• Home
  • »
  • News
  • »
  • coronavirus-latest-news
  • »
  • ಬೆಂಗಳೂರಿನಲ್ಲಿ ಕೊರೋನಾ ಪತ್ತೆಯಾಗಿಲ್ಲ, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ; ಶ್ರೀರಾಮುಲು

ಬೆಂಗಳೂರಿನಲ್ಲಿ ಕೊರೋನಾ ಪತ್ತೆಯಾಗಿಲ್ಲ, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ; ಶ್ರೀರಾಮುಲು

ಆರೋಗ್ಯ ಸಚಿವ ಶ್ರೀರಾಮುಲು

ಆರೋಗ್ಯ ಸಚಿವ ಶ್ರೀರಾಮುಲು

ವಿಶ್ವದೆಲ್ಲೆಡೆ ಭೀತಿ ಹುಟ್ಟಿಸಿರುವ ಮಾರಣಾಂತಿಕ ಕೊರೋನಾ ವೈರಸ್ ಭಾರತದಲ್ಲೂ ಅನೇಕ ಕಡೆಗಳಲ್ಲಿ ಭಯದ ವಾತಾವರಣ ಉಂಟು ಮಾಡಿದೆ. ಈ ನಡುವೆ ಬೆಂಗಳೂರಿನಲ್ಲಿ ಈ ವೈರಸ್ ಪತ್ತೆಯಾಗಿದೆ ಎಂಬಂತಹ ಸುದ್ದಿಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿತ್ತು. ಪರಿಣಾಮ ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದರು.

ಮುಂದೆ ಓದಿ ...
  • Share this:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ವೈರಸ್ ಪತ್ತೆಯಾಗಿದೆ ಎಂದು ಕೆಲವು ಸುದ್ದಿ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಡುತ್ತಿದ್ದು, ಇವು ಸತ್ಯಕ್ಕೆ ದೂರವಾದ ಮಾತು ಎಂದು ಆರೋಗ್ಯ ಸಚಿವ ಬಿ ಶ್ರೀರಾಮುಲು ಟ್ವಿಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.


ವಿಶ್ವದೆಲ್ಲೆಡೆ ಭೀತಿ ಹುಟ್ಟಿಸಿರುವ ಮಾರಣಾಂತಿಕ ಕೊರೋನಾ ವೈರಸ್ ಭಾರತದಲ್ಲೂ ಅನೇಕ ಕಡೆಗಳಲ್ಲಿ ಭಯದ ವಾತಾವರಣ ಉಂಟು ಮಾಡಿದೆ. ಈ ನಡುವೆ ಬೆಂಗಳೂರಿನಲ್ಲಿ ಈ ವೈರಸ್ ಪತ್ತೆಯಾಗಿದೆ ಎಂಬಂತಹ ಸುದ್ದಿಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿತ್ತು. ಪರಿಣಾಮ ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದರು. ಆದರೆ, ಈ ಕುರಿತು ಶ್ರೀರಾಮುಲು ಇಂದು ಟ್ವಟರ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.



“ಬೆಂಗಳೂರಿನಲ್ಲಿ ಕೋವಿಡ್ 19 ಅಥವಾ ಕೊರೋನಾ ವೈರಸ್ ಪತ್ತೆಯಾಗಿದೆ ಎಂದು ಕೆಲವೊಂದು ಮಾಧ್ಯಮ ಹಾಗೂ ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು. ಕರ್ನಾಟಕ ಸರ್ಕಾರ ಹಾಗೂ ಆರೋಗ್ಯ ಇಲಾಖೆಯು ವೈರಸ್ ಹರಡದಂತೆ ಎಲ್ಲಾ ರೀತಿಯ ಸಮರ್ಪಕ ಕ್ರಮಗಳನ್ನು ಕೈಗೊಂಡಿದೆ. ನಾಗರೀಕರು ಯಾವುದೇ ಆತಂಕಕ್ಕೆ ಒಳಗಾಗಬಾರದು” ಎಂದು ತಿಳಿಸಿದ್ದಾರೆ.


ಅಲ್ಲದೆ, ಮತ್ತೊಂದು ಟ್ವಿಟ್ನಲ್ಲಿ, “ಆರೋಗ್ಯ ಮಹಾ ನಿರ್ದೇಶನಾಲಯ, ಭಾರತ ಸರ್ಕಾರದ ನಿರ್ದೇಶನದಂತೆ, ಕೆಮ್ಮು, ಶೀತ, ನೆಗಡಿ ಹಾಗೂ ಉಸಿರಾಟದಲ್ಲಿ ತೊಂದರೆ ಇದ್ದು ಮತ್ತು ಕಳೆದ 14 ದಿನಗಳಲ್ಲಿ #COVID2019 ಬಾಧಿತ ದೇಶಗಳಿಗೆ ಪ್ರಯಾಣ ಮಾಡಿರುವ ಹಿನ್ನೆಲೆ ಅಥವಾ #COVID2019 ಸೋಂಕಿತರ ಸಂಪರ್ಕಕ್ಕೆ ಬಂದಿದ್ದಲ್ಲಿ ಮಾತ್ರ ಬೇಕಾದ ಅಗತ್ಯ ರಕ್ತ ಪರೀಕ್ಷೆ ಮಾಡಲಾಗುತ್ತದೆ.


ಮೇಲಿನ ಮಾನದಂಡಗಳಲ್ಲಿ ಬರುವವರು, 104 ಸಹಾಯವಾಣಿಗೆ ಕರೆ ಮಾಡಿ ತಮ್ಮ ರಕ್ತ ಪರೀಕ್ಷೆ ಮಾಡಿಸಿಕೊಳ್ಳಿ. ಉಳಿದವರು ಯಾವುದೇ ಭೀತಿಗೆ ಒಳಗಾಗದೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ” ಎಂದು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ : ಕೊರೋನಾ ಎಫೆಕ್ಟ್​; ಗಲ್ಫ್​ ಯುದ್ಧದ ನಂತರ ಮೊದಲ ಬಾರಿಗೆ ಶೇ.30ರಷ್ಟು ತೈಲ ಬೆಲೆ ಇಳಿಸಿರುವ ಸೌದಿ ಅರೇಬಿಯಾ

Published by:MAshok Kumar
First published: