HOME » NEWS » Coronavirus-latest-news » OXYGEN CRISIS IN RT NAGAR MADDOX HOSPITAL MAK

Oxygen Crisis: ಆರ್​​ಟಿ ನಗರ ಮೆಡಾಕ್ಸ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಇಲ್ಲದೆ ಕೋವಿಡ್ ರೋಗಿಗಳ ಪರದಾಟ; ಕೊನೆಗೂ ಸಿಲಿಂಡರ್ ಪೂರೈಕೆ!

ನಿನ್ನೆಯಿಂದ ಆಕ್ಸಿಜನ್ ಕೊರತೆ ಇದ್ರೂ ಇನ್ನೂ ಆಸ್ಪತ್ರೆಗೆ ಆಕ್ಸಿಜನ್ ಮಾತ್ರ ಬಂದಿಲ್ಲ. ಹೀಗಾಗಿ ಆಸ್ಪತ್ರೆ ಆಡಳಿತ ಮಂಡಳಿ ಆಕ್ಸಿಜನ್ ಗಾಗಿ ತೀವ್ರ ಪರದಾಟ ನಡೆಸುತ್ತಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆ ಬಳಿ ಪೊಲೀಸರ ನಿಯೋಜನೆ ಮಾಡಲಾಗಿದೆ.

news18-kannada
Updated:May 3, 2021, 6:44 PM IST
Oxygen Crisis: ಆರ್​​ಟಿ ನಗರ ಮೆಡಾಕ್ಸ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಇಲ್ಲದೆ ಕೋವಿಡ್ ರೋಗಿಗಳ ಪರದಾಟ; ಕೊನೆಗೂ ಸಿಲಿಂಡರ್ ಪೂರೈಕೆ!
ಆಕ್ಸಿಜನ್ ಸಿಲಿಂಡರ್ (ಸಾಂದರ್ಭಿಕ ಚಿತ್ರ).
  • Share this:
ಬೆಂಗಳೂರು (ಮೇ 03); ಆಸ್ಪತ್ರೆಯಲ್ಲಿ ಆಕ್ಸಿಜನ್ ವ್ಯವಸ್ಥೆ ಇಲ್ಲದ ಕಾರಣ ಇಂದು ಚಾಮರಾಜನಗರ ಜಿಲ್ಲೆಯಲ್ಲಿ 24 ಜನ ಕೋವಿಡ್​ ರೋಗಿಗಳು ಸಾವನ್ನಪ್ಪಿದ್ದಾರೆ. ಈ ಸಾವಿಗೆ ಇಡೀ ದೇಶದ ಜನ ಮರುಗಿದ್ದು, ಅನೇಕ ನಾಯಕರು ವಿಷಾಧ ವ್ಯಕ್ತಪಡಿಸಿದ್ದಾರೆ. ಈ ದುರಂತಕ್ಕೆ ಆಡಳಿತ ಪಕ್ಷದ ಬೇಜವಾಬ್ದಾರಿಯೇ ಕಾರಣ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ. ಈ ದುರಂತ ಮರೆಯುವ ಮುನ್ನವೇ ಇಂತಹದ್ದೇ ಮತ್ತೊಂದು ದುರಂತಕ್ಕೆ ಬೆಂಗಳೂರಿನ ಆರ್​ಟಿ ನಗರದ ಮೆಡಾಕ್ಸ್​ ಆಸ್ಪತ್ರೆ ಸಾಕ್ಷಿಯಾಗುವ ಎಲ್ಲಾ ಸಾಧ್ಯತೆಗಳೂ ಕಂಡು ಬರುತ್ತಿದೆ. ಈ ಖಾಸಗಿ ಆಸ್ಪತ್ರೆಯಲ್ಲಿ 20 ಕ್ಕೂ ಅಧಿಕ ಕೊರೋನಾ ರೋಗಿಗಳನ್ನು ತುರ್ತು ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ಆಸ್ಪತ್ರೆಯಲ್ಲಿ ಸೂಕ್ತ ಪ್ರಮಾಣದ ಆಕ್ಸಿಜನ್​ ಇಲ್ಲದೆ ರೋಗಿಗಳು ಪರದಾಡುವಂತಾಗಿದೆ.

ಆಸ್ಪತ್ರೆಯಲ್ಲಿ ಸುಮಾರು 15 ರಿಂದ 20 ರೋಗಿಗಳಿಗೆ ತಕ್ಷಣವೇ ಆಕ್ಸಿಜನ್ ಅವಶ್ಯಕತೆ ಇದೆ. ಹೀಗಾಗಿ ಆಕ್ಸಿಜನ್‌ ಕೊರತೆಯಿಂದ ರೋಗಿಗಳನ್ನು ಬೇರೆ ಕಡೆ ಶಿಫ್ಟ್ ಆಗುವಂತೆ ಆಸ್ಪತ್ರೆ ಆಡಳಿತ ಮಂಡಳಿ ಸೂಚಿಸಿದೆ. ಆದರೆ, ನಾವು ಬೇರೆ ಕಡೆ ನಾವು ಹೋಗಲ್ಲ ಇಲ್ಲೇ ಟ್ರೀಟ್ ಮೆಂಟ್ ಕೊಡಿ ಅಂತ ಸಂಬಂಧಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೇರೆ ಕಡೆಯೂ ಸಾಕಷ್ಟು ತೊಂದರೆ ಆಗ್ತಾ ಇದೆ. ಶಿಫ್ಟ್ ಮಾಡುವಾಗ ಪ್ರಾಣ ಹೋದ್ರೆ ಯಾರ್ ಜವಾಬ್ದಾರಿ ಎಂದು ಸಂಬಂಧಿಕರು ಪ್ರಶ್ನಿಸುತ್ತಿದ್ದಾರೆ. ಹೀಗಾಗಿ ಆಸ್ಪತ್ರೆಯ ಆಡಳಿತ ಮಂಡಳಿಗೆ  ಏನು ಮಾಡಬೇಕು? ಎಂದೇ ದಿಕ್ಕು ತೋಚದಂತಾಗಿದೆ.

ನಿನ್ನೆಯಿಂದ ಆಕ್ಸಿಜನ್ ಕೊರತೆ ಇದ್ರೂ ಇನ್ನೂ ಆಸ್ಪತ್ರೆಗೆ ಆಕ್ಸಿಜನ್ ಮಾತ್ರ ಬಂದಿಲ್ಲ. ಹೀಗಾಗಿ ಆಸ್ಪತ್ರೆ ಆಡಳಿತ ಮಂಡಳಿ ಆಕ್ಸಿಜನ್ ಗಾಗಿ ತೀವ್ರ ಪರದಾಟ ನಡೆಸುತ್ತಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆ ಬಳಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಆದರೆ, ಆರ್ ಟಿ ನಗರ ಇನ್ಸ್ಪೆಕ್ಟರ್ ಅಶ್ವತ್ ಗೌಡರಿಂದ ಕೊನೆಗೂ ಆಕ್ಸಿಜನ್ ವ್ಯವಸ್ಥೆ ಮಾಡಲಾಗಿದೆ. ಪೀಣ್ಯಾದ ಆಕ್ಸಿಜನ್ ಪೂರೈಕೆ ಕಾರ್ಖಾನೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ, ಸಮಸ್ಯೆ ಬಗ್ಗೆ ಮಾತನಾಡಿ ಸದ್ಯಕ್ಕೆ 45 ಆಕ್ಸಿಜನ್ ಸಿಲಿಂಡರ್ ಗಳ ಪೂರೈಕೆ ಮಾಡಲಾಗಿದೆ. ಹೀಗಾಗಿ ಮೆಡಾಕ್ಸ್ ಆಸ್ಪತ್ರೆ ರೋಗಿಗಳು ಕೊನೆಗೂ ನಿಟ್ಟುಸಿರು ಬಿಡುವಂತಾಗಿದೆ.

ಆಕ್ಸಿಜನ್ ಇಲ್ಲದೆ ಚಾಮರಾಜನಗರ ದುರಂತ:

ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ 24 ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕೊರೋನಾ ಸೋಂಕಿತರು ಮೃತಪಟ್ಟಿರುವ ವಿಷಯವನ್ನು ಆರೋಗ್ಯಾಧಿಕಾರಿಗಳು ಖಚಿತಪಡಿಸಿದ್ದಾರೆ. ಆದರೆ ಈ ಬಗ್ಗೆ ಚಾಮರಾಜನಗರ ಜಿಲ್ಲಾಡಳಿತ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ ಎಂದು ತಿಳಿದು ಬಂದಿದೆ. ಆಮ್ಲಜನಕ ಕೊರತೆಯಿಂದಾಗಿ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಸಾವಿನ ಸಂಖ್ಯೆ ಏರುತ್ತಿದ್ದಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಕಾತ್ಯಾಯಿನಿದೇವಿ, ಹೆಚ್ಚುವರಿ ಎಸ್ಪಿ ಅನಿತಾಹದ್ದಣ್ಣನವರ್ ಜಿಲ್ಲಾಸ್ಪತ್ರೆಗೆ ದೌಡಾಯಿಸಿದ್ದಾರೆ. ಮೃತರ ಕುಟುಂಬಸ್ಥರು ಆಸ್ಪತ್ರೆ ಮುಂದೆ ಜಮಾಯಿಸಿದ್ದು, ಅವರ ಆಕ್ರಂದನ ಮುಗಿಲು ಮುಟ್ಟಿದೆ.

ಚಾಮರಾಜನಗರದಲ್ಲಿ ಲಿಕ್ವಿಡ್ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಮಾಡಿದ್ದರೂ ಆಕ್ಸಿಜನ್​ ಪರದಾಟ ಮಾತ್ರ ತಪ್ಪಿಲ್ಲ. ಆಕ್ಸಿಜನ್ ಕೊರತೆಯಿಂದ ನಾನ್ ಕೋವಿಡ್ ವ್ಯಕ್ತಿ ಸಾವನ್ನಪ್ಪಿರುವ ಆರೋಪವೂ ಕೇಳಿ ಬಂದಿದೆ. ಈಗಾಗಲೇ ಕೋವಿಡ್​ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ 24 ಮಂದಿ ಸಾವನ್ನಪ್ಪಿದ್ದಾರೆ.ಇದನ್ನೂ ಓದಿ: ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ 24 ಮಂದಿ ಸಾವು; ಆಕ್ಸಿಜನ್​ ಕೊರತೆಯಿಂದ ಮೃತಪಟ್ಟಿರುವ ಶಂಕೆ

ಕೋವಿಡ್ ಸೋಂಕಿತರಿಗೆ ಆಕ್ಸಿಜನ್ ಕೊಡುವಂತೆ ಕುಟುಂಬಸ್ಥರು ಗೋಳಾಡುತ್ತಿದ್ದಾರೆ. ಆದರೆ ಆಕ್ಸಿಜನ್ ಕೊರತೆಯ ವಿಚಾರದಲ್ಲಿ ವೈದ್ಯರೂ ಸಹ ಅಸಹಾಯಕರಾಗಿದ್ದಾರೆ. ಸೋಂಕಿತರ ಪ್ರಾಣವುಳಿಸಲು ಕುಟುಂಬಸ್ಥರು ಪರದಾಟ ನಡೆಸುತ್ತಿದ್ದಾರೆ. ಕೊರೋನಾ ಸೋಂಕಿತರಿಗೆ ಅವರ ಕುಟುಂಬಸ್ಥರು ನ್ಯೂಸ್ ಪೇಪರ್​ನಲ್ಲಿ ಗಾಳಿ ಬೀಸುತ್ತಿದ್ದಾರೆ.

ಈ ಕಡೆ ಲಿಕ್ವಿಡ್ ಆಕ್ಸಿಜನ್ ಪ್ಲಾಂಟ್, ಆ ಕಡೆ ಜಂಬೋ ಸಿಲಿಂಡರ್ ಗಳಿದ್ದರೂ ಸಹ ಏನು ಪ್ರಯೋಜನವಾಗಿಲ್ಲ ಎಂದು ಜಿಲ್ಲಾಸ್ಪತ್ರೆ ಮುಂದೆ ಸೋಂಕಿತರ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Published by: MAshok Kumar
First published: May 3, 2021, 6:41 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories