‘ಹೊರ ರಾಜ್ಯಗಳಿಂದ ಕನ್ನಡಿಗರನ್ನು ಕರೆಸಿ; ಪೊಲೀಸರ ಜೀವಕ್ಕೂ ಭದ್ರತೆ ಕೊಡಿ‘ - ಸಿದ್ದರಾಮಯ್ಯ

ನಂಜನಗೂಡಿನಲ್ಲಿ ಒಬ್ಬ ವ್ಯಕ್ತಿಗೆ ಸೋಂಕು ತಗುಲಿದೆ. ಆದರೆ, ಆತನಿಗೆ ವಿದೇಶದಿಂದ ಬಂದವರ ಸಂಪರ್ಕ ಇರಲಿಲ್ಲ. ಆದರೂ, ಕೊರೋನಾ ಹೇಗೆ ಬಂತು? ಎಂಬುದನ್ನು ಪತ್ತೆ ಮಾಡಬೇಕು. ಶಿರಾದಲ್ಲಿಯೂ ಒಬ್ಬ ವ್ಯಕ್ತಿ ಸಾವಿಗೀಡಾಗಿದ್ದಾರೆ. ಈ ಇಬ್ಬರಿಗೂ ಸೋಂಕು ಯಾವ ಹಂತದಲ್ಲಿತ್ತು ಎಂಬುದನ್ನು ಹೇಳಬೇಕು. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಸಿದ್ದರಾಮಯ್ಯ ಸರ್ಕಾರಕ್ಕೆ ಸಲಹೆ ನೀಡಿದರು.

news18-kannada
Updated:March 29, 2020, 5:19 PM IST
‘ಹೊರ ರಾಜ್ಯಗಳಿಂದ ಕನ್ನಡಿಗರನ್ನು ಕರೆಸಿ; ಪೊಲೀಸರ ಜೀವಕ್ಕೂ ಭದ್ರತೆ ಕೊಡಿ‘ - ಸಿದ್ದರಾಮಯ್ಯ
ಸಿದ್ದರಾಮಯ್ಯ.
  • Share this:
ಬೆಂಗಳೂರು(ಮಾ.29): ರಾಜ್ಯದಲ್ಲಿ ಕೊರೋನಾ ವೈರಾಣು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಜನ ಆತಂಕಕ್ಕೀಡಾಗಿದ್ದಾರೆ. ಈ ಸಂದರ್ಭದಲ್ಲಿ ಕೋವಿಡ್​​-19 ತಡೆಗೆ ರಾಜ್ಯ ಸರ್ಕಾರ ಯಾವ ಕ್ರಮಗಳನ್ನು ಎಂಬುದರ ಕುರಿತಾಗಿ ಇಂದು ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆಸಲಾಯ್ತು. ವಿಧಾನಸೌಧದಲ್ಲಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಭಾಗಿಯಾಗಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೊರೊನಾ ನಿಯಂತ್ರಣಕ್ಕೆ ಕೆಲವೊಂದು ಸಲಹೆಗಳನ್ನು ನೀಡಿದ್ದಾರೆ.

ನಮ್ಮ ತಪ್ಪಿನಿಂದ ಯಾವುದೇ ರೀತಿಯ ನೂನ್ಯತೆಯಾಗದಂತೆ ಸರ್ಕಾರ ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ವಿದೇಶದಿಂದ ಬಂದವರ ಆರೋಗ್ಯ ತಪಾಸಣೆ ಸರಿಯಾಗಿ ಆಗುತ್ತಿಲ್ಲ. ಸರ್ಕಾರದ ಮಾಹಿತಿ ಕೂಡ ಅಸ್ಪಷ್ಟವಾಗಿದೆ. 23 ಸಾವಿರ ಮಂದಿ ಪೈಕಿ 4,500 ಮಂದಿಯನ್ನುಇನ್ನೂ ಗುರುತಿಸಬೇಕಿದೆ ಎಂದು ಸರ್ಕಾರವೇ ಹೇಳಿದೆ. ಅವರನ್ನು ಕೂಡಲೇ ಪತ್ತೆ ಮಾಡಬೇಕು. ಮೂರನೇ ಹಂತಕ್ಕೆ ನಾವು ಇನ್ನೂ ಹೋಗಿಲ್ಲ ಎಂದು ಸಚಿವರು ಹೇಳಿದ್ದಾರೆ. ಯಾವುದೇ ಕಾರಣಕ್ಕೂ ಮೂರನೇ ಹಂತಕ್ಕೆ ನಾವು ಹೋಗಬಾರದು ಎಂದರು ಸಿದ್ದರಾಮಯ್ಯ.

ನಂಜನಗೂಡಿನಲ್ಲಿ ಒಬ್ಬ ವ್ಯಕ್ತಿಗೆ ಸೋಂಕು ತಗುಲಿದೆ. ಆದರೆ, ಆತನಿಗೆ ವಿದೇಶದಿಂದ ಬಂದವರ ಸಂಪರ್ಕ ಇರಲಿಲ್ಲ. ಆದರೂ, ಕೊರೋನಾ ಹೇಗೆ ಬಂತು? ಎಂಬುದನ್ನು ಪತ್ತೆ ಮಾಡಬೇಕು. ಶಿರಾದಲ್ಲಿಯೂ ಒಬ್ಬ ವ್ಯಕ್ತಿ ಸಾವಿಗೀಡಾಗಿದ್ದಾರೆ. ಈ ಇಬ್ಬರಿಗೂ ಸೋಂಕು ಯಾವ ಹಂತದಲ್ಲಿತ್ತು ಎಂಬುದನ್ನು ಹೇಳಬೇಕು. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಸಿದ್ದರಾಮಯ್ಯ ಸರ್ಕಾರಕ್ಕೆ ಸಲಹೆ ನೀಡಿದರು.

ಹೀಗೆ ಮುಂದುವರೆದ ಅವರು, ಹಳ್ಳಿಗಳಿಗೆ ಸೋಂಕು ಹರಡದಂತೆ ನೋಡಿಕೊಳ್ಳಬೇಕು. ಮಾಸ್ಕ್, ಸ್ಯಾನಿಟೈಸರ್, ಪಿಪಿಇ, ಟೆಸ್ಟಿಂಗ್ ಕಿಟ್​​ಗಳು ಸಾಕಷ್ಟು ಪ್ರಮಾಣದಲ್ಲಿ ಇಲ್ಲ. ಬಂದಿರುವುದೂ ಗುಣಮಟ್ಟದ್ದಲ್ಲ. ಈಗ ದಾಸ್ತಾನಾಗಿರುವುದು ಯಾವುದಕ್ಕೂ ಸಾಲದು. ಸೋಂಕು ವೇಗವಾಗಿ ಹರಡುವ ಸಾಧ್ಯತೆ ಇದೆ. ಹೀಗಾಗಿ ಮಾಸ್ಕ್ ತಯಾರಿಕೆ ಕೆಲಸ ಭರದಿಂದ ಸಾಗಬೇಕು ಎಂದು ತಿಳಿಸಿದರು.

ಇದನ್ನೂ ಓದಿ: ಕೊರೋನಾ ಬಿಕ್ಕಟ್ಟು: ಸರ್ವಪಕ್ಷಗಳ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು

ಗಾರ್ಮೆಂಟ್ಸ್ ಫ್ಯಾಕ್ಟರಿಗಳಿಗೆ ಆ ಕೆಲಸ ವಹಿಸಿ. ಮೂರನೇ ಹಂತಕ್ಕೆ ಹೋಗುವುದನ್ನು ತಡೆಯುವ, ಅದನ್ನು ನಿಭಾಯಿಸುವ ಕೆಲಸ ಸಮರೋಪಾದಿಯಲ್ಲಿ ಆಗಬೇಕು. ಅಗತ್ಯ ಪ್ರಮಾಣದ ಮಾಸ್ಕ್, ಸ್ಯಾನಿಟೈಸರ್ ಈಗಾಗಲೇ ಇರಬೇಕಿತ್ತು. ವೈದ್ಯರು ಮತ್ತು ಸಿಬ್ಬಂದಿಯ ಆರೋಗ್ಯ ಕಾಪಾಡುವುದು ನಮ್ಮ ಜವಾಬ್ದಾರಿ. ಕರ್ನಾಟಕದಲ್ಲಿ 6020 ಪಂಚಾಯಿತಿಗಳಿವೆ. ಒಂದೊಂದು ಪಂಚಾಯಿತಿಗೆ ಒಬ್ಬ ಮೆಡಿಕಲ್ ಅಧಿಕಾರಿ ನೇಮಕ ಮಾಡಬೇಕು. ಆಹಾರ, ಕೃಷಿ ಮಾರುಕಟ್ಟೆ ಹಾಗೂ ಕೃಷಿ ಅಧಿಕಾರಿಯನ್ನೂ ಪಂಚಾಯಿತಿಗೆ ಒಬ್ಬರಂತೆ ನೇಮಕ ಮಾಡಬೇಕು ಎಂದು ಆಗ್ರಹಿಸಿದರು.

ಸಾಮಾಜಿಕ ಅಂತರ ಕಾಪಾಡುವುದೂ ಮುಖ್ಯ. ಅದೇ ರೀತಿ ರೈತರ ಹಿತವನ್ನೂ ಕಾಯಬೇಕು. ಏಪ್ರಿಲ್, ಮೇ ತಿಂಗಳಲ್ಲಿ ಕೆಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಬಿತ್ತನೆ ಆರಂಭವಾಗುತ್ತೆ. ಕೃಷಿ ಚಟುವಟಿಕೆ ನಿಲ್ಲದಂತೆ ನೋಡಿಕೊಳ್ಳಿ. ಬಿತ್ತನೆಗೆ ಮುಂದಾಗುವವರಿಗೆ ಬೀಜ, ಗೊಬ್ಬರ ಸಿಗುವಂತಾಗಬೇಕು. ಬೆಂಗಳೂರು ನಗರದಲ್ಲಿ ವಲಸಿಗರು ಹೆಚ್ವಿನ ಸಂಖ್ಯೆಯಲ್ಲಿ ಇದ್ದಾರೆ. ಹೊರ ರಾಜ್ಯಗಳಲ್ಲಿ ಇದ್ದ ನಮ್ಮವರು ಇಲ್ಲಿಗೆ, ನಮ್ಮಲ್ಲಿರುವ ಹೊರ ರಾಜ್ಯಗಳವರು ಸ್ವಂತ ಊರುಗಳಿಗೆ ಹೋಗಲು ಪರದಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿವರಿಸಿದರು.ಕನ್ನಡಿಗರನ್ನು ಹೊರ ರಾಜ್ಯಗಳಿಂದ ಕರೆ ತರಬೇಕು. ಈಗಾಗಲೇ ಸಾಕಷ್ಟು ಮಂದಿ ಗಡಿ ತಲುಪಿದ್ದಾರೆ. ಅವರಿಗೆ ರಕ್ಷಣೆ ನೀಡುವುದು ಅವಶ್ಯ. ಅವರ ಆರೋಗ್ಯ ತಪಾಸಣೆ ಮಾಡಿ ಊರುಗಳಿಗೆ ಕಳುಹಿಸುವುದು ಸೂಕ್ತ. ಮುಂದಿನ ಎರಡು ವಾರಗಳಲ್ಲಿ ಪರಿಸ್ಥಿತಿ ಕಠಿಣ ಎದುರಾಗಲಿದೆ. ಹೀಗಾಗಿ ಸೋಂಕು ಹರಡದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿ. ಈಗಾಗಲೇ ದೇಶಾದ್ಯಂತ ಲಾಕ್ ಡೌನ್ ಘೋಷಣೆಯಾಗಿದೆ. ಅದನ್ನು‌ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದರು.

ಏಪ್ರಿಲ್ ಒಂದರಿಂದ ಆಹಾರ ಧಾನ್ಯ ಉಚಿತವಾಗಿ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ. ಸಮರ್ಪಕವಾಗಿ ವಿತರಣೆಯಾಗುವಂತೆ ರಾಜ್ಯ ಸರ್ಕಾರ ನೋಡಿಕೊಳ್ಳಬೇಕು. ಮನೆ ಮನೆಗೆ ಅಗತ್ಯ ವಸ್ತು ತಲುಪಿಸುವ ವ್ಯವಸ್ಥೆ ಮಾಡಿದರೆ ಒಳ್ಳೆಯದು. ಪೊಲೀಸರಿಗೆ ಈಗ ಪ್ರಾಣ ಸಂಕಟ. ಜನ ಸಾಮಾನ್ಯರ ಮೇಲೆ ಲಾಠಿ ಪ್ರಹಾರ ಮಾಡಬಾರದು. ಅಮಾಯಕರ ಮೇಲೆ ಬಲ ಪ್ರಯೋಗ ಬೇಡ. ಪೊಲೀಸರಿಗೂ ವಿಮೆ ಮಾಡಿಸುವುದು ಸೂಕ್ತ. ಈ ಕುರಿತು ಸಿಎಂ ಪ್ರಧಾನಿಗಳ ಜೊತೆ ಮಾತನಾಡಲಿ. ಪೊಲೀಸರ ಜೀವಕ್ಕೂ ಭದ್ರತೆ ಬೇಕು. ಪೌರ ಕಾರ್ಮಿಕರಿಗೂ ವಿಮೆ ಸೌಲಭ್ಯ ಸಿಗಬೇಕು ಎಂದು ಒತ್ತಾಯಿಸಿದರು.
First published:March 29, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading