಂದು ಮನವಿ ಮಾಡಿದ್ದರು.


  ಇದರ ಬೆನ್ನಿಗೆ ಇಬ್ಬರೂ ಸಚಿವರಿಗೆ ತಮ್ಮ ಹಾರೈಕೆಯನ್ನು ತಿಳಿಸಿರುವ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, "ಜನಪ್ರಿಯ ನಾಯಕರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ಮತ್ತು ನನ್ನ ಆತ್ಮೀಯರಾದ ಶ್ರೀ ಕೆ.ಎಸ್. ಈಶ್ವರಪ್ಪನವರು ಅತಿ ಶೀಘ್ರದಲ್ಲಿ ಕೊರೋನಾ ಸೋಂಕಿನಿಂದ ಪೂರ್ಣ ಗುಣಮುಖರಾಗಿ ಮತ್ತೆ ತಮ್ಮ ಎಂದಿನ ಕೆಲಸಕಾರ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ"  "ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಶಶಿಕಲಾ ಜೊಲ್ಲೆ ಅವರು ಶೀಘ್ರದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾಗಿ ಕರ್ತವ್ಯಕ್ಕೆ ಮರಳಲಿ ಎಂದು ಹಾರೈಸುತ್ತೇನೆ" ಎಂದು ಟ್ವೀಟ್‌ ಮೂಲಕ ತಿಳಿದಿದ್ದಾರೆ.


  ಈ ಹಿಂದೆ ಸಚಿವರಾದ ಶ್ರೀರಾಮುಲು ಸ್ವತಃ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಸಹ ಕೊರೋನಾ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆದು ನಂತರ ಗುಣಮುಖರಾಗಿದ್ದರು. ಅಲ್ಲದೆ, ರಾಜ್ಯದಲ್ಲಿ ದಿನೇ ದಿನೇ ಸೋಂಕಿತರ ಪ್ರಮಾಣವೂ ಹೆಚ್ಚಾಗುತ್ತಿದ್ದು, ಪ್ರಸ್ತುತ ರಾಜ್ಯದಲ್ಲಿ 3ಲಕ್ಷಕ್ಕಿಂತ ಹೆಚ್ಚಿನ ಸೋಂಕಿತರು ಇದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

  Published by:MAshok Kumar
  First published: