HOME » NEWS » Coronavirus-latest-news » PM MODI HELD A MEETING WITH ALL STATES CMS FOR DISCUSS ABOUT CORONA SECOND WAVE DBDEL LG

2ನೇ ಹಂತದ ಕೊರೋನಾ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆ; ಇಂದು ಪ್ರಧಾನಿ ಹಾಗೂ ಸಿಎಂಗಳ ನಡುವೆ ಮಹತ್ವದ ಸಭೆ

ಕೊರೊನಾ‌ ನಿಯಂತ್ರಣಕ್ಕೆ ರಾಜ್ಯ ಸರ್ಕಾರಗಳು ಜಾರಿ ಮಾಡಿರುವ ಕಟ್ಟುನಿಟ್ಟಿನ ನಿಯಮಗಳ  ಬಗ್ಗೆ ಚರ್ಚೆ, ಕೊರೊನಾ ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ವಿಕೇಂಡ್ ಲಾಕ್ಡೌನ್, ನೈಟ್ ಕರ್ಫ್ಯೂ ಮತ್ತಿತರ ಕ್ರಮಗಳನ್ನು ಜಾರಿ ಮಾಡುವ ಬಗ್ಗೆ, ದೇಶದ್ಯಾಂತ 18 ವರ್ಷ ಮೇಲ್ಪಟ್ಟ ಎರೆಲ್ಲರಿಗೂ ಕೊರೋನಾ ಲಸಿಕೆ ನೀಡುವ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಯುವ ಸಾಧ್ಯತೆ ಇದೆ.

news18-kannada
Updated:April 8, 2021, 8:56 AM IST
2ನೇ ಹಂತದ ಕೊರೋನಾ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆ; ಇಂದು ಪ್ರಧಾನಿ ಹಾಗೂ ಸಿಎಂಗಳ ನಡುವೆ ಮಹತ್ವದ ಸಭೆ
ನರೇಂದ್ರ ಮೋದಿ
  • Share this:
ನವದೆಹಲಿ(ಏ. 8): ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ‌ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದೆ.‌ ಹಲವು ನಿರ್ಬಂಧಗಳ ನಡುವೆಯೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಕೊರೋನಾ ಸೋಂಕಿತರು ಪತ್ತೆ ಆಗುತ್ತಿದೆ. ಈಗ ಪ್ರತಿ ದಿನ ಲಕ್ಷಕ್ಕೂ ಹೆಚ್ಚು ಪ್ರಕರಣಗಳು ಕಂಡು ಬರಲು ಆರಂಭಿಸಿವೆ. ಇದೂ ಅಲ್ಲದೆ ಲಸಿಕೆ ಪಡೆದವರು ಕೂಡ ಕೊರೋನಾ ಪಾಸಿಟಿವ್ ಆಗುತ್ತಿದ್ದಾರೆ. ಇದು ಇನ್ನೊಂದು ಬಗೆಯ ಭಯ ಸೃಷ್ಟಿ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಇವತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಎಲ್ಲಾ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ನಡುವೆ ಮಹತ್ವದ ಸಭೆ ನಡೆಯಲಿದೆ.

ಇದು ಕೊರೊನಾ ಎರಡನೇ ಅಲೆ ಶುರುವಾದ ಬಳಿಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಎಲ್ಲಾ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ನಡುವೆ ನಡೆಯುತ್ತಿರುವ ಎರಡನೇ ಸಭೆ. ದೇಶದಲ್ಲಿ ದಾಖಲಾಗುತ್ತಿರುವ ಒಟ್ಟು ಕೊರೋನಾ ಪ್ರಕರಣಗಳ ಪೈಕಿ ಶೇಕಡಾ 90ರಷ್ಟು ಮಹಾರಾಷ್ಟ್ರ, ಕರ್ನಾಟಕ, ಪಂಜಾಬ್, ಕೇರಳ, ಛತ್ತೀಸ್ಗಢ, ಉತ್ತರ ಪ್ರದೇಶ, ಗುಜರಾತ್, ತಮಿಳುನಾಡು, ದೆಹಲಿ, ಮಧ್ಯಪ್ರದೇಶ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಕಂಡು ಬರುತ್ತಿವೆ. ಈ‌ ಹಿನ್ನೆಲೆಯಲ್ಲಿ ಈ 11 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಆದ್ಯತೆ ಮೇರೆಗೆ ಚರ್ಚೆ ನಡೆಸಲಾಗುತ್ತದೆ.

ಬೆಳಗಾವಿ ಲೋಕಸಭಾ ಉಪಚುನಾವಣೆ; ಸಿಎಂ ಬಿ ಎಸ್ ಯಡಿಯೂರಪ್ಪ ಭರ್ಜರಿ ಮತ ಬೇಟೆ

ಸಂಜೆ 6.30ಕ್ಕೆ ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆಯುವ ಸಭೆಯಲ್ಲಿ ವಿಶೇಷವಾಗಿ ಕೊರೊನಾ‌ ನಿಯಂತ್ರಣಕ್ಕೆ ರಾಜ್ಯ ಸರ್ಕಾರಗಳು ಜಾರಿ ಮಾಡಿರುವ ಕಟ್ಟುನಿಟ್ಟಿನ ನಿಯಮಗಳ  ಬಗ್ಗೆ ಚರ್ಚೆ, ಕೊರೊನಾ ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ವಿಕೇಂಡ್ ಲಾಕ್ಡೌನ್, ನೈಟ್ ಕರ್ಫ್ಯೂ ಮತ್ತಿತರ ಕ್ರಮಗಳನ್ನು ಜಾರಿ ಮಾಡುವ ಬಗ್ಗೆ, ದೇಶದ್ಯಾಂತ 18 ವರ್ಷ ಮೇಲ್ಪಟ್ಟ ಎರೆಲ್ಲರಿಗೂ ಕೊರೋನಾ ಲಸಿಕೆ ನೀಡುವ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಯುವ ಸಾಧ್ಯತೆ ಇದೆ.

ಈಗಾಗಲೇ ಅತಿ ಹೆಚ್ಚು ಕೊರೋನಾ ಪ್ರಕರಣಗಳು ದಾಖಲಾಗುತ್ತಿರುವ 11 ರಾಜ್ಯಗಳಾದ ಮಹಾರಾಷ್ಟ್ರ, ಕರ್ನಾಟಕ, ಪಂಜಾಬ್, ಕೇರಳ, ಛತ್ತೀಸ್ಗಢ, ಉತ್ತರ ಪ್ರದೇಶ, ಗುಜರಾತ್, ತಮಿಳುನಾಡು, ದೆಹಲಿ, ಮಧ್ಯಪ್ರದೇಶ ಮತ್ತು ಪಶ್ಚಿಮ ಬಂಗಾಳದ ಆರೋಗ್ಯ ಸಚಿವ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಸಭೆ ನಡೆಸಿದ್ದಾರೆ. ಆ ಸಭೆಯಲ್ಲಿ ಆರೋಗ್ಯ ಸಚಿವರಿಂದ ಆಯಾ ರಾಜ್ಯಗಳ ಸದ್ಯದ ಪರಿಸ್ಥಿತಿ, ಅವುಗಳು ಜಾರಿ ಮಾಡಿರುವ ಕಟ್ಟು ನಿಟ್ಟಿನ ನಿಯಮಗಳ  ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಸಲಹೆ ಮತ್ತು ಶಿಫಾರಸುಗಳನ್ನು ಕಲೆ ಹಾಕಿದ್ದಾರೆ. ಅವೆಲ್ಲವುಗಳನ್ನು ಕ್ರೋಢೀಕರಿಸಿ ವರದಿ ತಯಾರಿಸಿದ್ದು ಆ ವರದಿ ಆಧರಿಸಿ ಪ್ರಧಾನಿ ಮೋದಿ ಸಿಎಂಗಳ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿದ ಬಳಿಕ ದೇಶದ್ಯಾಂತ ಏಕ ರೂಪದ ಮಾರ್ಗಸೂಚಿ ಪ್ರಕಟಿಸುವ ಸಾಧ್ಯತೆ ಇದೆ. 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವ ಬಗ್ಗೆ ಇಂದಿನ ಸಭೆಯಲ್ಲಿ ಹೆಚ್ಚು ಚರ್ಚೆಯಾಗುವ ಸಾಧ್ಯತೆ ಇದೆ. ಸಭೆ ಬಳಿಕ ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ ಸಂಭವ ಇದೆ.
Published by: Latha CG
First published: April 8, 2021, 8:56 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories