ಕೊರೋನಾ ಸೋಂಕಿನ ಕುರಿತು ಡಿ.ಕೆ. ಶಿವಕುಮಾರ್​ಗೇಕೆ ಇಷ್ಟೊಂದು ನಿರ್ಲಕ್ಷ್ಯ?

ಡಿಕೆಶಿ ಮನೆಯಎದುರು ಜನಜುಂಗಳಿಯೇ ಸೇರುತ್ತಿದೆ. ಆದರೆ, ಅವರ ಹಿತದೃಷ್ಟಿಯಿಂದ ಹ್ಯಾಂಡ್ ಸ್ಯಾನಿಟೈಸರ್ ಅಥವಾ ಯಾವುದೆ ಮುಂಜಾಗ್ರತೆಯನ್ನೂ ತೆಗೆದುಕೊಳ್ಳುತ್ತಿಲ್ಲ. ಇದು ಹಲವರ ಆಕ್ರೋಶಕ್ಕೆ ಕಾರಣವಾಗಿದೆ.

news18-kannada
Updated:March 21, 2020, 12:59 PM IST
ಕೊರೋನಾ ಸೋಂಕಿನ ಕುರಿತು ಡಿ.ಕೆ. ಶಿವಕುಮಾರ್​ಗೇಕೆ ಇಷ್ಟೊಂದು ನಿರ್ಲಕ್ಷ್ಯ?
ಡಿಕೆ ಶಿವಕುಮಾರ್
  • Share this:
ಬೆಂಗಳೂರು (ಮಾ.21): ಕೊರೋನಾ ವೈರಸ್​ ಇಡೀ ಜಗತ್ತು ಬೆಚ್ಚಿ ಬಿದ್ದಿದೆ. ಇದನ್ನು ತಡೆಯಲು ಸರ್ಕಾರ ಸಾಕಷ್ಟು ಕ್ರಮ ಕೈಗೊಳ್ಳುತ್ತಿದೆ. ಆದರೆ, ಕೆಲವರ ನಿರ್ಲಕ್ಷ್ಯದಿಂದ ಅನೇಕರು ಈ ವೈರಸ್​ಗೆ ತುತ್ತಾಗುತ್ತಿದ್ದಾರೆ. ಇನ್ನು, ಸರ್ಕಾರ ಕೂಡ ವೈರಸ್​ ಹರಡದಂತೆ ನೊಡಿಕೊಳ್ಳಲು ಸಾಕಷ್ಟು ಕ್ರಮ ಕೈಗೊಳ್ಳುತ್ತಿದೆ. ಎಲ್ಲೆಡೆ ಜನರು ಸೇರದಂತೆ ಸರ್ಕಾರ ಆದೇಶಿಸಿದೆ. ಈ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಬೇಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. 

ಡಿ.ಕೆ. ಶಿವಕುಮಾರ್​ ಇತ್ತೀಚೆಗೆಷ್ಟೇ ನೂತನ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ಇವರನ್ನು ಭೇಟಿ ಮಾಡಲು ನಿತ್ಯ ನೂರಾರು ಕಾರ್ಯಕರ್ತರು ಅವರ ಮನೆ ಎದುರು ಸೇರುತ್ತಿದ್ದಾರೆ. ಅವರೆಲ್ಲರನ್ನೂ ಡಿಕೆಶಿ ಭೇಟಿ ಮಾಡುತ್ತಿದ್ದಾರೆ. ದೇಶಾದ್ಯಂತ ಕೊರೊನಾ ತಡೆಗಟ್ಟಲು ಹರಸಾಹಸ ನಡೆಯುತ್ತಿದ್ದರೆ, ಇತ್ತ ಡಿಕೆಶಿಗೆ ಮಾತ್ರ ಇದರ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ ಎನ್ನುತ್ತಿದ್ದಾರೆ.

ಡಿಕೆಶಿ ಮನೆಯ ಎದುರು ನಿತ್ಯ ಜನಜುಂಗಳಿ ಸೇರುತ್ತಿದೆ. ಆದರೆ, ಅವರ ಹಿತದೃಷ್ಟಿಯಿಂದ ಹ್ಯಾಂಡ್ ಸ್ಯಾನಿಟೈಸರ್ ಅಥವಾ ಯಾವುದೆ ಮುಂಜಾಗ್ರತೆಯನ್ನೂ ತೆಗೆದುಕೊಳ್ಳುತ್ತಿಲ್ಲ. ಇಷ್ಟೆಲ್ಲಾ ಜನ ಸೇರಿದ್ದರೂ ಡಿಕೆಶಿ ಎಲ್ಲರನ್ನೂ ಭೇಟಿ‌ ಮಾಡುವುದಾಗಿ ಕಾಯಿಸುತ್ತಿದ್ದಾರೆ. ಈ ಬಗ್ಗೆ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಮೆಕ್ಕಾದಿಂದ ಹಿಂದಿರುಗಿದ್ದ ವ್ಯಕ್ತಿಗೆ ಕೊರೋನಾ ದೃಢ; ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 16ಕ್ಕೆ ಏರಿಕೆ

ವ್ಯಾಪಕವಾಗಿ ಹಬ್ಬುತ್ತಿರುವ ಕೊರೋನಾ ವೈರಸ್ ಬಗ್ಗೆ ರಾಜ್ಯದಲ್ಲಿ ಆತಂಕ ಹೆಚ್ಚಾಗಿದೆ. ಮೆಕ್ಕಾದಿಂದ ಹಿಂದಿರುಗಿದ್ದ ವ್ಯಕ್ತಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಇದರೊಂದಿಗೆ ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.
First published:March 21, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading