ದೆಹಲಿಯ ನೀತಿ ಆಯೋಗದ ಅಧಿಕಾರಿಗೆ ಕೊರೋನಾ ವೈರಸ್ ಪಾಸಿಟಿವ್ ಕಂಡು ಬಂದ ಹಿನ್ನೆಲೆಯಲ್ಲಿ ನೀತಿ ಆಯೋಗ ಕಚೇರಿಯನ್ನ 48 ಗಂಟೆಗಳ ಕಾಲ ಸೀಲ್ ಡೌನ್ ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಿರ್ದೇಶಕ ಮಟ್ಟದ ಅಧಿಕಾರಿಯನ್ನು ಕೊರೋನಾ ಪರೀಕ್ಷೆ ನಡೆಸಲಾಗಿತ್ತು. ಅವರಿಗೆ ಕೊರೋನಾ ಸಂಕು ದೃಢಪಟ್ಟಿತ್ತು. ನೀತಿ ಭವನದಲ್ಲಿ ಕೆಲಸ ಮಾಡುವ ಉದ್ಯೋಗಿಗೆ ಸೋಂಕು ದೃಢಪಟ್ಟಿರುವ ವಿಷಯವನ್ನು ಇಂದು ಬೆಳಿಗ್ಗೆ 9 ಗಂಟೆಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ನೀತಿ ಆಯೋಗದ ಸಲಹೆಗಾರ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಆ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿರುವವರಿಗೆ ಸ್ವಯಂ-ಕ್ವಾರಂಟೈನ್ ಮಾಡಲು ತಿಳಿಸಲಾಗಿದೆ ಎಂದು ಅವರು ಹೇಳಿದರು. ಆರೋಗ್ಯ ಸಚಿವಾಲಯದ ಮಾರ್ಗಸೂಚಿಗಳಂತೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಅನುಸರಿಸಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಇಡೀ ಕಟ್ಟಡವನ್ನು ಯಾವುದೇ ಉದ್ಯೋಗಿ ಪ್ರವೇಶಿಸದಂತೆ 48 ಗಂಟೆಗಳ ಕಾಲ ಮುಚ್ಚಲಾಗಿದೆ ಎಂದರು.
ಇತ್ತೀಚೆಗೆ, ಏಪ್ರಿಲ್ 15 ರಂದು ಕಚೇರಿಗೆ ಹಾಜರಾಗಿದ್ದ ತನ್ನ ಉದ್ಯೋಗಿಯೊಬ್ಬರು ಕೊರೋನಾ ವೈರಸ್ ಪರೀಕ್ಷೆ ನಡೆಸಿದಾಗ ಪಾಸಿಟಿವ್ ಬಂದಿತು. ನಂತರ ವಿಮಾನಯಾನ ಸಚಿವಾಲಯದ ಪ್ರಧಾನ ಕಚೇರಿಯನ್ನು ಸಹ ಮುಚ್ಚಲಾಯಿತು.
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ