ಈ 10 ರಾಜ್ಯಗಳಲ್ಲಿ ಕೊರೋನಾ ನಿಯಂತ್ರಿಸಿದರೆ ಇಡೀ ದೇಶ ಕೋವಿಡ್ ಹೋರಾಟದಲ್ಲಿ ಗೆದ್ದಂತೆ; ಪ್ರಧಾನಿ ಮೋದಿ

ರಾಜ್ಯದಿಂದ ಉಪಮುಖ್ಯಮಂತ್ರಿಗಳಾದ ಡಾ. ಅಶ್ವಥ್‍ನಾರಾಯಣ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಹಾಗೂ ಹಿರಿಯ ಅಧಿಕಾರಿಗಳು ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದರು. ರಾಜ್ಯದಲ್ಲಿ ಕೋವಿಡ್ ನಿರ್ವಹಣೆಯ ಕುರಿತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಮಾಹಿತಿ ಒದಗಿಸಿದರು.

news18-kannada
Updated:August 11, 2020, 4:08 PM IST
ಈ 10 ರಾಜ್ಯಗಳಲ್ಲಿ ಕೊರೋನಾ ನಿಯಂತ್ರಿಸಿದರೆ ಇಡೀ ದೇಶ ಕೋವಿಡ್ ಹೋರಾಟದಲ್ಲಿ ಗೆದ್ದಂತೆ; ಪ್ರಧಾನಿ ಮೋದಿ
10 ರಾಜ್ಯಗಳ ಸಿಎಂಗಳೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಿದರು.
  • Share this:
ಬೆಂಗಳೂರು; ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಕೋವಿಡ್ 19 ನಿರ್ವಹಣೆಗೆ ಸಂಬಂಧಿಸಿದಂತೆ ಸಕ್ರಿಯ ಪ್ರಕರಣಗಳು ಹೆಚ್ಚಿರುವ 10 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು. ಸಭೆಯಲ್ಲಿ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳನಾಡು, ಬಿಹಾರ್, ಗುಜರಾತ್, ಪಂಜಾಬ್, ಪಶ್ಚಿಮ ಬಂಗಾಲ, ಉತ್ತರ ಪ್ರದೇಶ, ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು.

ಸಂವಾದದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು, ಕೋವಿಡ್ ಹೆಚ್ಚಾಗಿರುವ ರಾಜ್ಯಗಳಲ್ಲಿ ವಸ್ತುಸ್ಥಿತಿಯ ಬಗ್ಗೆ ಮಾಹಿತಿ ಪಡೆಯಲು ಈ ಸಭೆ ಆಯೋಜಿಸಲಾಗಿದೆ. ರಾಜ್ಯಗಳು ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದ್ದು, ತಂಡ ಸ್ಪೂರ್ತಿಯೊಂದಿಗೆ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದರು.

ಈ 10 ರಾಜ್ಯಗಳಲ್ಲಿ ಕೊರೋನಾವನ್ನು ಸಮರ್ಥವಾಗಿ ಎದುರಿಸಿದರೆ, ದೇಶವೇ ಈ ಹೋರಾಟದಲ್ಲಿ ಗೆದ್ದಂತೆ. ಸಾಂಕ್ರಾಮಿಕವನ್ನು ಗುರುತಿಸಿ, ತಡೆಗಟ್ಟುವಲ್ಲಿ ಉತ್ತಮ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ ಹಾಗೂ ಗುಣಮುಖರಾಗುವವರ ಸಂಖ್ಯೆ ಹೆಚ್ಚಾಗುತ್ತಿರುವುದು ನಮ್ಮ ಆತ್ಮವಿಶ್ವಾಸ ಹೆಚ್ಚಿಸಿದೆ ಹಾಗೂ ಜನರಲ್ಲಿ ಭೀತಿಯೂ ಕಡಿಮೆಯಾಗಿದೆ. ಮರಣ ಪ್ರಮಾಣವನ್ನು ಶೇ.1ಕ್ಕಿಂತ ಕಡಿಮೆ ಮಾಡಲು ನಾವು ಶ್ರಮಿಸಬೇಕಿದೆ. ಸಂಪರ್ಕ ಪತ್ತೆ, ಪರೀಕ್ಷೆ ಹಾಗೂ ಸರ್ವೇಕ್ಷಣಾ ವ್ಯವಸ್ಥೆ ಕೊರೋನಾ ನಿಯಂತ್ರಣದಲ್ಲಿ ಮಹತ್ವದ ಪಾತ್ರ ವಹಿಸಲಿದೆ. ಪ್ರಾರಂಭದಲ್ಲಿಯೇ ರೋಗ ಪತ್ತೆ ಮಾಡಿದಲ್ಲಿ ಸಾಂಕ್ರಾಮಿಕವನ್ನು ತಡೆಗಟ್ಟಲು ಸಾಧ್ಯವಿದೆ. 72 ಗಂಟೆಗಳೊಳಗಾಗಿ ಸೋಂಕಿತರನ್ನು ಹಾಗೂ ಅವರ ಸಂಪರ್ಕಿತರನ್ನು  ಪತ್ತೆ ಮಾಡುವ ವ್ಯವಸ್ಥೆ ಕಲ್ಪಿಸಬೇಕಿದೆ ಎಂದರು.

ರಾಜ್ಯದಿಂದ ಉಪಮುಖ್ಯಮಂತ್ರಿಗಳಾದ ಡಾ. ಅಶ್ವಥ್‍ನಾರಾಯಣ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಹಾಗೂ ಹಿರಿಯ ಅಧಿಕಾರಿಗಳು ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದರು. ರಾಜ್ಯದಲ್ಲಿ ಕೋವಿಡ್ ನಿರ್ವಹಣೆಯ ಕುರಿತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಮಾಹಿತಿ ಒದಗಿಸಿದರು.

ರಾಜ್ಯದಲ್ಲಿ ರೋಗ ಹರಡುವಿಕೆ ತಡೆಗಟ್ಟಲು ಹಾಗೂ ಜಾಗೃತಿ ಮೂಡಿಸುವ ಕಾರ್ಯಗಳನ್ನು ಕೈಗೊಳ್ಳಲು ಬೂತ್ ಮಟ್ಟದಲ್ಲಿ ತಂಡಗಳನ್ನು ರಚಿಸಲಾಗಿದೆ. ಅಲ್ಲದೇ ಪ್ರತಿದಿನ ಕೋವಿಡ್ ಪರೀಕ್ಷೆಯನ್ನು 20,000 ದಿಂದ 50 ಸಾವಿರಕ್ಕೆ ಹೆಚ್ಚಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಸಂಖ್ಯೆಯನ್ನು 75 ಸಾವಿರಕ್ಕೆ ಹೆಚ್ಚಿಸಲು ಯೋಜಿಸಲಾಗಿದೆ. ರಾಜ್ಯದಲ್ಲಿ ಐ.ಸಿ.ಎಂ.ಆರ್ ಅನುಮೋದಿತ 100 ಪ್ರಯೋಗಾಲಯಗಳಿದ್ದು, 1300 ಮೊಬೈಲ್ ಪರೀಕ್ಷಾ ತಂಡಗಳನ್ನು ನಿರ್ಬಂಧಿತ ಸ್ಥಳಗಳು ಹಾಗೂ ಬಫರ್ ವಲಯಗಳಲ್ಲಿ ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

43 ಖಾಸಗಿ ವೈದ್ಯಕೀಯ ಕಾಲೇಜುಗಳು ಹಾಗೂ 17 ಸರ್ಕಾರಿ ಕಾಲೇಜುಗಳು ಸೇರಿದಂತೆ ಶೇ.50 ರಷ್ಟು ಹಾಸಿಗೆಗಳನ್ನು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತ ಚಿಕಿತ್ಸೆಗೆ ಮೀಸಲಿಡಲಾಗಿದೆ. ಕರ್ನಾಟಕವು ಎಲ್ಲ ಸೋಂಕಿತರ ಪರೀಕ್ಷೆ ಹಾಗೂ ಚಿಕಿತ್ಸೆಯ ವೆಚ್ಚವನ್ನು ಖಾಸಗಿ ಆಸ್ಪತ್ರೆಗಳಿಂದ ಶಿಫಾರಸ್ಸಾಗಿ ಬಂದ ಪ್ರಕರಣಗಳನ್ನೂ ಒಳಗೊಂಡಂತೆ  ಭರಿಸುತ್ತಿದೆ. ಈಗಾಗಲೇ ಅಸ್ತಿತ್ವದಲ್ಲಿರುವ 1,04,000 ಹಾಸಿಗೆಗಳ ಜೊತೆಗೆ 10,100 ಹಾಸಿಗೆಗಳ ಸಾಮರ್ಥ್ಯ ಹೊಂದಿದ ಕೋವಿಡ್ ಕೇರ್ ಸೆಂಟರ್ ಅನ್ನು ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಸ್ಥಾಪಿಸಲಾಗಿದೆ. ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ಲಭ್ಯವಿರುವ 5500 ಆಕ್ಷಿಜನ್ ಬೆಡ್‍ಗಳೊಂದಿಗೆ 1600 ಬೆಡ್‍ಗಳನ್ನು ಸೇರ್ಪಡೆಗೊಳಿಸಲಾಗಿದೆ. ಆಗಸ್ಟ್ ಅಂತ್ಯದ ವೇಳೆಗೆ 5000 ಬೆಡ್‍ಗಳು ಲಭ್ಯವಾಗಲಿದೆ ರಾಜ್ಯದಲ್ಲಿ ಆಂಬ್ಯುಲೆನ್ಸ್‍ಗಳ ಸಂಖ್ಯೆಯನ್ನು  800 ರಿಂದ 2000 ಕ್ಕೆ ಹೆಚ್ಚಿಸಲಾಗಿದೆ.  ಸಾಮಾಜಿಕ ಅಂತರ  ಹಾಗೂ ಮಾಸ್ಕ್ ಧರಿಸುವ ನಿಯಮ ಉಲ್ಲಂಘಿಸಿದ 2,05,029 ಪ್ರಕರಣಗಳನ್ನು ದಾಖಲಿಸಿದ್ದು 6.65 ಕೋಟಿ ರೂ.ಗಳ ದಂಡ ಸಂಗ್ರಹಿಸಲಾಗಿದೆ. ಮರಣ ಪ್ರಮಾಣವನ್ನು ಕಡಿತಗೊಳಿಸುವುದು ನಮ್ಮ ಆದ್ಯತೆಯಾಗಿದ್ದು, ಈ ಸಂಬಂಧ ಪರೀಕ್ಷಾ ಪ್ರಮಾಣದಲ್ಲಿ ಹೆಚ್ಚಳ, ಸ್ಯಾಂಪಲ್ ಸಂಗ್ರಹ ಮತ್ತು ತ್ವರಿತ ಫಲಿತಾಂಶಗಳನ್ನು ಒದಗಿಸುವುದು ಹಾಗೂ ಮನೆಯಿಂದ ಆಸ್ಪತ್ರೆಗೆ ಸ್ಥಳಾಂತರವಾಗುವ ಸಮಯದಲ್ಲಿ ಕಡಿತವಾಗಿದೆ ಎಂದು ತಿಳಿಸಿದರು.

ಇದನ್ನು ಓದಿ: Coronavirus India Updates: ದೇಶದಲ್ಲಿ ಮುಂದುವರೆದ ಕೊರೋನಾ ಹಾವಳಿ; ಸೋಮವಾರ 53,601 ಪ್ರಕರಣಗಳು ಪತ್ತೆ

ಒಟ್ಟು ರಾಜ್ಯದಲ್ಲಿ 182354 ಪ್ರಕರಣಗಳ ಪೈಕಿ 79908 ಸಕ್ರಿಯ ಪ್ರಕರಣಗಳಿವೆ.  ರಾಜ್ಯವು ಪ್ರಸ್ತುತ 1.14 ಲಕ್ಷ ಕೋವಿಡ್ ಕೇರ್ ಕೇಂದ್ರಗಳ ಬೆಡ್‍ಗಳು, 20,000 ಸಾಮಾನ್ಯ ಬೆಡ್‍ಗಳು , 8000 ಆಕ್ಷಿಜನ್ ವ್ಯವಸ್ಥೆಯುಳ್ಳ ಬೆಡ್‍ಗಳು ಹಾಗೂ 3000 ಐ.ಸಿ.ಯು ಬೆಡ್ ಮತ್ತು 1500 ವೆಂಟಿಲೇಟರ್ ಉಳ್ಳ ಐ.ಸಿ.ಯು  ಬೆಡ್‍ಗಳನ್ನು ಹೊಂದಿದ್ದು ಪರಿಸ್ಥಿತಿಯನ್ನು ನಿಭಾಯಿಸಲು ಸನ್ನದ್ಧವಾಗಿದೆ. ಕೇಂದ್ರದಿಂದ 2025 ವೆಂಟಿಲೇಟರ್​ಗಳನ್ನು ಒದಗಿಸಲಾಗಿದೆ. ಸಮಗ್ರ ಡಾಟಾ ನಿರ್ವಹಣೆಗೆ ಬಿ.ಬಿ.ಎಂ.ಪಿ ಆರೋಗ್ಯ ಕೇಂದ್ರಗಳು ಹಾಗೂ ರಾಷ್ಟ್ರೀಯ ಕಾರ್ಯಕ್ರಮಗಳು ಸಂಯೋಜಿತವಾಗಿದೆ. ಕೋವಿಡ್ ಸಂಬಂಧಿತ ಚಟುವಟಿಕೆಗಳಿಗೆ ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಅಂತಿಮ ವರ್ಷದ ಪೂರ್ವದಲ್ಲಿರುವ ಪ್ಯಾರಾ ಮೆಡಿಕಲ್ ಮತ್ತು  ವೈದ್ಯಕೀಯ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ಅನುಮತಿ ಕೋರಲಾಗಿದೆ. ವೈದ್ಯಕೀಯ ಕಾಲೇಜುಗಳಲ್ಲಿ ಪ್ರತಿ ವರ್ಷ 10,000 ಪದವಿ ಮತ್ತು 2,000 ಸ್ನಾತಕೋತ್ತರ ಸೀಟುಗಳನ್ನು ಹೆಚ್ಚಿಸಲು ಮನವಿ ಮಾಡಲಾಯಿತು.
Published by: HR Ramesh
First published: August 11, 2020, 4:08 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading