ಕೊರೋನಾ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಎಲ್ಲಾ ರಾಜ್ಯಗಳಿಗೂ ಪಂಜಾಬ್ ಮಾದರಿಯಾಗಲಿ; ನರೇಂದ್ರ ಮೋದಿ

ಎಲ್ಲರೂ ಖಡ್ಡಾಯವಾಗಿ ಮಾಸ್ಕ್‌ ಧರಿಸಿದರೆ ಕೊರೋನಾ ಹರಡದಂತೆ ತಡೆಯಬಹುದು. ಪಂಜಾಬ್ ರಾಜ್ಯ ಇದನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದಿದೆ. ಈ ರಾಜ್ಯದಲ್ಲಿ ಪ್ರತಿಯೊಬ್ಬರು ಮಾಸ್ಕ್ ಧರಿಸಿ ಹೊರಬರುವುದರಿಂದ ಕೊರೋನಾ ನಿಯಂತ್ರಣದಲ್ಲಿದೆ. ಹೀಗಾಗಿ ಪ್ರತಿಯೊಂದು ರಾಜ್ಯವೂ ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಮೋದಿ ಎಲ್ಲಾ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಮುಖ್ಯಮಂತ್ರಿಗಳ ಜೊತೆ ಪಿಎಂ ವಿಡಿಯೋ ಕಾನ್ಫೆರೆನ್ಸ್

ಮುಖ್ಯಮಂತ್ರಿಗಳ ಜೊತೆ ಪಿಎಂ ವಿಡಿಯೋ ಕಾನ್ಫೆರೆನ್ಸ್

  • Share this:
ನವ ದೆಹಲಿ (ಜೂನ್‌ 16); ಮಾರಣಾಂತಿಕ ಕೊರೋನಾ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮಾಸ್ಕ್ ಧರಿಸದೆ ಮನೆಯಿಂದ ಯಾರೂ ಹೊರಗೆ ಬರದಂತಹ ಪಂಜಾಬ್ ರಾಜ್ಯದ ಮಾದರಿಯನ್ನು ಎಲ್ಲಾ ರಾಜ್ಯಗಳೂ ಪಾಲಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳ ಎದುರು ಮನವಿ ಮಾಡಿಕೊಂಡಿದ್ದಾರೆ.

ಕೊರೋನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸುವ ಮಾರ್ಗಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಇಂದು ಪಂಜಾಬ್, ಅಸ್ಸಾಂ, ಕೇರಳ, ಉತ್ತರಾಖಂಡ, ಜಾರ್ಖಂಡ್, ಛತ್ತೀಸ್ಘಡ, ತ್ರಿಪುರ, ಹಿಮಾಚಲ ಪ್ರದೇಶ, ಚಂಡೀಗಢ, ಗೋವಾ, ಮಣಿಪುರ, ನಾಗಾಲ್ಯಾಂಡ್, ಲಡಾಖ್, ಪುದುಚೇರಿ, ಅರುಣಾಚಲ ಪ್ರದೇಶ, ಮೇಘಾಲಯ, ಮಿಜೋರಾಂ, ಸಿಕ್ಕಿಂ ಮತ್ತು ಲಕ್ಷದ್ವೀಪ ಸೇರಿ ಒಟ್ಟು 21 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮೋದಿ ಚರ್ಚೆ ನಡೆಸಿದ್ದಾರೆ. ಈ ಸಭೆ ನಾಳೆಯೂ ಮುಂದುವರೆಯಲಿದೆ ಎನ್ನಲಾಗುತ್ತಿದೆ.

ಈ ಚರ್ಚೆಯ ವೇಳೆ ಎಲ್ಲಾ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, “ಕೊರೋನಾ ಸೋಂಕು ಹೆಚ್ಚಾಗದಂತೆ ನೋಡಿಕೊಳ್ಳಲು ಇರುವ ಏಕೈಕ ಮಾರ್ಗ ಪ್ರತಿಯೊಬ್ಬರು ಎಚ್ಚರಿಕೆಯಿಂದ ಇರುವುದು. ಈ ನಿಟ್ಟಿನಲ್ಲಿ ಎಲ್ಲಾ ರಾಜ್ಯಗಳು ಪಂಜಾಬ್ ರಾಜ್ಯದ ನೀತಿಯನ್ನು ಮಾದರಿಯಾಗಿ ತೆಗೆದುಕೊಳ್ಳಬೇಕು. ಈ ರಾಜ್ಯದಲ್ಲಿ ಪ್ರತಿಯೊಬ್ಬರು ಮನೆಯಿಂದ ಹೊರ ಬರುವ ಮುನ್ನ ಕಡ್ಡಾಯವಾಗಿ ಮಾಸ್ಕ್ ಧರಿಸುವ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದಾರೆ.

ಎಲ್ಲರೂ ಖಡ್ಡಾಯವಾಗಿ ಮಾಸ್ಕ್‌ ಧರಿಸಿದರೆ ಕೊರೋನಾ ಹರಡದಂತೆ ತಡೆಯಬಹುದು.
ಪಂಜಾಬ್ ರಾಜ್ಯ ಇದನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದಿದೆ. ಈ ರಾಜ್ಯದಲ್ಲಿ ಪ್ರತಿಯೊಬ್ಬರು ಮಾಸ್ಕ್ ಧರಿಸಿ ಹೊರಬರುವುದರಿಂದ ಕೊರೋನಾ ನಿಯಂತ್ರಣದಲ್ಲಿದೆ. ಹೀಗಾಗಿ ಪ್ರತಿಯೊಂದು ರಾಜ್ಯವೂ ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು” ಎಂದು ಮೋದಿ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ’ದೇಶಕ್ಕಾಗಿ ನನ್ನ ಮಗನ ತ್ಯಾಗಕ್ಕೆ ನಾನು ಹೆಮ್ಮೆಪಡುತ್ತೇನೆ’; ಚೀನಾ ಸೇನೆಯಿಂದ ಹತರಾದ ಕರ್ನಲ್ ಸಂತೋಷ್ ತಾಯಿಯ ನುಡಿ

ಪ್ರಸ್ತುತ ಭಾರತದಲ್ಲಿ COVID-19 ಪ್ರಕರಣಗಳ ಸಂಖ್ಯೆ 3.4 ಲಕ್ಷವನ್ನು ದಾಟಿದೆ. ಸಾವಿನ ಸಂಖ್ಯೆಯೂ 9,900 ಮೀರಿದ್ದು, ಈ ಮಹಾಮಾರಿಯನ್ನು ನಿಯಂತ್ರಿಸುವುದೇ ಭಾರತಕ್ಕೆ ಅತಿದೊಡ್ಡ ಸವಾಲಾಗಿ ಪರಿಣಮಿಸಿದೆ. ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ಎಲ್ಲಾ ರಾಜ್ಯದ ಸಿಎಂಗಳ ಜೊತೆ ಇಂದು ಮತ್ತು ನಾಳೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸುತ್ತಿದ್ದಾರೆ.
First published: