Delta Plus| ಡೆಲ್ಟಾ ಫ್ಲಸ್​ ಸೋಂಕು ಮೂರನೇ ಕೊರೋನಾ ಅಲೆ ಸೃಷ್ಟಿಸುತ್ತದೆ ಎನ್ನಲು ಆಧಾರಗಳಿಲ್ಲ; ಐಜಿಐಬಿ ನಿರ್ದೇಶಕ

ಸದ್ಯ 40ಕ್ಕೂ ಹೆಚ್ಚು ಪ್ರಕರಣಗಳು ಭಾರತದಲ್ಲಿ ಕಂಡುಬಂದಿದೆ. ಆದರೆ, ಸದ್ಯಕ್ಕೆ ನಾವು ಡೆಲ್ಟಾ ಪ್ಲಸ್, ಮೂರನೇ ಅಲೆ ಬಗ್ಗೆ ಚಿಂತೆ ಮಾಡುವ ಮೊದಲು, ಎರಡನೇ ಅಲೆಯನ್ನು ಕೊನೆಗೊಳಿಸುವ ಕುರಿತು ಗಮನ ಹರಿಸಬೇಕು ಎಂದು ಐಜಿಐಬಿ ನಿರ್ದೇಶಕ ಡಾ.ಅನುರಾಗ್ ಅಗರ್ವಾಲ್ ಹೇಳಿದ್ದಾರೆ.

ಡೆಲ್ಟಾ ರೂಪಾಂತರ.

ಡೆಲ್ಟಾ ರೂಪಾಂತರ.

  • Share this:
    ನವ ದೆಹಲಿ (ಜೂನ್.24); ದೇಶದಲ್ಲಿ ಕೊರೋನಾ ಎರಡನೇ ಅಲೆ ಸೃಷ್ಟಿ ಮಾಡಿರುವ ಸಂಕಷ್ಟ ಅಷ್ಟಿಷ್ಟಲ್ಲ. ಆದರೂ, ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕು ಕಡಿಮೆಯಾಗುತ್ತಿದ್ದು, ಜನ ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಾರೆ. ಜನ ಜೀವನ ಯಥಾಸ್ಥಿತಿಗೆ ಮರಳುತ್ತಿದೆ. ಈ ನಡುವೆ ಹೊಸದಾಗಿ ಪತ್ತೆ ಡೆಲ್ಟಾ ಫ್ಲಸ್​ ರೂಪಾಂತರಿ ವೈರಸ್​ ಮಾರಕವಾಗುವ ಸೂಚನೆ ನೀಡಿದೆ. ದೇಶದಲ್ಲಿ ಪ್ರಸ್ತುತ 40ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿದ್ದು, ಇದು ಕೊರೋನಾ ಮೂರನೇ ಅಲೆಗೆ ಕಾರಣವಾಗುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ, ಈ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ಜಿನೋಮ್ ತಜ್ಮರು ಡೆಲ್ಟಾ ಪ್ಲಸ್ ರೂಪಾಂತರಿ ಮೂರನೇ ಅಲೆಗೆ ಕಾರಣವಾಗಬಹುದು ಎಂಬುದಕ್ಕೆ ಯಾವುದೇ ಸಾಕ್ಷಿ, ಆಧಾರವಿಲ್ಲ ಎನ್ನುವ ಮೂಲಕ ಆತಂಕವನ್ನು ದೂರ ಮಾಡಿದ್ಧಾರೆ.

    Institute of Genomics and Integrative Biology (ಐಜಿಐಬಿ) ನಿರ್ದೇಶಕ ಡಾ.ಅನುರಾಗ್ ಅಗರ್ವಾಲ್ ಈ ಬಗ್ಗೆ ಮಾಹಿತಿ ನೀಡಿದ್ದು, "ಈಗ ಕಾಣಿಸಿಕೊಂಡಿರುವ ಡೆಲ್ಟಾ ಪ್ಲಸ್​ ರೂಪಾಂತರಿ ಕೊರೋನಾ ಮೂರನೇ ಅಲೆಯೊಂದಿಗೆ ಯಾವುದೇ ಸಂಬಂಧವನ್ನು ಹೊಂದಿಲ್ಲ. ಇದು ಕೊರೋನಾ 3ನೇ ಅಲೆಯ ತೀವ್ರತೆಗೆ ಕಾರಣವಾಗುತ್ತದೆ ಎನ್ನುವುದಕ್ಕೆ ಯಾವುದೇ ಪುರಾವೆಗಳಿಲ್ಲ" ಎಂದಿದ್ದಾರೆ. ಜೊತೆಗೆ ಕೊರೊನಾ ಎರಡನೇ ಅಲೆಯಲ್ಲಿ ಎಚ್ಚರಿಕೆ ತೆಗೆದುಕೊಳ್ಳುವುದನ್ನು ನಿಲ್ಲಿಸದಂತೆ ಸಲಹೆ ನೀಡಿದ್ದಾರೆ.

    "ನಮ್ಮ ಸಂಸ್ಥೆ ಜೂನ್ ತಿಂಗಳಲ್ಲಿ ಮಹಾರಾಷ್ಟ್ರದಿಂದ 3,500 ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷೆ ನಡೆಸಿದೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಈ ಮಾದರಿಗಳನ್ನು ಕಲೆಕ್ಟ್ ಮಾಡಲಾಗಿತ್ತು. ಈ ಡೆಲ್ಟಾ ಪ್ಲಸ್ ರೂಪಾಂತರಿ ಪ್ರಕರಣಗಳು ಹೆಚ್ಚಾಗುತ್ತಿವೆ. ಆದರೂ, ಇವುಗಳ ಸಂಖ್ಯೆ ಶೇಕಡಾಕ್ಕಿಂತ ಒಂದಕ್ಕಿಂತ ಕಡಿಮೆ ಇರುತ್ತವೆ" ಎಂದು ಡಾ.ಅನುರಾಗ್ ಅಗರ್ವಾಲ್ ಹೇಳಿದ್ದಾರೆ.

    ಈ ರೂಪಾಂತರಿ ಪ್ರಕರಣಗಳು ಹೆಚ್ಚಿರುವ ಕಡೆಗಳಲ್ಲಿಯೂ ಅವುಗಳು ಹೆಚ್ಚು ಎಂದು ಹೇಳಲು ಸಾಧ್ಯವಿಲ್ಲ. ದೇಶದಲ್ಲಿ ಪದೆಸ್ತುತ ಪರಿಸ್ಥಿತಿ ಸ್ಥಿರವಾಗಿ ಕಾಣುತ್ತಿವೆ ಎಂದು ಡಾ ಅಗರ್ವಾಲ್ ಭರವಸೆ ವ್ಯಕ್ತಪಡಿಸಿದ್ದಾರೆ.

    ಇದನ್ನೂ ಓದಿ: Jagan Mohan Reddy| ಸಿಎಂ ಜಗನ್ ಮೋಹನ್ ರೆಡ್ಡಿ ವಿರುದ್ಧ 11 ಕೇಸ್ ದಾಖಲಿಸಿದ ಆಂಧ್ರಪ್ರದೇಶ ಹೈಕೋರ್ಟ್​

    “ಸದ್ಯ 40ಕ್ಕೂ ಹೆಚ್ಚು ಪ್ರಕರಣಗಳು ಭಾರತದಲ್ಲಿ ಕಂಡುಬಂದಿದೆ. ಆದರೆ, ಸದ್ಯಕ್ಕೆ ನಾವು ಡೆಲ್ಟಾ ಪ್ಲಸ್, ಮೂರನೇ ಅಲೆ ಬಗ್ಗೆ ಚಿಂತೆ ಮಾಡುವ ಮೊದಲು, ಎರಡನೇ ಅಲೆಯನ್ನು ಕೊನೆಗೊಳಿಸುವ ಕುರಿತು ಗಮನ ಹರಿಸಬೇಕು" ಎಂದು ಹೇಳಿದ್ದಾರೆ.

    ದೇಶದಲ್ಲಿ ಮಹಾರಾಷ್ಟ್ರ, ಕೇರಳ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಪ್ರಕರಣಗಳು​ ಪತ್ತೆಯಾಗಿದ್ದವು. ಮೈಸೂರಿನಲ್ಲಿ ಮತ್ತು ಬೆಂಗಳೂರಿನಲ್ಲಿ ಡೆಲ್ಟಾ ಪ್ಲಸ್​ ರೂಪಾಂತರಿ ಪ್ರಕರಣ ಪತ್ತೆಯಾಗಿವೆ ಎಂದು ಬುಧವಾರ ಆರೋಗ್ಯ ಸಚಿವ ಡಾ. ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

    ಇದನ್ನೂ ಓದಿ: Delta Plus Variant in India| ಮಹಾರಾಷ್ಟ್ರ, ಕೇರಳ, ಮಧ್ಯಪ್ರದೇಶದಲ್ಲಿ ಹೆಚ್ಚುತ್ತಿರುವ ಡೆಲ್ಟಾ ಪ್ಲಸ್ ಪ್ರಕರಣಗಳು; ಇವು ಮೂರನೇ ಅಲೆಯ ಸೂಚನೆಯೇ?

    ’ಡೆಲ್ಟಾ ಪ್ಲಸ್ ಕೇಸ್ ಬಗ್ಗೆ ಸೂಕ್ಷ್ಮವಾಗಿ ಗಮನ ಹರಿಸುತ್ತಿದ್ದೇವೆ. ಜಿಲ್ಲೆಯಲ್ಲಿ ಜಿನೋಮ್ ಲ್ಯಾಬ್ ಗಳನ್ನು ಕೂಡಾ ಸೆಟಪ್ ಮಾಡಲಾಗುತ್ತಿದೆ. ರಾಜ್ಯದಲ್ಲಿ 6 ಜಿನೋಮ್ ಲ್ಯಾಬ್ ಮಾಡಲು ನಿರ್ಧಾರ ಮಾಡಿದ್ದೇವೆ. ಡೆಲ್ಟಾ ಪ್ಲಸ್ ಬಗ್ಗೆ ನಿರಂತರವಾಗಿ ಗಮನಹರಿಸಲಾಗುತ್ತಿದೆ’ ಎಂದು ಮಾಹಿತಿ ನೀಡಿದ್ದಾರೆ.

    ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
    Published by:MAshok Kumar
    First published: