ನವದೆಹಲಿ (ನ.30): ದೇಶದಲ್ಲಿ ಕೊರೋನಾ ಸೋಂಕು ಕಡಿಮೆಯಾಗುತ್ತಿದೆ ಎನ್ನುವ ಹೊತ್ತಿಗೆ ಮತ್ತೆ ಪ್ರಕರಣ ಸಂಖ್ಯೆ ಹೆಚ್ಚಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನಲೆ ಈ ಕುರಿತು ನಾಯಕರ ಜೊತೆ ಚರ್ಚೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಸರ್ವ ಪಕ್ಷ ಸಭೆ ನಡೆಸಲು ಮುಂದಾಗಿದ್ದಾರೆ. ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಗೆ ಗೃಹ ಸಚಿವ ಅಮಿತ್ ಶಾ, ಅರೋಗ್ಯ ಸಚಿವ ಹರ್ಷ ವರ್ಧನ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಅರ್ಜುನ್ ರಾಮ್ ಮೇಘಾವಲ್ ಮತ್ತು ವಿ ಮುರಳೀಧರನ್ ಸೇರಿದಂತೆ ಕ್ಯಾಬಿನೆಟ್ ಕಾರ್ಯದರ್ಶಿ ರಾಜೀವ್ ಗೌಬಾ ಇತರ ಅಧಿಕಾರಿಗಳು ಹಾಜರಿರಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿರುವ ಈ ಸಭೆ ಶುಕ್ರವಾರ ಬೆಳಗ್ಗೆ 10.30ಕ್ಕೆ ನಡೆಯಲಿದೆ. ಸಿಎನ್ಎನ್ ನ್ಯೂಸ್ 18ಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ, ಈಗಾಗಲೇ ರಾಜ್ಯಸಭೆ ಮತ್ತು ಲೋಕಸಭೆಯ ಎಲ್ಲಾ ಮುಖಂಡರಿಗೆ ಈಗಾಗಲೇ ಆಹ್ವಾನ ನೀಡಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
Government of India calls an all-party meeting of floor leaders in Rajya Sabha and Lok Sabha on December 4 to discuss #COVID19 situation: Sources
— ANI (@ANI) November 30, 2020
ಇದನ್ನು ಓದಿ: ಜನವರಿಯಲ್ಲಿ ರಜನಿಕಾಂತ್ ರಾಜಕೀಯ ಪ್ರವೇಶ ಸಾಧ್ಯತೆ; ಶೀಘ್ರದಲ್ಲಿಯೇ ನಿರ್ಧಾರ ಎಂದ ಸೂಪರ್ಸ್ಟಾರ್
ವಿಶ್ವದಲ್ಲಿಯೇ ಅಮೆರಿಕ ಬಳಿಕ ಭಾರತದಲ್ಲಿ ಅತಿ ಹೆಚ್ಚು ಕೊರೋನಾ ಪ್ರಕರಣಗಳು ಕಂಡು ಬರುತ್ತಿದೆ. ಆದರೆ, ಜಾಗತಿಕವಾಗಿ ಭಾರತದಲ್ಲಿ ಸಾವಿನ ಸಂಖ್ಯೆ ಕಡಿಮೆಯಾಗಿದೆ. ಈ ನಡುವೆಗೆ ಕೋವಿಡ್ಗೆ ಯಾವಾಗ ಚುಚ್ಚುಮದ್ದು ಸಿಗಲಿದೆ ಎಂಬ ಪ್ರಶ್ನೆ ಕೂಡ ಮೂಡಿದೆ. ಇನ್ನು ಶನಿವಾರ ದೇಶದ ಲಸಿಕಾ ಉತ್ಪಾದನಾ ಕೇಂದ್ರಗಳಿಗೆ ಭೇಟಿ ನೀಡಿದ ಪ್ರಧಾನಿಗಳು ಈ ಕುರಿತು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಲಸಿಕೆ ಉತ್ಪಾದನಾ ಪ್ರಕ್ರಿಯೆ ಎಲ್ಲಿವರೆಗೆ ಬಂದಿದೆ ಎಂಬ ಕುರಿತು ಕೇಂದ್ರಗಳ ವಿಜ್ಞಾನಿಗಳೊಂದಿಗೆ ಚರ್ಚೆ ನಡೆಸಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ