ಕೊರೋನಾ ವೈರಸ್​​: ಬೆಂಗಳೂರಿನಲ್ಲಿ 1ರಿಂದ 6ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ರದ್ದು

ಇನ್ನು, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ 1ರಿಂದ 6ನೇ ತರಗತಿವರೆಗಿನ ವಿದ್ಯಾರ್ಥಿಗಳ ಫಲಿತಾಂಶ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಪ್ರಕಟಿಸಲಾಗುತ್ತದೆ. ಹಾಗೆಯೇ 7ರಿಂದ 10ನೇ ತರಗತಿ ಓದುತ್ತಿರುವ ಮಕ್ಕಳಿಗೂ ನಾಳೆಯಿಂದ ಪರೀಕ್ಷಾ ರಜೆ ಘೋಷಣೆ ಮಾಡಲಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  ಬೆಂಗಳೂರು(ಮಾ.12): ಕೊರೋನಾ ವೈರಸ್​​ ಕಾರಣ ನಗರದ ವ್ಯಾಪ್ತಿಯಲ್ಲಿರುವ ಎಲ್ಲಾ ಶಾಲೆಗಳಲ್ಲಿ 1ರಿಂದ 6ನೇ ತರಗತಿ ವಿದ್ಯಾರ್ಥಿಗಳಿ ವಾರ್ಷಿಕ ಪರೀಕ್ಷೆ ಇರುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಈ ಸುತ್ತೋಲೆ ಆದೇಶವೂ ಬೆಂಗಳೂರು ನಗರ, ಬೆಂ.ಉತ್ತರ ಮತ್ತು ಬೆಂ.ದಕ್ಷಿಣ ಸೇರಿದಂತೆ ಗ್ರಾಮಾಂತರ ಜಿಲ್ಲೆಗಳಿಗೆ ಅನ್ವಯಿಸಲಿದೆ ಎಂದು ಇಲಾಖೆ ತಿಳಿಸಿದೆ.

  ಈಗಾಗಲೇ ಬೆಂಗಳೂರು ನಗರ ಮತ್ತು ಗ್ರಾಮಾಂತರ ವ್ಯಾಪ್ತಿಗೆ ಬರುವ ಶಾಲೆಗಳಲ್ಲಿ 1ರಿಂದ 6ನೇ ತರಗತಿವರೆಗಿನ ಮಕ್ಕಳಿಗೆ ಇಂದಿನಿಂದ ಬೇಸಿಗೆ ರಜೆ ನೀಡಲಾಗಿದೆ. ಖುದ್ದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರೇ ಹೀಗೆ ಆದೇಶ ಹೊರಡಿಸಿದ್ದಾರೆ. ರಾಜ್ಯ ಸರ್ಕಾರದ ಈ ಆದೇಶವೂ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗದ ಎಲ್ಲಾ ಶಾಲೆಗಳಿಗೆ ಅನ್ವಯವಾಗಲಿದೆ. ಸರ್ಕಾರಿ ಶಾಲೆಗಳ ಸಹಿತ ಎಲ್ಲಾ ICSE, CBSE ಬೋರ್ಡ್ ಶಾಲೆಗಳಿಗೂ ಅನ್ವಯವಾಗುತ್ತದೆ ಎಂದು ಸುರೇಶ್​​ ಕುಮಾರ್​ ಹೇಳಿದ್ದಾರೆ.

  ಇನ್ನು, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ 1ರಿಂದ 6ನೇ ತರಗತಿವರೆಗಿನ ವಿದ್ಯಾರ್ಥಿಗಳ ಫಲಿತಾಂಶ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಪ್ರಕಟಿಸಲಾಗುತ್ತದೆ. ಹಾಗೆಯೇ 7ರಿಂದ 10ನೇ ತರಗತಿ ಓದುತ್ತಿರುವ ಮಕ್ಕಳಿಗೂ ನಾಳೆಯಿಂದ ಪರೀಕ್ಷಾ ರಜೆ ಘೋಷಣೆ ಮಾಡಲಾಗಿದೆ. ಹಾಗಾಗಿ 7, 8, 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆಗೆ ಮಾತ್ರ ಹಾಜರಾದರೆ ಸಾಕು ಎಂದರು ಸುರೇಶ್ ಕುಮಾರ್.

  ಇದನ್ನೂ ಓದಿ: ಕೊರೋನಾ ವೈರಸ್​​: ಇಂದಿನಿಂದ 1-7ನೇ ತರಗತಿ ಮಕ್ಕಳಿಗೆ ಬೇಸಿಗೆ ರಜೆ; ನಾಳೆಯಿಂದ 8-10 ತರಗತಿ ಮಕ್ಕಳಿಗೆ ಪರೀಕ್ಷಾ ರಜೆ

  ಇನ್ನೊಂದೆಡೆ ಬಿಬಿಎಂಪಿಯೂ ಕೊರೋನಾ ವೈರಸ್​​ ವ್ಯಾಪಕವಾಗಿ ಹರಡುತ್ತಿರುವ ಕಾರಣ ಯಾವುದೇ ಕಾರಣಕ್ಕೂ ಜನ ಒಂದೆಡೆ ಗುಂಪು ಸೇರುವಂತಿಲ್ಲ ಎಂದು ಆದೇಶ ಹೊರಡಿಸಿದೆ. ನಗರದ ಖಾಸಗಿ ಆಸ್ಪತ್ರೆಗಳು, ಬಾರ್‌ ಅಂಡ್‌ ರೆಸ್ಟೋರೆಂಟ್‌, ಹೋಟೆಲ್‌, ಕಲ್ಯಾಣ ಮಂಟಪ, ಚಿತ್ರಮಂದಿರ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಜನ ಒಟ್ಟಾಗಿ ಗುಂಪು ಸೇರಬಾರದು ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಕಟ್ಟುನಿಟ್ಟಿನ ಸುತ್ತೋಲೆ ಹೊರಡಿಸಿದ್ದಾರೆ. ಹಾಗೆಯೇ ಪೊಲೀಸರ ಅನುಮತಿ ಇಲ್ಲದೆ, ಎನ್​​ಒಸಿ ಪ್ರತಿ ಪಡೆಯದೆ ಯಾವುದೇ ಸಾರ್ವಜನಿಕ ಸಭೆಯಗಳನ್ನು ಆಯೋಜಿಸುವಂತಿಲ್ಲ ಎಂದು ನಿಷೇಧ ಹೇರಲಾಗಿದೆ.

  ಜಗತ್ತಿನಾದ್ಯಂತ ತಲ್ಲಣ ಮೂಡಿಸುತ್ತಿರುವ ಕೊರೋನಾ ವೈರಸ್​ ಸೋಂಕು ರಾಜ್ಯದ ಐವರಲ್ಲಿ ಪತ್ತೆಯಾಗಿದೆ. ಸೋಂಕಿತರನ್ನು ಕುಟುಂಬ ಸದಸ್ಯರಿಂದ ಪ್ರತ್ಯೇಕವಾಗಿರಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ರಾಜ್ಯದ ಜನರು ಮುಂಜಾಗೃತ ಕ್ರಮವಾಗಿ ಸೋಂಕು ಹರಡದಂತೆ ಸಹಕರಿಸಬೇಕು ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.
  First published: