ಸಚಿವ ರಮೇಶ್ ಜಾರಕಿಹೊಳಿ ಸ್ವಕ್ಷೇತ್ರದಲ್ಲಿ ಕೊರೋನಾ ವಾರಿಯರ್ಸ್​​​ಗೆ ಸಿಗುತ್ತಿಲ್ಲ ಸಂಬಳ: ಸೋಂಕಿತ ಸಿಬ್ಬಂದಿಯಿಂದ ಆತ್ಮಹತ್ಯೆ ಬೆದರಿಕೆ​​​

ಗುತ್ತಿಗೆ ಆಧಾರದ ಮೇಲೆ ಗೋಕಾಕ್ ತಾಲೂಕು ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದು ಸಿಬ್ಬಂದಿಯೊಬ್ಬರಿಗೆ ಕೊರೋನಾ ಸೋಂಕು ಧೃಢ ಪಟ್ಟಿದೆ. ಸಿಬ್ಬಂದಿಯನ್ನು ಗೋಕಾಕ್ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಡೀ ಕುಟುಂಬ ಆತನ ಅವಲಂಬನೆ ಮೇಲೆ ಜೀವನ ನಡೆಸುತ್ತಿದೆ. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು, ಕುಟುಂಬ ನಿರ್ವಹಣೆ ಕಷ್ಟಕರವಾಗಿದೆ ಎಂದು ನೊಂದ ನೌಕರರು ಕಷ್ಟವನ್ನು ಹೇಳಿಕೊಂಡಿದ್ದಾರೆ.

news18-kannada
Updated:August 4, 2020, 3:09 PM IST
ಸಚಿವ ರಮೇಶ್ ಜಾರಕಿಹೊಳಿ ಸ್ವಕ್ಷೇತ್ರದಲ್ಲಿ ಕೊರೋನಾ ವಾರಿಯರ್ಸ್​​​ಗೆ ಸಿಗುತ್ತಿಲ್ಲ ಸಂಬಳ: ಸೋಂಕಿತ ಸಿಬ್ಬಂದಿಯಿಂದ ಆತ್ಮಹತ್ಯೆ ಬೆದರಿಕೆ​​​
ಸಾಂದರ್ಭಿಕ ಚಿತ್ರ
  • Share this:
ಬೆಳಗಾವಿ(ಆ.4): ದೇಶದಲ್ಲಿ ಕೊರೋನಾ ವೈರಸ್ ಸಂಕಷ್ಟ ಮುಗಿಯವ ಯಾವುದೇ  ಲಕ್ಷಣಗಳು ಕಾಣಿಸುತ್ತಿಲ್ಲ. ರಾಜ್ಯದಲ್ಲಿ ಪ್ರತಿನಿತ್ಯ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಈ ನಡುವೆ ವೈದ್ಯಕೀಯ ಸಿಬ್ಬಂದಿ ತಮ್ಮ ಜೀವನ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ಆದರೆ ಕೊರೊನಾ ವಾರಿಯರ್ಸ್​​ಗೆ ಯಾವುದೇ ಸೇವಾ ಭದ್ರತೆ ಇಲ್ಲದಂತಾಗಿದೆ. ಅದು ಬೆಳಗಾವಿ ಜಿಲ್ಲೆಯ ಪ್ರಭಾವಿ ಸಚಿವರ ಸ್ವಕ್ಷೇತ್ರದಲ್ಲಿ ಕೊರೋನಾ ವಾರಿಯರ್ಸ್ ಗೆ ಕಳೆದ 6 ತಿಂಗಳಿಂದ ವೇತನ ಪಾವತಿಯಾಗಿಲ್ಲ.

ಹೌದು, ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ಇಂದು 40ಕ್ಕೂ ಹೆಚ್ಚು ಗುತ್ತಿಗೆ ಆಧಾರದ ನೌಕರರು ತಾಲೂಕು ಆಸ್ಪತ್ರೆಯ ಮುಂಭಾಗದಲ್ಲಿ ಧರಣಿ ಮಾಡಿದ್ದರು. ಕಳೆದ 6 ತಿಂಗಳಿಂದ ವೇತನ ಪಾವತಿಯಾಗಿಲ್ಲ ಎಂಬುದು ಸಿಬ್ಬಂದಿ ಆರೋಪವಾಗಿದೆ. ಸಂಕಷ್ಟದ ಸಂದರ್ಭದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡೋ ಸಿಬ್ಬಂದಿಗೆ ಇದೀಗ ಆರ್ಥಿಕ ಸಂಕಷ್ಟ ಎದುರಾಗಿದೆ.

ಗೋಕಾಕ್ ಆಸ್ಪತ್ರೆಯಲ್ಲಿ 40ಕ್ಕೂ ಹೆಚ್ಚು ಜನ ಹೊರ ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿದ್ದಾರೆ. ಕಳೆದ 3 ವರ್ಷಗಳಿಂದ ಗೋಕಾಕ್ ತಾಲೂಕು ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಮೊದಲು ಇದ್ದ ಗುತ್ತಿಗೆದಾರರು ಎರಡು ವರ್ಷದ ಪಿಎಫ್ ಹಣ ಪಾವತಿ ಮಾಡದೇ ಬಿಟ್ಟು ಹೋಗಿದ್ದಾರೆ. 6 ತಿಂಗಳ ಹೊಸಬರಿಗೆ ಟೆಂಡರ್ ಆಗಿದ್ದು, ಕಳೆದ 6ತಿಂಗಳಿಂದ ಸಂಬಳ ನೀಡಿಲ್ಲ. ಗುತ್ತಿಗೆದಾರ ಸಿಬ್ಬಂದಿ ಅಕೌಂಟ್ ಗೆ ಪಿಎಫ್ ಹಣ ಸಹ ಪಾವತಿ ಮಾಡಿಲ್ಲ.

ಕೊಡಗಿನಲ್ಲಿ ಭಾರೀ ಮಳೆ: ಭೂಕುಸಿತ ಆತಂಕದಲ್ಲಿ ಸ್ಥಳೀಯರು

ಗುತ್ತಿಗೆ ಆಧಾರದ ಮೇಲೆ ಗೋಕಾಕ್ ತಾಲೂಕು ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದು ಸಿಬ್ಬಂದಿಯೊಬ್ಬರಿಗೆ ಕೊರೋನಾ ಸೋಂಕು ಧೃಢ ಪಟ್ಟಿದೆ. ಸಿಬ್ಬಂದಿಯನ್ನು ಗೋಕಾಕ್ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಡೀ ಕುಟುಂಬ ಆತನ ಅವಲಂಬನೆ ಮೇಲೆ ಜೀವನ ನಡೆಸುತ್ತಿದೆ. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು, ಕುಟುಂಬ ನಿರ್ವಹಣೆ ಕಷ್ಟಕರವಾಗಿದೆ ಎಂದು ನೊಂದ ನೌಕರರು ಕಷ್ಟವನ್ನು ಹೇಳಿಕೊಂಡಿದ್ದಾರೆ.

ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಸಿಬ್ಬಂದಿ ಆಸ್ಪತ್ರೆಯ ಹೊರಗೆ ಧರಣಿ ಮಾಡಿ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರ ಹಾಕಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ಕಟ್ಟಡದ ಮೇಲಿಂದ ಸೋಂಕಿತ ನೌಕರರ ಜಿಗಿದ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆಯನ್ನೂ ಹಾಕಿದ್ದಾನೆ. ಆದರೆ ಸ್ಥಳೀಯರು ಆತನ ಸಮಸ್ಯೆ ಶೀಘ್ರದಲ್ಲಿ ಇತ್ಯರ್ಥವಾಗಲಿದೆ ಎನ್ನುವ ಭರವಸೆ ನೀಡಿದ್ದಾರೆ.
ಸಚಿವ ರಮೇಶ ಜಾರಕಿಹೊಳಿ ಸ್ವಕ್ಷೇತ್ರದಲ್ಲಿಯೇ ತಾಲೂಕು ಆಸ್ಪತ್ರೆಯ ಸಿಬ್ಬಂದಿಗೆ ಯಾವುದೇ ಸೇವಾ ಭದ್ರತೆ ಇಲ್ಲ. ಜತೆಗೆ ವೇತನ ಸಹ ಪಾವತಿಯಾಗಿಲ್ಲ. ಕೊರೋನಾ ಸಂದರ್ಭದಲ್ಲಿ ಕೆಲಸ ಮಾಡುವ ಸಿಬ್ಭಂದಿಗೆ ಕೊರೋನಾ ವಾರಿಯರ್ಸ್ ಎಂದೇ ಹೇಳುತ್ತಾರೆ. ಆದರೆ ಇಂತಹ ಸಿಬ್ಬಂದಿಗೆ ಯಾವುದೇ ಸೌಲಭ್ಯ ನೀಡದೆ ಇರುವುದು ಸದ್ಯ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
Published by: Latha CG
First published: August 4, 2020, 3:09 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading