HOME » NEWS » Coronavirus-latest-news » MUSLIM LEAGUE AGREED TO GIVE DETAILS OF NIJAMUDDIN MEET AFTER CM YEDIYURAPPA MEETING MAK

ಮುಸ್ಲಿಂ ಮುಖಂಡರ ಜೊತೆ ಸಿಎಂ ಸಭೆ; ದೆಹಲಿಯ ತಬ್ಲಿಘಿ ಮರ್ಕಜ್​ ಗೆ ಭೇಟಿ ನೀಡಿದವರ ಮಾಹಿತಿ ನೀಡಲು ಒಪ್ಪಿಗೆ

ಲಾಕ್‌ಡೌನ್ ಅವಧಿ ಮುಗಿಯುವ ವರೆಗೆ ಎಲ್ಲರ ಆರೋಗ್ಯದ ದೃಷ್ಟಿಯಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಜಾತಿ, ಧರ್ಮ ಭೇದ ಮರೆತು ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕು ಎಂದು ಸಿಎಂ ಯಡಿಯೂರಪ್ಪ ಈ ವೇಳೆ ಮನವಿ ಮಾಡಿದ್ಧಾರೆ.

news18-kannada
Updated:April 3, 2020, 3:05 PM IST
ಮುಸ್ಲಿಂ ಮುಖಂಡರ ಜೊತೆ ಸಿಎಂ ಸಭೆ; ದೆಹಲಿಯ ತಬ್ಲಿಘಿ ಮರ್ಕಜ್​ ಗೆ ಭೇಟಿ ನೀಡಿದವರ ಮಾಹಿತಿ ನೀಡಲು ಒಪ್ಪಿಗೆ
ಮುಸ್ಲಿಂ ಮುಖಂಡರ ಜೊತೆ ಸಭೆ ನಡೆಸಿರುವ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ.
  • Share this:
ಬೆಂಗಳೂರು (ಏಪ್ರಿಲ್ 03); ದೆಹಲಿಯ ನಿಜಾಮುದ್ದೀನ್ ಪ್ರದೇಶದ ತಬ್ಲಿಕ್ ಮರ್ಕಜ್‌ನಲ್ಲಿ ಪಾಲ್ಗೊಂಡ ಎಲ್ಲಾ ಮುಸ್ಲೀಮರ ಮಾಹಿತಿಯನ್ನು ರಾಜ್ಯ ಸರ್ಕಾರಕ್ಕೆ ನೀಡಲು ತಾವು ಸಿದ್ದ ಎಂದು ರಾಜ್ಯ ಮುಸ್ಲಿಂ ಸಮಾಜದ ಮುಖಂಡರು ತಿಳಿಸಿದ್ದಾರೆ.

ಕಳೆದ ಮಾರ್ಚ್ 13 ರಿಂದ 15ನೇ ತಾರೀಖಿನ ವರೆಗೆ ದೆಹಲಿಯದ ನಿಜಾಮುದ್ದೀನ್ ಪ್ರದೇಶದ ತಬ್ಲಿಕ್ ಮರ್ಕಜ್ ಎಂಬ ಮಸೀದಿಯಲ್ಲಿ ಧಾರ್ಮಿಕ ಸಭೆ ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಇಂಡೋನೇಷ್ಯಾ, ಸಿಂಗಾಪೂರ್ ಸೇರಿದಂತೆ ದೇಶ ವಿದೇಶದಿಂದ ಸುಮಾರು 4,000ಕ್ಕೂ ಅಧಿಕ ಜನ ಭಾಗವಹಿಸಿದ್ದರು ಎನ್ನಲಾಗಿದೆ. ಆದರೆ, ಈ ಸಭೆಯಲ್ಲಿ ಪಾಲ್ಗೊಂಡ ಸುಮಾರು 10 ಜನ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.

ಅಲ್ಲದೆ, ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅನೇಕರಿಗೆ ಈ ಸೋಂಕು ತಗುಲಿದ್ದು ಅವರನ್ನು ದೆಹಲಿಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗುತ್ತಿದೆ. ಇನ್ನೂ ರಾಜ್ಯದಿಂದಲೂ ಅನೇಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ಸಾಧ್ಯತೆ ಇದೆ. ಆದರೆ, ಯಾವ ಜಿಲ್ಲೆಯಿಂದ ಎಷ್ಟು ಮಂದಿ ಪಾಲ್ಗೊಂಡಿದ್ದರು? ಎಂಬುದನ್ನು ಪತ್ತೆ ಹಚ್ಚುವುದೇ ಸರ್ಕಾರಕ್ಕೆ ತಲೆನೋವಿನ ಕೆಲಸವಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಇಂದು ರಾಜ್ಯದ ಪ್ರಮುಖ ಮುಸ್ಲಿಂ ನಾಯಕರುಗಳ ಜೊತೆಗೆ ಸಭೆ ನಡೆಸಿದ್ದರು.

ಸಭೆಯಲ್ಲಿ ಅನೇಕ ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಸಲಾಯಿತು. ಈ ವೇಳೆ ಮುಸ್ಲಿಂ ಮುಖಂಡರು ನಿಜಾಮುದ್ದೀನ್ ತಬ್ಲೀಘ್ ಮರ್ಕಜ್ ಗೆ ಭೇಟಿ ನೀಡಿದ ರಾಜ್ಯದ ವ್ಯಕ್ತಿಗಳ ಮಾಹಿತಿ ನೀಡುವುದಾಗಿ ಒಪ್ಪಿಗೆ ಸೂಚಿಸಿದ್ದಾರೆ. ಅಲ್ಲದೆ, ಆರೋಗ್ಯ ಕಾರ್ಯಕರ್ತರಿಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿಯೂ, ವೈದ್ಯಕೀಯ ಪರೀಕ್ಷೆಗೆ ಒಳಗಾಗಿ ಕ್ವಾರಂಟೈನ್ ಅನ್ನು ಕಟ್ಟುನಿಟ್ಟಾಗಿ ಪಾಲಿಸುವುದಾಗಿಯೂ ಅವರು ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಈ ವೇಳೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, “ಲಾಕ್‌ಡೌನ್ ಅವಧಿ ಮುಗಿಯುವ ವರೆಗೆ ಎಲ್ಲರ ಆರೋಗ್ಯದ ದೃಷ್ಟಿಯಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಜಾತಿ, ಧರ್ಮ ಭೇದ ಮರೆತು ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕು” ಎಂದು ಮನವಿ ಮಾಡಿದ್ಧಾರೆ.

ಇದನ್ನೂ ಓದಿ : ಕೊರೋನಾ ದಾಳಿಗೆ ತತ್ತರಿಸಿದ ಅಮೆರಿಕ; 24 ಗಂಟೆಯಲ್ಲಿ 1169 ಮಂದಿ ಸಾವು
First published: April 3, 2020, 1:28 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories