ಕರ್ನಾಟಕದಲ್ಲಿ ಕೊರೋನಾಗೆ ಮೊದಲ ಬಲಿ; ರಾಜ್ಯಾದ್ಯಂತ ಕಟ್ಟೆಚ್ಚರ, ತುರ್ತು ಸಭೆ ಕರೆದಿರುವ ಸಚಿವ ಶ್ರೀರಾಮುಲು

ರಾಜ್ಯದ ಆರೋಗ್ಯ ಸಚಿವ ಶ್ರೀರಾಮುಲು ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ಮಹತ್ವದ ಸಭೆ ಕರೆಯಲಾಗಿದೆ. ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಈ ಸಭೆಯಲ್ಲಿ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದು, ಕೊರೋನಾ ನಿಯಂತ್ರಣದ ಕುರಿತು ಚರ್ಚೆ ನಡೆಸಲಿದ್ದಾರೆ.

ಸಚಿವ ಬಿ ಶ್ರೀರಾಮುಲು

ಸಚಿವ ಬಿ ಶ್ರೀರಾಮುಲು

  • Share this:
ಬೆಂಗಳೂರು (ಮಾರ್ಚ್ 13); ಮಾರಣಾಂತಿಕ ಕೊರೋನಾ ವೈರಸ್​ಗೆ ರಾಜ್ಯದಲ್ಲಿ ಮೊದಲ ಬಲಿ ದಾಖಲಾಗಿದೆ. ಕಲಬುರ್ಗಿಯಲ್ಲಿ ಕೊರೋನಾ ಸೋಂಕಿಗೆ ತುತ್ತಾಗಿದ್ದ 76 ವರ್ಷದ ವೃದ್ಧ ಗುರುವಾರ ಮೃತರಾಗಿದ್ದಾರೆ. ಮೃತ ವ್ಯಕ್ತಿ ಕೊರೋನಾ ಸೋಂಕಿನಿಂದ ಬಳಲಿದ್ದು ಸತ್ಯ ಎಂದು ಅರೋಗ್ಯ ಇಲಾಖೆ ದೃಢಪಡಿಸಿರುವ ಬೆನ್ನಲ್ಲೆ ಇಡೀ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.

ರಾಜ್ಯದ ಆರೋಗ್ಯ ಸಚಿವ ಶ್ರೀರಾಮುಲು ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ಮಹತ್ವದ ಸಭೆ ಕರೆಯಲಾಗಿದೆ. ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಈ ಸಭೆಯಲ್ಲಿ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದು, ಕೊರೋನಾ ನಿಯಂತ್ರಣದ ಕುರಿತು ಚರ್ಚೆ ನಡೆಸಲಿದ್ದಾರೆ. ಅಲ್ಲದೆ, ಜಿಲ್ಲೆಯಾದ್ಯಂತ ಎಲ್ಲೆಡೆ ಕೊರೋನಾ ಸೋಂಕಿತರನ್ನು ಗುರುತಿಸಿ ಸೂಕ್ತ ಚಿಕಿತ್ಸೆ ನೀಡಲು ಜಿಲ್ಲಾವಾರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಕ್ತ ಸೂಚನೆ ರವಾನಿಸಲಿದ್ದಾರೆ ಎನ್ನಲಾಗುತ್ತಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಶದಲ್ಲಿ ಕೊರೋನಾ ಸೋಂಕು ಹರಡದಂತೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ವಹಿಸಿದ್ದರು. ಚೀನಾ, ಅಮೆರಿಕ ಸೇರಿದಂತೆ ಯೂರೋಪ್ ರಾಷ್ಟ್ರಗಳಿಂದಲೂ ಭಾರತಕ್ಕೆ ವಿಮಾನ ಹಾರಾಟವನ್ನು ನಿಷೇಧಿಸಲಾಗಿತ್ತು. ಅಲ್ಲದೆ, ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನೂ ವಹಿಸಲಾಗಿತ್ತು. ಆದರೂ, ಕೊರೋನಾ ರಾಜ್ಯದಲ್ಲಿ ಮೊದಲ ಬಲಿ ಪಡೆದಿರುವುದು ಆತಂಕಕ್ಕೆ ಕಾರಣವಾಗಿದೆ.

ಇದನ್ನೂ ಓದಿ : ‘ಕಲಬುರಗಿಯ ವೃದ್ಧ ಕೊರೋನಾ ಸೋಂಕಿನಿಂದಲೇ ಮೃತಪಟ್ಟ‘: ಆರೋಗ್ಯ ಇಲಾಖೆಯಿಂದ ಅಧಿಕೃತ ಮಾಹಿತಿ
First published: