ಬಿಜೆಪಿಯಲ್ಲಿ ಮತ್ತೆ ಭಿನ್ನಮತೀಯರ ಕಹಳೆ; ಕೊರೋನಾ ಸಂಕಷ್ಟದಲ್ಲೂ ಬಿಎಸ್‌ವೈ ಸ್ಥಾನಕ್ಕೆ ಸಂಚಕಾರ?

ಉಮೇಶ್ ಕತ್ತಿ ಉತ್ತರ ಕರ್ನಾಟಕದ ಪ್ರಬಲ ನಾಯಕರಲ್ಲಿ ಒಬ್ಬರು, ಬಸನಗೌಡ ಪಾಟೀಲ್ ಈ ಹಿಂದೆ ಕೇಂದ್ರ ಸಂಪುಟದಲ್ಲಿ ಸಚಿವರಾಗಿ ಕೆಲಸ ಮಾಡಿದ್ದ ಹಿರಿಯ ವ್ಯಕ್ತಿ. ಇನ್ನೂ ಪ್ರಬಲ ಪಂಚಮ ಸಾಲಿ ಲಿಂಗಾಯತ ಕೋಮಿಗೆ ಸೇರಿರುವ ಮಾಜಿ ಸಚಿವ ಮುರುಗೇಶ್ ನಿರಾಣಿ ಸೇರಿದಂತೆ ಹಲವಾರು ನಾಯಕರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ.

news18-kannada
Updated:May 29, 2020, 9:53 AM IST
ಬಿಜೆಪಿಯಲ್ಲಿ ಮತ್ತೆ ಭಿನ್ನಮತೀಯರ ಕಹಳೆ; ಕೊರೋನಾ ಸಂಕಷ್ಟದಲ್ಲೂ ಬಿಎಸ್‌ವೈ ಸ್ಥಾನಕ್ಕೆ ಸಂಚಕಾರ?
ಸಿಎಂ ಬಿ.ಎಸ್.ಯಡಿಯೂರಪ್ಪ.
  • Share this:
ಬೆಂಗಳೂರು (ಮೇ 28); ಕೊರೋನಾ ಕಾರಣಕ್ಕೆ ಕಳೆದ ಎರಡು ತಿಂಗಳಿನಿಂದ ತಣ್ಣಗಾಗಿದ್ದ ಬಿಜೆಪಿ ಪಕ್ಷದೊಳಗಿನ ಭಿನ್ನಮತೀಯರ ರಾಗ ಇದೀಗ ಲಾಕ್‌ಡೌನ್ ಸಡಿಲವಾಗುತ್ತಿದ್ದಂತೆ ಮತ್ತೆ ಸದ್ದು ಮಾಡಲು ಆರಂಭಿಸಿದೆ. ಆರಂಭದಿಂದಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಬಸನಗೌಡ ಪಾಟೀಲ್ ಯತ್ನಾಳ್, ಉಮೇಶ್‌ ಕತ್ತಿ  ಸೇರಿದಂತೆ 10ಕ್ಕೂ ಹೆಚ್ಚು ಶಾಸಕರು ಔತಣ ಕೂಟದ ನೆಪದಲ್ಲಿ ಒಂದೆಡೆ ಸಭೆ ಸೇರಿದ್ದು, ಈ ಅತೃಪ್ತರ ಕೂಟದ ಹೊಸ ರಾಜಕೀಯ ಆಟಕ್ಕೆ ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಬೆಚ್ಚಿ ಬಿದ್ದಿದ್ದಾರೆ.

ಉಮೇಶ್ ಕತ್ತಿ ಉತ್ತರ ಕರ್ನಾಟಕದ ಪ್ರಬಲ ನಾಯಕರಲ್ಲಿ ಒಬ್ಬರು, ಬಸನಗೌಡ ಪಾಟೀಲ್ ಈ ಹಿಂದೆ ಕೇಂದ್ರ ಸಂಪುಟದಲ್ಲಿ ಸಚಿವರಾಗಿ ಕೆಲಸ ಮಾಡಿದ್ದ ಹಿರಿಯ ವ್ಯಕ್ತಿ. ಇನ್ನೂ ಪ್ರಬಲ ಪಂಚಮ ಸಾಲಿ ಲಿಂಗಾಯತ ಕೋಮಿಗೆ ಸೇರಿರುವ ಮಾಜಿ ಸಚಿವ ಮುರುಗೇಶ್ ನಿರಾಣಿ ಸೇರಿದಂತೆ ಹಲವಾರು ನಾಯಕರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ.

ಆದರೆ, ಅನರ್ಹ ಶಾಸಕರಿಗೆ ಸಚಿವ ಸ್ಥಾನ ನೀಡುವ ಸಲುವಾಗಿ ಈ ಎಲ್ಲಾ ಮೂಲ ಬಿಜೆಪಿಗರಿಗೆ ಸಚಿವ ಸ್ಥಾನವನ್ನು ನಿರಾಕರಿಸಲಾಗಿತ್ತು. ಹೀಗಾಗಿ ಈ ತಂಡ ಕಳೆದ ಹಲವು ತಿಂಗಳಿನಿಂದ ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪನವರನ್ನೇ ಸಿಎಂ ಸ್ಥಾನದಿಂದ ಕೆಳಗಿಳಿಸಲು ಸಾಕಷ್ಟು ಶ್ರಮಿ ವಹಿಸಿತ್ತು. ಆದರೆ, ಕೊರೋನಾ ಕಾರಣಕ್ಕೆ ಇವರ ಪ್ರಯತ್ನಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿತ್ತು. ಆದರೆ, ಈ ತಂಡ ಮತ್ತೆ ತನ್ನ ಕೆಲಸವನ್ನು ಆರಂಭಿಸಿದೆ.

ಯತ್ನಾಳ್ ನೇತೃತ್ವದಲ್ಲಿ ಬಿಜೆಪಿ ಅಸಮಾಧಾನಿತ ಶಾಸಕರ ರಹಸ್ಯ ಸಭೆ?

ಔತಣ ಕೂಟದ ನೆಪದಲ್ಲಿ ಬಿಜೆಪಿ ಪಕ್ಷದ ಸುಮಾರು 10 ಕ್ಕೂ ಹೆಚ್ಚು ಜನ ಶಾಸಕರು ಇಂದು ಬೆಂಗಳೂರಿನಲ್ಲಿ ಖಾಸಗಿ ಅಪಾರ್ಟ್‌‌ಮೆಂಟ್‌ ಒಂದರಲ್ಲಿ ಸಭೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಬಿಜಾಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಉಮೇಶ್‌ ಕತ್ತಿ, ಅರವಿಂದ್ ಬೆಲ್ಲದ್, ಅಭಯ್ ಪಾಟೀಲ್, ನಿರಾಣಿ ಸೇರಿದಂತೆ ಗುಲ್ಬರ್ಗ ಜಿಲ್ಲೆಯ ಕೆಲ ಶಾಸಕರು ಭಾಗಿಯಾಗಿದ್ದಾರೆ.

ಮೂರು ಗಂಟೆಗೂ ಹೆಚ್ಚು ಕಾಲ ನಡೆದ ಈ ಸಭೆಯಲ್ಲಿ , ರಾಜ್ಯ ರಾಜಕೀಯ ವಿಚಾರ, ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು, ಸಂಪುಟ ವಿಸ್ತರಣೆ, ರಾಜ್ಯ ನಾಯಕತ್ವ ವಿಚಾರ ಸೇರಿದಂತೆ ಅನೇಕ ವಿಚಾರಗಳ ಕುರಿತು ಚರ್ಚೆ ನಡೆಸಲಾಗಿದೆ. ಅಲ್ಲದೆ, ರಾಜ್ಯ ಬಿಜೆಪಿ ಮತ್ತು ಸರ್ಕಾರದ ಸಂಬಂಧದ ಕುರಿತು ಕೆಲ ವಿಚಾರಗಳನ್ನು  ಹೈಕಮಾಂಡ್ ನಾಯಕರ ಗಮನಕ್ಕೂ ತರಲು ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎನ್ನಲಾಗುತ್ತಿದೆ.(ವರದಿ - ಚಿದಾನಂದ ಪಟೇಲ್)

ಇದನ್ನೂ ಓದಿ : ಮಹಾರಾಷ್ಟ್ರಕ್ಕೆ ಹೊರಟಿದ್ದ ವಲಸಿಗರಿಗೆ ಊಟೋಪಚಾರ-ಬಸ್ ವ್ಯವಸ್ಥೆ ಕಲ್ಪಿಸಿದ ಹುಬ್ಬಳ್ಳಿ ಅಧಿಕಾರಿಗಳು
First published: May 28, 2020, 11:17 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading