HOME » NEWS » Coronavirus-latest-news » PM MODI WILL SHARE VIDEO MESSAGE TO INDIAN TODAY 9 AM RH

ಕೊರೋನಾ ಬಿಕ್ಕಟ್ಟು; ಇಂದು 9 ಗಂಟೆಗೆ ದೇಶದ ಜನರಿಗಾಗಿ ವಿಡಿಯೋ ಸಂದೇಶ ಹಂಚಿಕೊಳ್ಳಲಿರುವ ಪ್ರಧಾನಿ ಮೋದಿ

ಒಂಭತ್ತು ಗಂಟೆಗೆ ನನ್ನ ದೇಶವಾಸಿಗಳಿಗೆ ಸಣ್ಣ ವಿಡಿಯೋ ಸಂದೇಶವನ್ನು ಹಂಚಿಕೊಳ್ಳಲಿದ್ದೇನೆ ಎಂದು ಪ್ರಧಾನಿ ಹೇಳಿದ್ದರು. ಕೊರೋನಾ ವೈರಸ್ ಬಿಕ್ಕಟ್ಟಿನ ಸಂದಿಗ್ಧ ಪರಿಸ್ಥಿತಿಯಲ್ಲಿ ಪ್ರಧಾನಿ ಮೋದಿ ಅವರು ನೀಡುವ ಸಂದೇಶಕ್ಕಾಗಿ ದೇಶದ ಪ್ರತಿಯೊಬ್ಬ ನಾಗರಿಕರು ಕಾಯುತ್ತಿದ್ದಾರೆ.

news18-kannada
Updated:April 3, 2020, 7:26 AM IST
ಕೊರೋನಾ ಬಿಕ್ಕಟ್ಟು; ಇಂದು 9 ಗಂಟೆಗೆ ದೇಶದ ಜನರಿಗಾಗಿ ವಿಡಿಯೋ ಸಂದೇಶ ಹಂಚಿಕೊಳ್ಳಲಿರುವ ಪ್ರಧಾನಿ ಮೋದಿ
ಪ್ರಧಾನಿ ಮೋದಿ.
  • Share this:
ನವದೆಹಲಿ: ದೇಶದಾದ್ಯಂತ ಕೊರೋನಾ ವೈರಸ್ ಅಟ್ಟಹಾಸ ಮುಂದವರೆದಿದ್ದು, ಸೋಂಕಿತರ ಸಂಖ್ಯೆ ಮತ್ತು ಮೃತಪಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಏತನ್ಮಧ್ಯೆ ಕೊರೋನಾ ವೈರಸ್ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಿಗೆ ವಿಡಿಯೋ ಸಂದೇಶವನ್ನು ಇಂದು ಬೆಳಗ್ಗೆ 9 ಗಂಟೆಗೆ ಬಿಡುಗಡೆ ಮಾಡಲುದ್ದಾರೆ. 

ಶುಕ್ರವಾರ ಬೆಳಗ್ಗೆ 9 ಗಂಟೆಗೆ ವಿಡಿಯೋವೊಂದನ್ನು ಬಿಡುಗಡೆ ಮಾಡುವುದಾಗಿ ಪ್ರಧಾನಿ ಮೋದಿ ಅವರು ಗುರುವಾರ ಸಂಜೆ ಟ್ವೀಟ್ ಮಾಡಿದ್ದರು. ಒಂಭತ್ತು ಗಂಟೆಗೆ ನನ್ನ ದೇಶವಾಸಿಗಳಿಗೆ ಸಣ್ಣ ವಿಡಿಯೋ ಸಂದೇಶವನ್ನು ಹಂಚಿಕೊಳ್ಳಲಿದ್ದೇನೆ ಎಂದು ಪ್ರಧಾನಿ ಹೇಳಿದ್ದರು. ಕೊರೋನಾ ವೈರಸ್ ಬಿಕ್ಕಟ್ಟಿನ ಸಂದಿಗ್ಧ ಪರಿಸ್ಥಿತಿಯಲ್ಲಿ ಪ್ರಧಾನಿ ಮೋದಿ ಅವರು ನೀಡುವ ಸಂದೇಶಕ್ಕಾಗಿ ದೇಶದ ಪ್ರತಿಯೊಬ್ಬ ನಾಗರಿಕರು ಕಾಯುತ್ತಿದ್ದಾರೆ.


ದೇಶದಲ್ಲಿ ಮಾರಕ ಸೋಂಕು ಹರಡಲು ಆರಂಭವಾದ ದಿನದಿಂದ ಈವರೆಗೆ ಪ್ರಧಾನಿ ಮೋದಿ ಅವರು ಎರಡು  ಬಾರಿ ದೇಶವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಕೊರೋನಾ ವೈರಸ್​ ನಿಯಂತ್ರಣಕ್ಕಾಗಿ ದೇಶವನ್ನು 21 ದಿನಗಳ ಕಾಲ ಲಾಕ್​ಡೌನ್ ಮಾಡುತ್ತಿರುವ ಪ್ರಧಾನಿ ಮೋದಿ ಮಾರ್ಚ್​ 24ರಂದು ಘೋಷಣೆ ಮಾಡಿದ್ದರು. ಇದರ ನಡುವೆ​ ಯೋಗಾಸನ ಮಾಡುವ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. ಇದೀಗ ದೇಶದ ಜನರಿಗೆ ಕೊರೋನಾ ವೈರಸ್ ಕುರಿತಾಗಿ ಇಂದು ವಿಡಿಯೋ ಸಂದೇಶ ಬಿಡುಗಡೆ ಮಾಡಲಿದ್ದಾರೆ.

ಇದನ್ನು ಓದಿ: ಲಾಕ್ ಡೌನ್ ನಂತರದ ಪರಿಸ್ಥಿತಿ ನಿಭಾಯಿಸಲು ತಂತ್ರ ರೂಪಿಸಿ: ರಾಜ್ಯ ಸರ್ಕಾರಗಳಿಗೆ ಪ್ರಧಾನಿ ಮೋದಿ ಸೂಚನೆ

ಕೊರೋನಾ ವೈರಸ್ ದಿನದಿಂದ ವ್ಯಾಪಕವಾಗಿ ಹಬ್ಬುತ್ತಲೇ ಇದ್ದು, ಏನೇ ಮಾಡಿದರೂ ನಿಯಂತ್ರಣಕ್ಕೆ ಬರುತ್ತಿಲ್ಲ. ಕೇಂದ್ರ ಸರ್ಕಾರದಿಂದ ಹಿಡಿದು ರಾಜ್ಯ ಸರ್ಕಾರಗಳು ವೈರಸ್ ನಿಯಂತ್ರಣಕ್ಕಾಗಿ ಸಕಲ ರೀತಿಯ ಸರ್ಕಸ್​ಗಳನ್ನು ಮಾಡುತ್ತಿದ್ದರೂ ಸೋಂಕು ಎಲ್ಲೆ ಮೀರಿ ಹರಡುತ್ತಿದೆ. ಮಾರಕ ಸೋಂಕು ನಿಯಂತ್ರಣ ಸಂಬಂಧ ರಾಜ್ಯ ಸರ್ಕಾರಗಳು ತೆಗೆದುಕೊಂಡಿರುವ ಕ್ರಮಗಳ ವಿಷಯವಾಗಿ ಗುರುವಾರ ಪ್ರಧಾನಿ ಮೋದಿ ಅವರು ಕರ್ನಾಟಕವೂ ಸೇರಿದಂತೆ 11 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದರು.
First published: April 3, 2020, 7:26 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories