ಓಡಿಶಾ ಸಿಎಂ ನವೀನ್ ಪಟ್ನಾಯಕ್
ನವದೆಹಲಿ(ಏ.27): ಮಾರಕ ಕೊರೋನಾ ವೈರಸ್ ವಿರುದ್ಧ ವೈದ್ಯರು ಮತ್ತು ಪೊಲೀಸರಂತೆಯೇ ಹೋರಾಡುತ್ತಾ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ 15 ಲಕ್ಷ ರೂ. ಜೀವ ವಿಮೆ ಸೌಲಭ್ಯವನ್ನು ಒರಿಸ್ಸಾ ಸಿಎಂ ನವೀನ್ ಪಟ್ನಾಯಕ್ ಘೋಷಣೆ ಮಾಡಿದ್ದಾರೆ. ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಬೆನ್ನಲ್ಲೀಗ ನವೀನ್ ಪಟ್ನಾಯಕ್ ಇಂತಹ ಮಹತ್ವದ ಯೋಜನೆ ಪ್ರಕಟಿಸಿದ್ದಾರೆ.
ಈ ಹಿಂದೆಯಷ್ಟೇ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್, ಲಾಕ್ಡೌನ್ ಅಂತಹ ಕಠಿಣ ಸಂದರ್ಭದಲ್ಲಿ ತಮ್ಮ ಜೀವವನ್ನು ಲೆಕ್ಕಿಸದೆ ಕೆಲಸ ಮಾಡುತ್ತಿರುವ ಪತ್ರಕರ್ತರಿಗೆ 10 ಲಕ್ಷ ಜೀವ ವಿಮೆ ಘೋಷಿಸಿದ್ದರು. ಕೋವಿಡ್-19 ವಿರುದ್ಧದ ಹೋರಾಟದ ಸಂದರ್ಭದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾನ್ಯತೆ ಪಡೆದಿರುವ ಎಲ್ಲಾ ಮಾಧ್ಯಮ ವ್ಯಕ್ತಿಗಳಿಗೆ ಜೂನ್ 30 ರವರೆಗೆ 10 ಲಕ್ಷ ರೂ.ಗಳ ಜೀವ ವಿಮಾ ರಕ್ಷಣೆಯ ಸೌಲಭ್ಯವನ್ನು ನೀಡಲಾಗುವುದು ಎಂದು ತಿಳಿಸಿದ್ದರು.
ಭಾರತದಲ್ಲಿ ಕೊರೋನಾ ವೈರಸ್ ದಾಳಿಗೆ ಜನರು ತತ್ತರಿಸಿದ್ದಾರೆ. ದೇಶದ ಇದುವರೆಗಿನ ಸೋಂಕಿತರ ಪ್ರಮಾಣ ಹೆಚ್ಚಾಗಿರುವ ರಾಜ್ಯಗಳಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ. ಇಂತಹ ಮಹಾರಾಷ್ಟ್ರದ ಮುಂಬೈವೊಂದರಲ್ಲೇ ವಿವಿಧ ಮಾಧ್ಯಮ ಸಂಸ್ಥೆಗಳ 53 ಪತ್ರಕರ್ತರಿಗೆ ಸೋಂಕು ಕಾಣಿಸಿಕೊಂಡಿತ್ತು.
ಇದನ್ನೂ ಓದಿ: ‘ಬಡವರಿಗೆ 10,000 ಆಹಾರ ಕಿಟ್ ನೀಡುತ್ತಿದ್ದೇನೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿರುವ ರೇಣುಕಾಚಾರ್ಯ‘- ಕಾಂಗ್ರೆಸ್ ಮಾಜಿ ಶಾಸಕ
ಇದಾದ ನಂತರ ಚೆನ್ನೈನಲ್ಲೂ 12 ಮಂದಿ ಪತ್ರಕರ್ತರಿಗೆ ಸೋಂಕು ಕಾಣಿಸಿಕೊಂಡಿತ್ತು. ಇವರನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ಕೊರೋನಾ ಚಿಕಿತ್ಸೆ ನೀಡಲಾಗುತ್ತಿದೆ. ಅದೇ ರೀತಿಯಲ್ಲಿ ಕರ್ನಾಕದಲ್ಲೂ ಓರ್ವ ಪತ್ರಕರ್ತರಿಗೆ ಕೊರೋನಾ ಬಂದಿದೆ.
First published:
April 27, 2020, 5:02 PM IST