HOME » NEWS » Coronavirus-latest-news » ON COVID 19 DEATHS GDP FIGURES AND BORDER ROW WITH CHINA RAHUL SAYS BJP HAS INSTITUTIONALISED LIES GNR

‘ಕೋವಿಡ್​​-19, ಚೀನಾ ಗಡಿ ವಿವಾದ, ಜಿಡಿಪಿ ವಿಚಾರದಲ್ಲಿ ಸುಳ್ಳು ಹೇಳುತ್ತಿರುವ ಬಿಜೆಪಿ‘ - ರಾಹುಲ್​​ ಗಾಂಧಿ

ಭಾರತ ಮತ್ತು ಚೀನಾ ಗಡಿಯಲ್ಲಿ ಉದ್ವಿಗ್ನತೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತೆಗೆದುಕೊಂಡ ತಪ್ಪು ನಿರ್ಧಾಗಳನ್ನು ವಿರೋಧ ಪಕ್ಷದ ನಾಯಕನಾಗಿ ರಾಹುಲ್ ಗಾಂಧಿ ಮೊದಲಿನಿಂದಲೂ ಪ್ರಶ್ನಿಸುತ್ತಾ ಬರುತ್ತಿದ್ದಾರೆ. ಇತ್ತೀಚೆಗೆ ಗಡಿಯಲ್ಲಿ ಎರಡೂ ದೇಶಗಳ ಸೈನಿಕರ ನಡುವೆ ಸಂಘರ್ಷ ಶುರುವಾದ ಮೇಲೆ ಕೇಂದ್ರ ಸರ್ಕಾರದ ಮೇಲೆ ಅವರು ಖಡಕ್ ಪ್ರಶ್ನೆಗಳ ಮಳೆ ಸುರಿಯುತ್ತಿದ್ದಾರೆ‌.

news18-kannada
Updated:July 19, 2020, 7:13 PM IST
‘ಕೋವಿಡ್​​-19, ಚೀನಾ ಗಡಿ ವಿವಾದ, ಜಿಡಿಪಿ ವಿಚಾರದಲ್ಲಿ ಸುಳ್ಳು ಹೇಳುತ್ತಿರುವ ಬಿಜೆಪಿ‘ - ರಾಹುಲ್​​ ಗಾಂಧಿ
ರಾಹುಲ್ ಗಾಂಧಿ
  • Share this:
ಬೆಂಗಳೂರು(ಜು.19): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿರುದ್ಧ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್​​ನ ಮಾಜಿ ಅಧ್ಯಕ್ಷ ರಾಹುಲ್​​ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಮಾರಕ ಕೊರೋನಾ ವೈರಸ್​​​ ಮತ್ತು ಒಟ್ಟು ದೇಶಿಯ ಉತ್ಪಾದನೆ(ಜಿಡಿಪಿ) ಸೇರಿದಂತೆ ಭಾರತ-ಚೀನಾ ಗಡಿ ವಿಚಾರದಲ್ಲಿ ಬಿಜೆಪಿ ವ್ಯವಸ್ಥಿತವಾಗಿ ಸುಳ್ಳು ಹೇಳುತ್ತಿದೆ ಎಂದು ರಾಹುಲ್​​ ಆರೋಪಿಸಿದ್ದಾರೆ.

ಈ ಸಂಬಂಧ ಟ್ವೀಟ್​​ ಮಾಡಿರುವ ರಾಹುಲ್​​ ಗಾಂಧಿ ಬಿಜೆಪಿ ಮೇಲೆ ಹೀಗೆ ಗಂಭೀರ ಆರೋಪ ಮಾಡಿದ್ದಾರೆ. ಭಾರತೀಯ ಜನತಾ ಪಕ್ಷವೂ ಜನರಿಗೆ ಸುಳ್ಳು ಹೇಳುವುದನ್ನು ಕರಗತ ಮಾಡಿಕೊಂಡಿದೆ. ಕೋವಿಡ್​​​-19 ಸಾವಿನ ಸಂಖ್ಯೆ ಮತ್ತು ಜಿಡಿಪಿ ವಿಚಾರದಲ್ಲಿ ಸುಳ್ಳು ಹೇಳುತ್ತಿದೆ ಎಂದು ಟ್ವೀಟ್​​ನಲ್ಲಿ ಬರೆದುಕೊಂಡಿದ್ದಾರೆ.
ಇನ್ನು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜಿಡಿಪಿ ವಿಚಾರದಲ್ಲೂ ಹೊಸ ಲೆಕ್ಕಾಚಾರ ವಿಧಾನಗಳನ್ನು ಅನುಸರಿಸುತ್ತಿದೆ. ಹಾಗೆಯೇ ಮಾಧ್ಯಮಗಳಿಗೂ ಬೆದರಿಕೆ ಹಾಕುವ ಮೂಲಕ ಚೀನಾ ಆಕ್ರಮಣಶೀಲತೆ ತೋರಿಸುತ್ತಿದೆ. ಈ ಭ್ರಮೆಗೆ ಭಾರತ ಮುಂದೊಂದು ದಿನ ಬೆಲೆ ತೆರಬೇಕಾಗುತ್ತದೆ ಎಂದು ಟ್ವೀಟ್​​ ಮೂಲಕ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಭಾರತ ಮತ್ತು ಚೀನಾ ಗಡಿಯಲ್ಲಿ ಉದ್ವಿಗ್ನತೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತೆಗೆದುಕೊಂಡ ತಪ್ಪು ನಿರ್ಧಾಗಳನ್ನು ವಿರೋಧ ಪಕ್ಷದ ನಾಯಕನಾಗಿ ರಾಹುಲ್ ಗಾಂಧಿ ಮೊದಲಿನಿಂದಲೂ ಪ್ರಶ್ನಿಸುತ್ತಾ ಬರುತ್ತಿದ್ದಾರೆ. ಇತ್ತೀಚೆಗೆ ಗಡಿಯಲ್ಲಿ ಎರಡೂ ದೇಶಗಳ ಸೈನಿಕರ ನಡುವೆ ಸಂಘರ್ಷ ಶುರುವಾದ ಮೇಲೆ ಕೇಂದ್ರ ಸರ್ಕಾರದ ಮೇಲೆ ಅವರು ಖಡಕ್ ಪ್ರಶ್ನೆಗಳ ಮಳೆ ಸುರಿಯುತ್ತಿದ್ದಾರೆ‌.

ಇದನ್ನೂ ಓದಿ: ರಾಜಸ್ಥಾನದಿಂದ ದಿಢೀರ್ ಕಾಣೆಯಾದ ಸಚಿನ್ ಪೈಲಟ್‌ ಬಣದ 18 ಶಾಸಕರು; ‌ಕರ್ನಾಟಕಕ್ಕೆ ಆಗಮಿಸಿರುವ ಶಂಕೆ?

ಈ ಹಿಂದೆಯೂ ನಮ್ಮ ನಿಶಸ್ತ್ರ ಸೈನಿಕರನ್ನು ಕೊಲ್ಲಲು ಚೀನಾಗೆ ಎಷ್ಟು ಧೈರ್ಯ? ಮತ್ತು ಸೈನಿಕರನ್ನು ನಿಶಸ್ತ್ರವಾಗಿ ಹುತಾತ್ಮರಾಗಲು ಕಳುಹಿಸಿದ್ದೇಕೆ? ಎಂಬ, ಪ್ರಮುಖ ಪ್ರಶ್ನೆಗಳನ್ನು ಎತ್ತಿದ್ದರು. "ಭಾರತ -ಚೀನಾ ಗಡಿಯಲ್ಲಿ ಇಷ್ಟೆಲ್ಲಾ ಆಗುತ್ತಿದ್ದರೂ ಪ್ರಧಾನಿ ಮೋದಿ ಮೌನವಾಗಿರುವುದು ಏಕೆ? ಮೋದಿ ವಾಸ್ತವವನ್ನು ಏಕೆ ಮುಚ್ಚಿಡುತ್ತಿದ್ದಾರೆ? ಆಗಿದ್ದು ಆಯ್ತು, ಈಗ ಏನಾಗುತ್ತಿದೆ ಎಂಬುದನ್ನು ಹೇಳಿ. ನಮ್ಮ ಸೈನಿಕರನ್ನು ಹತ್ಯೆ ಮಾಡಲು ಚೀನಾಕ್ಕೆ ಎಷ್ಟು ಧೈರ್ಯ? ನಮ್ಮ ಜಾಗವನ್ನು ವಶಪಡಿಸಿಕೊಳ್ಳಲು ಚೀನಾಕ್ಕೆ ಎಷ್ಟು ಧೈರ್ಯ? ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಶ್ನೆ ಮಾಡಿದ್ದಾರೆ.
Published by: Ganesh Nachikethu
First published: July 19, 2020, 7:11 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories