ಮಾಜಿ ಸಿಎಂ ಸಿದ್ದರಾಮಯ್ಯ ಬೆನ್ನಲ್ಲೇ ಮಗ ಯತೀಂದ್ರಗೂ ತಗುಲಿದ ಕೊರೋನಾ ಸೋಂಕು

ಇತ್ತೀಚಿನ ದಿನಗಳಲ್ಲಿ ಜನಪ್ರತಿನಿಧಿಗಳಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಸಿಎಂ ಬಿಎಸ್ ಯಡಿಯೂರಪ್ಪ ಅವರಗೂ ಸೋಂಕು ತಗುಲಿದ್ದು, ಅವರೂ ಸಹ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

news18-kannada
Updated:August 7, 2020, 6:46 PM IST
ಮಾಜಿ ಸಿಎಂ ಸಿದ್ದರಾಮಯ್ಯ ಬೆನ್ನಲ್ಲೇ ಮಗ ಯತೀಂದ್ರಗೂ ತಗುಲಿದ ಕೊರೋನಾ ಸೋಂಕು
ಯತೀಂದ್ರ ಸಿದ್ದರಾಮಯ್ಯ
  • Share this:
ಬೆಂಗಳೂರು; ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊರೋನಾ ಸೋಂಕು ತಗುಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೆನ್ನಲ್ಲೇ ಅವರ ಮಗ ಹಾಗೂ ವರುಣಾ ಕ್ಷೇತ್ರದ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರಿಗೂ ಕೊರೋನಾ ಪಾಸಿಟಿವ್ ವರದಿ ಬಂದಿದೆ.

ಈ ಬಗ್ಗೆ ಸ್ವತಃ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರೇ ಟ್ವಿಟರ್​ನಲ್ಲಿ ಖಚಿತಪಡಿಸಿದ್ದಾರೆ. ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸುವಂತೆ ಕೋರುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.




ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೂ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟು, ಇದೀಗ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಅವರ ಮಗ ಹಾಗೂ ವರುಣಾ ಕ್ಷೇತ್ರದ ಶಾಸಕರಾಗಿರುವ ಯತೀಂದ್ರ ಸಿದ್ದರಾಮಯ್ಯ ಅವರಿಗೂ ಕೊರೋನಾ ಸೋಂಕು ದೃಢಪಟ್ಟಿದೆ.ಇದನ್ನು ಓದಿ: ಕೇರಳದ ಇಡುಕ್ಕಿಯಲ್ಲಿ ಭೂ ಕುಸಿತದಿಂದ 15 ಮಂದಿ ಸಾವು; 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ

ಇತ್ತೀಚಿನ ದಿನಗಳಲ್ಲಿ ಜನಪ್ರತಿನಿಧಿಗಳಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಸಿಎಂ ಬಿಎಸ್ ಯಡಿಯೂರಪ್ಪ ಅವರಗೂ ಸೋಂಕು ತಗುಲಿದ್ದು, ಅವರೂ ಸಹ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Published by: HR Ramesh
First published: August 7, 2020, 6:46 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading