‘ಸಾವಿರ ಸವಾಲುಗಳ ನಡುವೆಯೂ ಸಿಎಂ ಅಭಿವೃದ್ದಿಗೆ ಆದ್ಯತೆ ನೀಡಿದ್ದಾರೆ‘ - ಸಚಿವ ಕೆ. ಗೋಪಾಲಯ್ಯ

ಜಿಲ್ಲಾಡಳಿತದ ವತಿಯಿಂದ ಯಾರೊಬ್ಬರಿಗೂ ತೊಂದರೆಯಾಗದಂತೆ ವ್ಯವಸ್ಥೆ ಮಾಡಲಾಗಿದೆ. ರೋಗ ಲಕ್ಷಣಗಳಿಲ್ಲದ ಸೋಂಕಿತರಿಗಾಗಿ ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಕೋವಿಡ್ ಕೇರ್ ಕೇಂದ್ರಗಳನ್ನು ಸ್ಥಾಪಿಸಿ ಸೋಂಕಿತರ ಚಿಕಿತ್ಸೆಗೆ ಪೂರಕ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಭಯ ಪಡದೆ ಜಿಲ್ಲಾಡಳಿತಕ್ಕೆ ಸಹಕರಿಸಬೇಕು ಎಂದು ಶಾಸಕರು ಹೇಳಿದರು.

ಸಚಿವ ಕೆ. ಗೋಪಾಲಯ್ಯ.

ಸಚಿವ ಕೆ. ಗೋಪಾಲಯ್ಯ.

  • Share this:
ಹಾಸನ(ಜು.28): ಸಿಎಂ ಯಡಿಯೂರಪ್ಪ ಅವರು ಅಧಿಕಾರಕ್ಕೆ ಬಂದ ಅವಧಿಯಲ್ಲಿ ಕರ್ನಾಟಕದ 21 ಜಿಲ್ಲೆಗಳಲ್ಲಿನ ಲಕ್ಷಾಂತರ ಕುಟುಂಬಗಳು ನೆರೆ ಹಾವಳಿಯಿಂದ ತೊಂದರೆಗೀಡಾಗಿದ್ದವು. ಹೀಗೆ ಎಲ್ಲವನ್ನು ಕಳೆದುಕೊಂಡು ಸಂಕಷ್ಟದಲ್ಲಿದ್ದ ನೆರೆ ಸಂತ್ರಸ್ತ ಕುಟುಂಬಕ್ಕೆ 5 ಲಕ್ಷ ರೂ. ಅನುದಾನ ಬಿಡುಗಡೆ ಮಾಡುವ ಮೂಲಕ ಸಿಎಂ ನೆರವಾಗಿದ್ದಾರೆ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ ತಿಳಿಸಿದ್ದಾರೆ. 

ಹಾಸನದ ನಗರಸಭೆ ಸಭಾಂಗಣದ ನಡೆದ ಮುಖ್ಯಮಂತ್ರಿಯವರ ನೇರ ಪ್ರಸಾರ ಕಾರ್ಯಕ್ರಮ ಮುಗಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗೋಪಾಲಯ್ಯ, ಸಿಎಂ ಬಿ.ಎಸ್​ ಯಡಿಯೂರಪ್ಪ ಕೋವಿಡ್-19 ಸಂದರ್ಭದಲ್ಲಿ ಇಡೀ ದೇಶ ಮೆಚ್ಚುವಂತೆ ಕಾರ್ಯ ನಿರ್ವಹಿಸಿದ್ದಾರೆ. ರಾಜ್ಯದಲ್ಲಿನ ಎಲ್ಲಾ ಜಿಲ್ಲೆಯಲ್ಲಿ ಸಂಕಷ್ಟಕ್ಕೆ ಈಡಾಗಿದ್ದ ಜನರಿಗೆ ವಿವಿಧ ಯೋಜನೆಗಳ ಮೂಲಕ ನೆರವಾಗಿದ್ದಾರೆ ಎಂದರು.

ಕೋವಿಡ್-19 ಲಾಕ್‍ಡೌನ್ ಸಂದರ್ಭದಲ್ಲಿ ಯಾರೊಬ್ಬರೂ ಹಸಿವಿನಿಂದ ಬಳಲಬಾರದು. ಹೀಗಾಗಿ ಎಲ್ಲರಿಗೂ ಅಂದರೆ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್‍ಗೆ ಮತ್ತು ಹೊಸದಾಗಿ ಅರ್ಜಿ ಸಲ್ಲಿಸಿದವರಿಗೂ ಮೂರು ತಿಂಗಳಿಗೆ ಆಗುವಷ್ಟು 30 ಕೆಜಿ ಪಡಿತರ ಕೊಡಿಸಿದ್ದರ. ಹೊರ ರಾಜ್ಯದಿಂದ ಬಂದ ನಿರಾಶ್ರತರಿಗೂ ಹೀಗೆಯೇ ಮಾಡಿ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಗೆ ಸೂಚಿಸಿದ್ದರು. ಸಿಎಂ ಆದೇಶದಂತೆಯೇ ಎಲ್ಲರಿಗೂ 30 ಕೆಜಿ ಪಡಿತರ ನೀಡಲಾಗಿತ್ತು. ರಾಜ್ಯದಲ್ಲಿನ ಲಕ್ಷಾಂತರ ಕುಟುಂಬಕ್ಕೆ ಉಜ್ವಲ ಯೋಜನೆಯಡಿ 3 ತಿಂಗಳು ಉಚಿತ ಗ್ಯಾಸ್ ನೀಡುವ ಮೂಲಕ ಬಡವರ ಕಷ್ಟಕ್ಕೆ ಸ್ಪಂದಿಸಿದ್ದಾರೆ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಜನರ ಕಷ್ಟಕ್ಕೆ ಸ್ಪಂದಿಸಿ ಮುಂದಿನ ನಂಬರ್ ಮಾಹೆಯವರಿಗೆ ಪ್ರತಿಯೊಬ್ಬ ವ್ಯಕ್ತಿಗೆ ತಲಾ 5 ಕೆ.ಜಿ ಯಂತೆ 1.27 ಕೋಟಿ ಪಡಿತರ ಕಾರ್ಡ್ ಹೊಂದಿದವರಿಗೆ ಮತ್ತು ನಿರಾಶ್ರತರಿಗೆ ಒಟ್ಟಾರೆ 4.32 ಕೋಟಿ ಜನರಿಗೆ ಪಡಿತರ ನೀಡುವ ಕಾರ್ಯ ಮುಂದುವರೆಯುತ್ತದೆ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ ಅವರು ಹೇಳಿದರು.
ಕೋವಿಡ್-19 ಪ್ರಾರಂಭವಾದ ಹಿನ್ನೆಲೆಯಲ್ಲಿ ಜನಸಾಮಾನ್ಯರ ಪ್ರಾಣ ರಕ್ಷಣೆ ಬಹು ಮುಖ್ಯವಾದ ಕಾರಣ ಅಭಿವೃದ್ಧಿ ಕಾರ್ಯಗಳು ಪ್ರಗತಿಯಲಿ ಸ್ವಲ್ಪ ವಿಳಂಬವಾಗಿದೆ ಮುಂದಿನ ದಿನಗಳಲ್ಲಿ ಶೀಘ್ರವಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ ಅವರು ತಿಳಿಸಿದರು.

ಜಿಲ್ಲೆಯಲ್ಲಿ ಕೊರೋನಾ ಸೋಂಕು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರಿಗಾಗಿ ಕೋವಿಡ್ ಆಸ್ಪತ್ರೆಯಲ್ಲಿ 400 ಬೆಡ್‍ಗಳು ಹಾಗೂ ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಕೋವಿಡ್ ಕೇರ್ ಕೇಂದ್ರದಲ್ಲಿ 300 ಬೆಡ್‍ಗಳ ವ್ಯವಸ್ಥೆ ಮಾಡಲಾಗಿದೆ. ಹಾಗೆಯೇ ಖಾಸಗಿ ಆಸ್ಪತ್ರೆಗಳು ಜಿಲ್ಲಾಡಳಿತಕ್ಕೆ 290 ಬೆಡ್‍ಗಳನ್ನು ನೀಡಲು ಒಪ್ಪಿಗೆ ಸೂಚಿಸಿವೆ. ಸೋಂಕಿತರ ಸಂಖ್ಯೆ ಹೆಚ್ಚಾದರೆ ಕೃಷಿ ಕಾಲೇಜಿನಲ್ಲಿ 400 ಬೆಡ್‍ಗಳ ವ್ಯವಸ್ಥೆ ಮಾಡಲಾಗಿದ್ದು, ತುರ್ತು ಪರೀಸ್ಥಿತಿ ಉದ್ಭವವಾದರೆ 48 ಗಂಟೆಗಳಲ್ಲಿ ಪೂರ್ಣ ಸಿದ್ದತೆ ಮಾಡಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.

ಖಾಸಗಿ ಆಸ್ಪತ್ರೆಗಳು ಸೋಂಕಿತರಿಗೆ ಚಿಕಿತ್ಸೆ ನೀಡಲು ಸರ್ಕಾರ ನಿಗದಿಪಡಿಸಿದ ವೆಚ್ಚದಲ್ಲಿ ಚಿಕಿತ್ಸೆ ನೀಡಬೇಕು. ಚಿಕಿತ್ಸೆಗೆ ನಿರಾಕರಿಸಿದರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮತ್ತು ಜಿಲ್ಲಾ ನೋಡಲ್ ಅಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ. ದೂರವಾಣಿ ಸಂಖ್ಯೆ: 9449843200, ಹಾಗೂ ಜಿಲ್ಲಾ ಸಹಾಯವಾಣಿ ಸಂಖ್ಯೆ: 08172-246575ಗೆ ತಿಳಿಸಿದರೆ, ಅಂತಹ ಆಸ್ಪತ್ರೆ ವಿರುದ್ಧ ಜಿಲ್ಲಾಡಳಿತ ಕ್ರಮಕೈಗೊಳ್ಳುತ್ತದೆ ಎಂದು ಕೆ. ಗೋಪಾಲಯ್ಯ ತಿಳಿಸಿದರು.

ಶಾಸಕರಾದ ಪ್ರೀತಂ ಜೆ. ಗೌಡ ಅವರು ಮಾತನಾಡಿ ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಉಸಿರಾಟದ ತೊಂದರೆ ಇರುವ ಹಾಗೂ ರೋಗದ ಗುಣಲಕ್ಷಣಗಳಿರುವ ಸೋಂಕಿತರನ್ನು ಕೋವಿಡ್ ಆಸ್ಪತ್ರೆಯಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಯಾವುದೇ ರೋಗಲಕ್ಷಣಗಳಿಲ್ಲದ ಸೋಂಕಿತರನ್ನು ಕೋವಿಡ್ ಕೇರ್ ಕೇಂದ್ರಕ್ಕೆ ವರ್ಗಾಯಿಸಿ ಚಿಕಿತ್ಸೆ ನೀಡಲಾಗುತ್ತದೆ. ಹೋಂ ಐಸೋಲೇಷನ್​​​ನಲ್ಲಿರಲು ಇಚ್ಛಿಸಿದವರ ಮನೆಯಲ್ಲಿ ಪ್ರತ್ಯೇಕ ಶೌಚಾಲಯ ಹಾಗೂ ವ್ಯವಸ್ಥಿತ ಕೊಠಡಿಯನ್ನು ಹೊಂದಿದ್ದರೆ ಅಂತವರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ ಎಂದರು.

ಇದನ್ನೂ ಓದಿ: ದೇಶದ ಆರ್ಥಿಕತೆ ಕುಸಿತ: ನಾಳೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಪರಿಶೀಲನಾ ಸಭೆ

ಜಿಲ್ಲಾಡಳಿತದ ವತಿಯಿಂದ ಯಾರೊಬ್ಬರಿಗೂ ತೊಂದರೆಯಾಗದಂತೆ ವ್ಯವಸ್ಥೆ ಮಾಡಲಾಗಿದೆ. ರೋಗ ಲಕ್ಷಣಗಳಿಲ್ಲದ ಸೋಂಕಿತರಿಗಾಗಿ ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಕೋವಿಡ್ ಕೇರ್ ಕೇಂದ್ರಗಳನ್ನು ಸ್ಥಾಪಿಸಿ ಸೋಂಕಿತರ ಚಿಕಿತ್ಸೆಗೆ ಪೂರಕ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಭಯ ಪಡದೆ ಜಿಲ್ಲಾಡಳಿತಕ್ಕೆ ಸಹಕರಿಸಬೇಕು ಎಂದು ಶಾಸಕರು ಹೇಳಿದರು.
Published by:Ganesh Nachikethu
First published: