ಮಾರಕ ಕೊರೋನಾ ವೈರಸ್ ವಿರುದ್ಧ ಹೋರಾಡುವ ಸಂಬಂಧ ಪ್ರಧಾನಿ ಮೋದಿ, ಅಮೆರಿಕ ಅಧ್ಯಕ್ಷ ಟ್ರಂಪ್ ದೂರವಾಣಿ ಸಂಭಾಷಣೆ

ಅಮೆರಿಕದಲ್ಲಿ 2,78,458 ಕೊರೋನಾ ಸೋಂಕಿತರ ಪ್ರಕರಣಗಳು ಕಂಡುಬಂದಿದ್ದು, ಈವರೆಗೂ ಮಾರಕ ಸೋಂಕಿನಿಂದ 7,100 ಮಂದಿ ಬಲಿಯಾಗಿದ್ದಾರೆ. ಭಾರತದಲ್ಲಿ 3,072 ಕೊರೋನಾ ಪ್ರಕರಣಗಳು ಕಂಡುಬಂದಿದ್ದು, 75 ಮಂದಿ ಈ ಸೋಂಕಿನಿಂದ ಅಸುನೀಗಿದ್ದಾರೆ. 

ಅಮೆರಿಕ ಅಧ್ಯಕ್ಷ ಟ್ರಂಪ್ ಮತ್ತು ಪ್ರಧಾನಿ ಮೋದಿ (ಸಂಗ್ರಹ ಚಿತ್ರ)

ಅಮೆರಿಕ ಅಧ್ಯಕ್ಷ ಟ್ರಂಪ್ ಮತ್ತು ಪ್ರಧಾನಿ ಮೋದಿ (ಸಂಗ್ರಹ ಚಿತ್ರ)

 • Share this:
  ನವದೆಹಲಿ: ವಿಶ್ವವನ್ನು ತಲ್ಲಣಗೊಳಿಸಿರುವ ಮಾರಕ ಕೊರೋನಾ ವೈರಸ್ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸುದೀರ್ಘವಾಗಿ ಮಾತುಕತೆ ನಡೆಸಿದ್ದಾರೆ. ಮತ್ತು  ಸಾಂಕ್ರಾಮಿಕ ಕಾಯಿಲೆ ವಿರುದ್ಧ ಹೋರಾಡಲು ಭಾರತ-ಅಮೆರಿಕ ಸಹಭಾಗಿತ್ವದ ಸಂಪೂರ್ಣ ಶಕ್ತಿಯನ್ನು ನಿಯೋಜಿಸುವ ಸಂಬಂಧ ಉಭಯ ನಾಯಕರು ಚರ್ಚಿಸಿದ್ದಾರೆ.

  ಈ ಇಬ್ಬರು ನಾಯಕರು ಶನಿವಾರ ಸಂಜೆ ಫೋನ್ ಮೂಲಕ ಸಂಭಾಷಣೆ ನಡೆಸಿದ್ದಾರೆ.

  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಟೆಲಿಫೋನ್ ಮೂಲಕ ಸಂಭಾಷಣೆ ನಡೆಸಲಾಗಿದೆ. ನಾವು ಅತ್ಯುತ್ತಮ ಚರ್ಚೆ ನಡೆಸಿದ್ದೇವೆ. ಮತ್ತು ಮಾರಕ ಕೋವಿಡ್-19 ವಿರುದ್ಧ ಹೋರಾಡಲು ಭಾರತ- ಅಮೆರಿಕ ಸಹಭಾಗಿತ್ವದ ಸಂಪೂರ್ಣ ಶಕ್ತಿ ವಿನಿಯೋಗಿಸಲಾಗುವುದು ಎಂದು ಪ್ರಧಾನಿ ಮೋದಿ ಅವರು ಸಂಭಾಷಣೆ ಬಳಿಕ ಟ್ವೀಟ್ ಮಾಡಿದ್ದಾರೆ.  ಎರಡು ದೇಶಗಳಲ್ಲೂ ಮಾರಕ ಕೊರೋನಾ ಸೋಂಕು ವ್ಯಾಪಕವಾಗೊ ಹರಡಿರುವ ಸಂದರ್ಭದಲ್ಲಿ ಈ ಇಬ್ಬರು ನಾಯಕರು ಮಾತುಕತೆ ನಡೆಸಿದ್ದಾರೆ.

  ಇದನ್ನು ಓದಿ: ಭಾರತದಲ್ಲಿ ಕೊರೋನಾ ಹಾವಳಿ: 3 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ; ಸಾವಿನ ಸಂಖ್ಯೆ 75ಕ್ಕೇರಿಕೆ

  ಅಮೆರಿಕದಲ್ಲಿ 2,78,458 ಕೊರೋನಾ ಸೋಂಕಿತರ ಪ್ರಕರಣಗಳು ಕಂಡುಬಂದಿದ್ದು, ಈವರೆಗೂ ಮಾರಕ ಸೋಂಕಿನಿಂದ 7,100 ಮಂದಿ ಬಲಿಯಾಗಿದ್ದಾರೆ. ಭಾರತದಲ್ಲಿ 3,072 ಕೊರೋನಾ ಪ್ರಕರಣಗಳು ಕಂಡುಬಂದಿದ್ದು, 75 ಮಂದಿ ಈ ಸೋಂಕಿನಿಂದ ಅಸುನೀಗಿದ್ದಾರೆ. 
  First published: