HOME » NEWS » Coronavirus-latest-news » OXYGEN SHORTAGE IN THE STATE CM MEETING WITH OXYGEN SUPPLIERS MAK

Oxygen Crisis: ರಾಜ್ಯದಲ್ಲಿ ಆಕ್ಸಿಜನ್ ಕೊರತೆ: ಆಮ್ಲಜನಕ ಉತ್ಪಾದಕರ ಮತ್ತು ಸರಬರಾಜುದಾರರ ಜೊತೆ ಸಿಎಂ ಸಭೆ

ಭವಿಷ್ಯದಲ್ಲಿ ರಾಜ್ಯದಲ್ಲಿ ಆಕ್ಸಿಜನ್ ಕೊರತೆಯಾಗದಂತೆ ನೋಡಿಕೊಳ್ಳುವ ಹಾಗೂ ಇಂತಹ ದುರಂತಗಳು ಮತ್ತೆ ಸಂಭವಿಸದಂತೆ ತಡೆಯುವ ಸಲುವಾಗಿ ಸಿಎಂ ಯಡಿಯೂರಪ್ಪ ಇಂದು ಆಕ್ಸಿಜನ್ ಉತ್ಪಾದಕ ಮತ್ತು ಪೂರೈಕೆದಾರರ ಜೊತೆಗೆ ಮಹತ್ವದ ಸಭೆ ನಡೆಸಿದ್ಧಾರೆ.

news18-kannada
Updated:May 3, 2021, 7:08 PM IST
Oxygen Crisis: ರಾಜ್ಯದಲ್ಲಿ ಆಕ್ಸಿಜನ್ ಕೊರತೆ: ಆಮ್ಲಜನಕ ಉತ್ಪಾದಕರ ಮತ್ತು ಸರಬರಾಜುದಾರರ ಜೊತೆ ಸಿಎಂ ಸಭೆ
ಸಿಎಂ ಸಭೆ.
  • Share this:
ಬೆಂಗಳೂರು (ಮೇ 03); ಆಸ್ಪತ್ರೆಯಲ್ಲಿ ಆಕ್ಸಿಜನ್ ವ್ಯವಸ್ಥೆ ಇಲ್ಲದ ಕಾರಣ ಇಂದು ಚಾಮರಾಜನಗರ ಜಿಲ್ಲೆಯಲ್ಲಿ 24 ಜನ ಕೋವಿಡ್​ ರೋಗಿಗಳು ಸಾವನ್ನಪ್ಪಿದ್ದಾರೆ. ಈ ಸಾವಿಗೆ ಇಡೀ ದೇಶದ ಜನ ಮರುಗಿದ್ದು, ಅನೇಕ ನಾಯಕರು ವಿಷಾಧ ವ್ಯಕ್ತಪಡಿಸಿದ್ದಾರೆ. ಈ ದುರಂತಕ್ಕೆ ಆಡಳಿತ ಪಕ್ಷದ ಬೇಜವಾಬ್ದಾರಿಯೇ ಕಾರಣ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ. ಹೀಗಾಗಿ ಭವಿಷ್ಯದಲ್ಲಿ ರಾಜ್ಯದಲ್ಲಿ ಆಕ್ಸಿಜನ್ ಕೊರತೆಯಾಗದಂತೆ ನೋಡಿಕೊಳ್ಳುವ ಹಾಗೂ ಇಂತಹ ದುರಂತಗಳು ಮತ್ತೆ ಸಂಭವಿಸದಂತೆ ತಡೆಯುವ ಸಲುವಾಗಿ ಸಿಎಂ ಯಡಿಯೂರಪ್ಪ ಇಂದು ಆಕ್ಸಿಜನ್ ಉತ್ಪಾದಕ ಮತ್ತು ಪೂರೈಕೆದಾರರ ಜೊತೆಗೆ ಮಹತ್ವದ ಸಭೆ ನಡೆಸಿದ್ಧಾರೆ. ಈ ಸಭೆಯಲ್ಲಿ ಚರ್ಚೆ ನಡೆಸಿ ಅನೇಕ ನಿರ್ಧಾರಗಳನ್ನೂ ಸಹ ತೆಗೆದುಕೊಳ್ಳಲಾಗಿದೆ.

1. ಕೇಂದ್ರದ ಆಕ್ಸಿಜನ್ ಕೋಟಾದಲ್ಲಿ ಯಾವುದೇ ರೀತಿ ಕಡಿತವಾಗದಂತೆ ಸರಬರಾಜು ಮಾಡಲು ಅಗತ್ಯ ಕ್ರಮ.

2. ಆಕ್ಸಿಜನ್ ಟ್ಯಾಂಕರ್​ಗಳ ಫಿಲ್ಲಿಂಗ್ ಅವಧಿಯನ್ನು ಕಡಿತಗೊಳಿಸಲು ಕ್ರಮ.

3. ಆಕ್ಸಿಜನ್ ಟ್ಯಾಂಕರ್​ಗಳ ತಡೆರಹಿತ ಪ್ರಯಾಣಕ್ಕೆ ಗ್ರಿನ್ ಕಾರಿಡಾರ್‍ಗಳನ್ನು ಒದಗಿಸುವುದು

4. ಟೋಲ್‍ಗಳಲ್ಲಿ ಅನಗತ್ಯ ತಡೆರಹಿತ ಪ್ರಯಾಣಕ್ಕೆ ಕ್ರಮ.

5. ನೈಟ್ರೋಜನ್, ಆರ್ಗನ್ ಅನಿಲಗಳ ಸಾಗಣೆ ಟ್ಯಾಂಕರ್‍ಗಳನ್ನು ಆಕ್ಸಿಜನ್ ಸಾಗಣೆಗೆ ಪರಿವರ್ತಿಸಲು ಕ್ರಮ.

6. ಎಲ್‍ಪಿಜಿ ಟ್ಯಾಂಕರ್​ಗಳ ಚಾಲಕರನ್ನು ಆಕ್ಸಿಜನ್ ಪೂರೈಕೆಗೆ ಬಳಸಿಕೊಳ್ಳುವುದು.7. ಆಕ್ಸಿಜನ್ ಉತ್ಪಾದಕರು ಮತ್ತು ಸರಬರಾಜುದಾರರು ಆಕ್ಸಿಜನ್ ಸರಬರಾಜಿಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವುದು

8. ಲಭ್ಯವಿರುವ ಟ್ಯಾಂಕ್ ರಗಳನ್ನು ಗರಿಷ್ಠ ಪ್ರಮಾಣದಲ್ಲಿ‌ ಬಳಸಿಕೊಳ್ಳಲು ನಿರ್ಧಾರ.

ಆಕ್ಸಿಜನ್ ಇಲ್ಲದೆ ಚಾಮರಾಜನಗರ ದುರಂತ:

ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ 24 ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕೊರೋನಾ ಸೋಂಕಿತರು ಮೃತಪಟ್ಟಿರುವ ವಿಷಯವನ್ನು ಆರೋಗ್ಯಾಧಿಕಾರಿಗಳು ಖಚಿತಪಡಿಸಿದ್ದಾರೆ. ಆದರೆ ಈ ಬಗ್ಗೆ ಚಾಮರಾಜನಗರ ಜಿಲ್ಲಾಡಳಿತ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ ಎಂದು ತಿಳಿದು ಬಂದಿದೆ. ಆಮ್ಲಜನಕ ಕೊರತೆಯಿಂದಾಗಿ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಸಾವಿನ ಸಂಖ್ಯೆ ಏರುತ್ತಿದ್ದಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಕಾತ್ಯಾಯಿನಿದೇವಿ, ಹೆಚ್ಚುವರಿ ಎಸ್ಪಿ ಅನಿತಾಹದ್ದಣ್ಣನವರ್ ಜಿಲ್ಲಾಸ್ಪತ್ರೆಗೆ ದೌಡಾಯಿಸಿದ್ದಾರೆ. ಮೃತರ ಕುಟುಂಬಸ್ಥರು ಆಸ್ಪತ್ರೆ ಮುಂದೆ ಜಮಾಯಿಸಿದ್ದು, ಅವರ ಆಕ್ರಂದನ ಮುಗಿಲು ಮುಟ್ಟಿದೆ.

ಚಾಮರಾಜನಗರದಲ್ಲಿ ಲಿಕ್ವಿಡ್ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಮಾಡಿದ್ದರೂ ಆಕ್ಸಿಜನ್​ ಪರದಾಟ ಮಾತ್ರ ತಪ್ಪಿಲ್ಲ. ಆಕ್ಸಿಜನ್ ಕೊರತೆಯಿಂದ ನಾನ್ ಕೋವಿಡ್ ವ್ಯಕ್ತಿ ಸಾವನ್ನಪ್ಪಿರುವ ಆರೋಪವೂ ಕೇಳಿ ಬಂದಿದೆ. ಈಗಾಗಲೇ ಕೋವಿಡ್​ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ 24 ಮಂದಿ ಸಾವನ್ನಪ್ಪಿದ್ದಾರೆ.ಇದನ್ನೂ ಓದಿ: ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ 24 ಮಂದಿ ಸಾವು; ಆಕ್ಸಿಜನ್​ ಕೊರತೆಯಿಂದ ಮೃತಪಟ್ಟಿರುವ ಶಂಕೆ

ಕೋವಿಡ್ ಸೋಂಕಿತರಿಗೆ ಆಕ್ಸಿಜನ್ ಕೊಡುವಂತೆ ಕುಟುಂಬಸ್ಥರು ಗೋಳಾಡುತ್ತಿದ್ದಾರೆ. ಆದರೆ ಆಕ್ಸಿಜನ್ ಕೊರತೆಯ ವಿಚಾರದಲ್ಲಿ ವೈದ್ಯರೂ ಸಹ ಅಸಹಾಯಕರಾಗಿದ್ದಾರೆ. ಸೋಂಕಿತರ ಪ್ರಾಣವುಳಿಸಲು ಕುಟುಂಬಸ್ಥರು ಪರದಾಟ ನಡೆಸುತ್ತಿದ್ದಾರೆ. ಕೊರೋನಾ ಸೋಂಕಿತರಿಗೆ ಅವರ ಕುಟುಂಬಸ್ಥರು ನ್ಯೂಸ್ ಪೇಪರ್​ನಲ್ಲಿ ಗಾಳಿ ಬೀಸುತ್ತಿದ್ದಾರೆ.

ಈ ಕಡೆ ಲಿಕ್ವಿಡ್ ಆಕ್ಸಿಜನ್ ಪ್ಲಾಂಟ್, ಆ ಕಡೆ ಜಂಬೋ ಸಿಲಿಂಡರ್ ಗಳಿದ್ದರೂ ಸಹ ಏನು ಪ್ರಯೋಜನವಾಗಿಲ್ಲ ಎಂದು ಜಿಲ್ಲಾಸ್ಪತ್ರೆ ಮುಂದೆ ಸೋಂಕಿತರ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Oxygen Crisis: ಆರ್​​ಟಿ ನಗರ ಮೆಡಾಕ್ಸ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಇಲ್ಲದೆ ಕೋವಿಡ್ ರೋಗಿಗಳ ಪರದಾಟ; ಕೊನೆಗೂ ಸಿಲಿಂಡರ್ ಪೂರೈಕೆ!

ಈ ನಡುವೆ  ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ‌ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸುತ್ತಿದೆ. ಕೊರೋನಾ ಸೋಂಕು ಹರಡುವಿಕೆ ಶರವೇಗವನ್ನು ಪಡೆದುಕೊಂಡಿದೆ.‌ ಹಲವು ನಿರ್ಬಂಧಗಳ ನಡುವೆಯೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಕೊರೋನಾ ಸೋಂಕಿತರು ಪತ್ತೆ ಆಗುತ್ತಿದ್ದಾರೆ‌.‌ ಏಪ್ರಿಲ್ 4ರಿಂದ ದಿನ ಒಂದರಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು, ಏಪ್ರಿಲ್ 14ರಿಂದ ದಿನ ಒಂದರಲ್ಲಿ ಎರಡು ಲಕ್ಷಕ್ಕೂ ‌ಹೆಚ್ಚು‌ ಜನರು ಹಾಗೂ ಏಪ್ರಿಲ್ 17ರಿಂದ ದಿನ‌ ಒಂದರಲ್ಲಿ ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕೊರೊನಾ ಸೋಂಕು ಪೀಡಿತರಾಗುತ್ತಿದ್ದರು. ಈಗ ಮೂರೂವರೆ ಲಕ್ಷಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಗೋಚರಿಸಲು ಆರಂಭಿಸಿವೆ.

ಭಾನುವಾರ 3,68,147 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಈ ಪೈಕಿ ಗುಣ ಆಗಿರುವವರು 3,00,732 ಜನ ಮಾತ್ರ. ಇದರಿಂದ ದೇಶದಲ್ಲಿ ಈವರೆಗೆ ಕೊರೋನಾ ಸೋಂಕು ಪೀಡಿತರಾದವರ ಸಂಖ್ಯೆ 1,99,25,604ಕ್ಕೆ ಏರಿಕೆ ಆಗಿದೆ.‌ ಇದಲ್ಲದೆ ದಿನದಿಂದ ದಿನಕ್ಕೆ ಕೊರೋನಾ ರೋಗಕ್ಕೆ ಬಲಿ ಆಗುತ್ತಿರುವವರ ಸಂಖ್ಯೆ ಕೂಡ‌ ಹೆಚ್ಚಾಗಿದ್ದು ದೇಶದಲ್ಲಿ ಇದೀಗ ದಿನ ಒಂದರಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನ‌ ಸಾವನ್ನಪ್ಪುತ್ತಿದ್ದಾರೆ. ಭಾನುವಾರ 3,417 ಜನರು ಬಲಿ ಆಗಿದ್ದು ಈವರೆಗೆ ಮಹಾಮಾರಿ ಕೊರೋನಾಗೆ ಬಲಿ ಆದವರ ಸಂಖ್ಯೆ 2,18,959ಕ್ಕೆ ಏರಿಕೆ ಆಗಿದೆ.
Published by: MAshok Kumar
First published: May 3, 2021, 7:08 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories