HOME » NEWS » Coronavirus-latest-news » OVER 213 NEW CORONA CASES DETECTED IN LAST 24 HOURS IN KARNATAKA MAK

Karnataka Health Bulletin: ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 213 ಹೊಸ ಕೊರೋನಾ ಪ್ರಕರಣಗಳ ಪತ್ತೆ, ಇಬ್ಬರ ಸಾವು!

ಸೋಂಕು ಪೀಡಿತ 7,213 ಪ್ರಕರಣಗಳ ಪೈಕಿ 56 ಜನರನ್ನು ಐಸಿಯು ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇವರ ಸ್ಥಿತಿಯ ಕುರಿತು ಮಾಹಿತಿ ಈವರೆಗೆ ದೊರೆತಿಲ್ಲ. ಹೀಗಾಗಿ ಭವಿಷ್ಯದಲ್ಲಿ ಕೊರೋನಾ ಕಾರಣದಿಂದ ಉಂಟಾಗುವ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

news18-kannada
Updated:June 15, 2020, 6:55 PM IST
Karnataka Health Bulletin: ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 213 ಹೊಸ ಕೊರೋನಾ ಪ್ರಕರಣಗಳ ಪತ್ತೆ, ಇಬ್ಬರ ಸಾವು!
ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು (ಜೂನ್‌ 15); ರಾಜ್ಯ ಇಂದು ಒಂದೇ ದಿನ 213 ಜನರಲ್ಲಿ ಕೊರೋನಾ ಸೋಂಕು ಕಂಡುಬಂದಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7213ಕ್ಕೆ ಏರಿಕೆಯಾಗಿದೆ. ಅಲ್ಲದೆ, ಇಬ್ಬರು ಮೃತಪಟ್ಟಿದ್ದು ಸಾವಿನ ಸಂಖ್ಯೆಯೂ 88ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಇಂದಿನ Heath Bulletienನಲ್ಲಿ ತಿಳಿಸಿದೆ.

ಲಾಕ್‌ಡೌನ್‌ ಸಡಿಲಿಕೆ ಆರಂಭವಾದ ನಂತರ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಊಹೆಗೂ ಮೀರಿ ಏರಿಕೆಯಾಗುತ್ತಲೇ ಇದೆ. ಸರಾಸರಿಯಾಗಿ ಪ್ರತಿದಿನ ಇನ್ನೂರಕ್ಕೂ ಹೆಚ್ಚು ಜನ ಈ ಸೋಂಕಿಗೆ ತುತ್ತಾಗುತ್ತಿದ್ದಾರೆ. ದೇಶದಾದ್ಯಂತ ವಲಸೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ಹಿಂತಿರುಗುತ್ತಿರುವುದೇ ಈ ಸೋಂಕು ಅಧಿಕವಾಗಲು ಪ್ರಮುಖ ಕಾರಣ ಎನ್ನಲಾಗುತ್ತಿದೆ.

ಇಂದೂ ಸಹ ಈ ಸಾಲಿನಲ್ಲಿ 213 ಹೊಸ ಪ್ರಕರಣಗಳು ಸೇರ್ಪಡೆಯಾಗಿದೆ. ಈ ಪೈಕಿ 23 ಜನ ವಲಸೆ ಕಾರ್ಮಿಕರು ಮತ್ತು ಪ್ರಯಾಣಿಕರು ಎನ್ನಲಾಗಿದೆ. ಇದೇ ಸಂದರ್ಭದಲ್ಲಿ ಇಂದು 180 ಜನ ಗುಣಮುಖರಾಗಿ ಡಿಸ್ಜಾರ್ಜ್‌ ಆಗಿದ್ದಾರೆ. ಈ ಮೂಲಕ ಆಸ್ಪತ್ರೆಯಿಂದ ಡಿಸ್ಜಾರ್ಚ್‌ ಆದವರ ಸಂಖ್ಯೆಯೂ 4135ಕ್ಕೆ ಏರಿಕೆಯಾಗಿದೆ. ಆರೋಗ್ಯ ಇಲಾಖೆ ನೀಡುವ ಅಂಕಿಅಂಶಗಳ ಪ್ರಕಾರ ಕರ್ನಾಟಕದಲ್ಲಿ ಕೊರೋನಾ ಸೋಂಕಿನಿಂದ ಸಾಯುವವರ ಸಂಖ್ಯೆ ಕೇವಲ ಶೇ.1.8 ರಷ್ಟು ಮಾತ್ರ ಎನ್ನಲಾಗಿದೆ.

ಇದನ್ನೂ ಓದಿ : ರಾಜ್ಯದಲ್ಲಿ ಕೊರೋನಾ ರೋಗಿಗಳ ಸಾವಿನ ಪ್ರಮಾಣ ಶೇ.1.2 ಹೀಗಾಗಿ ಜನ ಭಯಪಡುವ ಅಗತ್ಯ ಇಲ್ಲ; ಬಿ.ಎಸ್‌. ಯಡಿಯೂರಪ್ಪ
Youtube Video

ಸೋಂಕು ಪೀಡಿತ 7,213 ಪ್ರಕರಣಗಳ ಪೈಕಿ 56 ಜನರನ್ನು ಐಸಿಯು ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇವರ ಸ್ಥಿತಿಯ ಕುರಿತು ಮಾಹಿತಿ ಈವರೆಗೆ ದೊರೆತಿಲ್ಲ. ಹೀಗಾಗಿ ಭವಿಷ್ಯದಲ್ಲಿ ಕೊರೋನಾ ಕಾರಣದಿಂದ ಉಂಟಾಗುವ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
First published: June 15, 2020, 6:55 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories