ಬೆಂಗಳೂರು(ಮಾ.26): ಕೊರೋನಾ ಎಫೆಕ್ಟ್ ನಿಂದಾಗಿ ಆರ್ಥಿಕ ಪೆಟ್ಟು ಬಿದ್ದಿದೆ. ಹೀಗಾಗಿ ಸರ್ಕಾರ ಪರಿಹಾರ ನಿಧಿಗೆ ಸಾರ್ವಜನಿಕರೇ ನೆರವು ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕರೊಬ್ಬರು ಕೊರೋನಾ ವಿರುದ್ದ ಹೋರಾಟಕ್ಕೆ ಬೆಂಬಲವನ್ನು ಸೂಚಿಸಿದ್ದಾರೆ.
ಮಾಜಿ ಕೇಂದ್ರ ಸಚಿವ ಹಾಲಿ ಶಾಸಕರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಮೂರು ತಿಂಗಳ ವೇತನವನ್ನು ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ನೀಡಿದ್ದಾರೆ.
![]()
ಸಿಎಂಗೆ ಬರೆದ ಪತ್ರ
ಈ ಬಗ್ಗೆ ಸಿಎಂಗೆ ಪತ್ರ ಬರೆದಿರುವ ಶಾಸಕರು. ಕೊರೋನಾ ನಿಂದಾಗಿ ಆರ್ಥಿಕವಾಗಿ ನಷ್ಟ ಎದುರಿಸಬೇಕಿದೆ. ಈ ಸಂದರ್ಭದಲ್ಲಿ ಸರ್ಕಾರದ ಜೊತೆಗೆ ನೈತಿಕವಾಗಿ ಹಾಗೂ ಆರ್ಥಿಕವಾಗಿ ಬೆಂಬಲವನ್ನು ನೀಡಬೇಕಾಗಿದೆ. ಹೀಗಾಗಿ ಮೂರು ತಿಂಗಳ ವೇತನ ನೀಡುವುದಾಗಿ ತಿಳಿಸಿದ್ದಾರೆ.
1 ತಿಂಗಳ ಸಂಬಳ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಕೇಂದ್ರ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಮ್ಮ ಒಂದು ತಿಂಗಳ ವೇತನವನ್ನು ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಗೆ ನೀಡಿದ್ದಾರೆ. ಜೊತೆಗೆ ತಮ್ಮ ಆಪ್ತ ಸಹಾಯಕರುಗಳಿಗೆ ಧನಸಹಾಯ ಮಾಡುವಂತೆ ಮನವಿ ಮಾಡಿದ್ದಾರೆ.
ಇದರ ಜೊತೆಗೆ ಟಾಲಿವುಡ್ ನಟ ಹಾಗೂ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಕೊರೋನಾ ಹೋರಾಟಕ್ಕೆ 1 ಕೋಟಿ ರೂಪಾಯಿ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಪ್ರಧಾನ ಮಂತ್ರಿ ಪರಿಹಾರ ನಿಧಿಗೆ 1 ಕೋಟಿ ರೂಪಾಯಿ ಹಾಗೂ ತೆಲಂಗಣ ಮತ್ತು ಆಂಧ್ರ ಸಿಎಂ ಪರಿಹಾರ ನಿಧಗೆ ತಲಾ 50 ಸಾವಿರ ರೂಪಾಯಿ ನೀಡುವುದಾಗಿ ಟ್ವೀಟ್ ಮಾಡಿದ್ದಾರೆ.
ದೇಶಾದ್ಯಂತ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಲಿದೆ. ಇದನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಕೊಳ್ಳತ್ತಿದೆ. ಹಲವು ರಾಜ್ಯಗಳು ವಿಶೇಷ ಪ್ಯಾಕೇಜ್ ಗಳನ್ನುಘೋಷಿಸಿವೆ.
ಇದನ್ನೂ ಓದಿ :
ಕೊರೋನಾ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೇ ಮನೆ ಖಾಲಿ ಮಾಡಿ ಎಂದ ಮಾಲೀಕರು; ಸಚಿವ ಶ್ರೀರಾಮುಲು ಎಚ್ಚರಿಕೆ
ಮಾರಕ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಇಂದು ನಾಲ್ಕು ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 55ಕ್ಕೆ ಏರಿಕೆಯಾಗಿದೆ. ನೆನ್ನೆಗೆ ಒಟ್ಟು 52 ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿದ್ದವು. ಇದೀಗ ಮತ್ತೆ ನಾಲ್ಕು ಹೊಸ ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ಈವರೆಗೆ ಇಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ