ನವದೆಹಲಿ: ಮಾರಕ ಕರೋನಾ ವೈರಸ್ ಏಕಾಏಕಿ ಉಂಟಾಗುವ ಪರಿಸ್ಥಿತಿ ಮತ್ತು ಅದನ್ನು ಎದುರಿಸುವ ಪ್ರಯತ್ನಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಗುರುವಾರ ಸಂಜೆ 8 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನಿ ಕಚೇರಿ ಬುಧವಾರ ತಿಳಿಸಿದೆ.
ಕರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ನಡೆಯುತ್ತಿರುವ ಪ್ರಯತ್ನಗಳನ್ನು ಪರಿಶೀಲಿಸಲು ನರೇಂದ್ರ ಮೋದಿ ಬುಧವಾರ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಅಲ್ಲದೆ, ಈ ಸಭೆಯಲ್ಲಿ ಕೊರೋನಾ ವೈರಸ್ ಅನ್ನು ಎದುರಿಸಲು ದೇಶದ ಆರೋಗ್ಯ ವ್ಯವಸ್ಥೆ ಎಷ್ಟು ಸನ್ನದ್ಧವಾಗಿದೆ ಎಂಬುದನ್ನೂ ಒಳಗೊಂಡಂತೆ ಪರೀಕ್ಷಾ ಸೌಲಭ್ಯಗಳ ಲಭ್ಯತೆ ಕುರಿತು ಚರ್ಚೆ ನಡೆಸಲಾಯಿತು ಎಂದು ಪ್ರಧಾನಿ ಸಚಿವಾಲಯ ತಿಳಿಸಿದೆ.
PM Shri @narendramodi will address the nation on 19th March 2020 at 8 PM, during which he will talk about issues relating to COVID-19 and the efforts to combat it.
— PMO India (@PMOIndia) March 18, 2020
ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಜಂಟಿ ಕಾರ್ಯತಂತ್ರವನ್ನು ಸಿದ್ಧಪಡಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಕಳೆದ ವಾರ ಸಾರ್ಕ್ ನಾಯಕರ ವೀಡಿಯೊ ಸಮ್ಮೇಳನದಲ್ಲೂ ಭಾಗವಹಿಸಿದ್ದರು.
ದೇಶದಲ್ಲಿ ಬುಧವಾರದ ಅಂಕಿ ಅಂಶದ ಪ್ರಕಾರ ಒಟ್ಟು 151 ಜನ ಮಾರಣಾಂತಿಕ ಕೊರೋನಾ ವೈರಸ್ಗೆ ತುತ್ತಾಗಿದ್ದರೆ, ಕರ್ನಾಟಕದ ಕಲಬುರ್ಗಿ ಪ್ರಕರಣವೂ ಸೇರಿದಂತೆ ದೇಶದಲ್ಲಿ ಈ ವೈರಸ್ಗೆ ಈವರೆಗೆ ಮೂವರು ಬಲಿಯಾಗಿದ್ದಾರೆ.
ಇದನ್ನೂ ಓದಿ : ಕೊರೋನಾ ಭೀತಿ; ಇಂದಿನ ಮಂತ್ರಾಲಯ ಬಂದ್, 11ವರ್ಷದ ಬಳಿಕ ರಾಯರ ಭಕ್ತರಿಗಿಲ್ಲ ದರ್ಶನ ಭಾಗ್ಯ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ