HOME » NEWS » Coronavirus-latest-news » PM NARENDRA MODI CALLS ALL DCS MEETING AT TODAY FOR DISCUSS ABOUT CORONAVIRUS PANDEMIC DBDEL LG

PM Narendra Modi: ಕೊರೋನಾ ಹೆಚ್ಚಳ ಹಿನ್ನೆಲೆ; ಇಂದು ಡಿಸಿಗಳ ಜೊತೆ ಸಭೆ ನಡೆಸಲಿರುವ ಪ್ರಧಾನಿ ಮೋದಿ

ಇಂದು ಬೆಳಿಗ್ಗೆ 11 ಗಂಟೆಗೆ ಅತ್ಯಂತ ಹೆಚ್ಚು ಕೊರೋನಾ ಪ್ರಕರಣಗಳಿರುವ ಕರ್ನಾಟಕ, ಬಿಹಾರ, ತಮಿಳುನಾಡು, ಅಸ್ಸಾಂ, ಚಂಡೀಗಢ, ಉತ್ತರಖಂಡ, ಮಧ್ಯಪ್ರದೇಶ, ಗೋವಾ, ಹಿಮಾಚಲ ಪ್ರದೇಶ, ದೆಹಲಿ ರಾಜ್ಯಗಳ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಇದಲ್ಲದೆ ಮೇ 20ರಂದು ಉಳಿದ ರಾಜ್ಯಗಳ ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.

news18-kannada
Updated:May 18, 2021, 7:35 AM IST
PM Narendra Modi: ಕೊರೋನಾ ಹೆಚ್ಚಳ ಹಿನ್ನೆಲೆ; ಇಂದು ಡಿಸಿಗಳ ಜೊತೆ ಸಭೆ ನಡೆಸಲಿರುವ ಪ್ರಧಾನಿ ಮೋದಿ
ನರೇಂದ್ರ ಮೋದಿ.
  • Share this:
ನವದೆಹಲಿ(ಮೇ 18): ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ‌ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸಿದೆ.‌ ಪ್ರತಿ ದಿನ ಮೂರು ಲಕ್ಷದಷ್ಟು ಜನ ಸೋಂಕು ಪೀಡಿತರು ಪತ್ತೆಯಾಗುತ್ತಿದ್ದಾರೆ. ಪ್ರತಿ ದಿನ ನಾಲ್ಕು ಸಾವಿರಕ್ಕೂ ಹೆಚ್ಚು ಜನ ಕೊರೋನಾದಿಂದ ಸಾಯುತ್ತಿದ್ದಾರೆ. ಇಷ್ಟಾದರೂ ಕೇಂದ್ರ ಸರ್ಕಾರ ರಾಜ್ಯಗಳಿಗೆ ಅಗತ್ಯ ಇರುವಷ್ಟು ಕೊರೋನಾ ಲಸಿಕೆ ಪೂರೈಕೆ ಮಾಡುತ್ತಿಲ್ಲ. ಇದರಿಂದ ಮೂರನೇ ಹಂತದ ಕೊರೋನಾ ಲಸಿಕೆ ಹಾಕುವ ಕಾರ್ಯಕ್ರಮ ವಿಫಲವಾಗಿದೆ. ಇನ್ನೊಂದೆಡೆ ಆಮ್ಲಜನಕದ ಸಮಸ್ಯೆ ಆಕಾಶದೆತ್ತರಕ್ಕೆ ಬೆಳೆದು ನಿಂತಿದೆ. ಈ ಎಲ್ಲಾ ಸಮಸ್ಯೆಗಳ ನಡುವೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.

ಇಂದು ಬೆಳಿಗ್ಗೆ 11 ಗಂಟೆಗೆ ಅತ್ಯಂತ ಹೆಚ್ಚು ಕೊರೋನಾ ಪ್ರಕರಣಗಳಿರುವ ಕರ್ನಾಟಕ, ಬಿಹಾರ, ತಮಿಳುನಾಡು, ಅಸ್ಸಾಂ, ಚಂಡೀಗಢ, ಉತ್ತರಖಂಡ, ಮಧ್ಯಪ್ರದೇಶ, ಗೋವಾ, ಹಿಮಾಚಲ ಪ್ರದೇಶ, ದೆಹಲಿ ರಾಜ್ಯಗಳ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಇದಲ್ಲದೆ ಮೇ 20ರಂದು ಉಳಿದ ರಾಜ್ಯಗಳ ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.

ಕೊರೋನಾ ಸಂಬಂಧ 11ಕ್ಕೂ ಹೆಚ್ಚು ದೇಶಗಳ ರಾಜತಾಂತ್ರಿಕರ ಜತೆ ಡಿಸಿಎಂ ಮಾತುಕತೆ ಮಹತ್ವದ ಚರ್ಚೆ

ಸಭೆಯಲ್ಲಿ ಜಿಲ್ಲೆಗಳಲ್ಲಿ ಕೊರೋನಾದ ಪರಿಸ್ಥಿತಿಯ ಪರಿಶೀಲನೆ ಮಾಡಲಾಗುತ್ತದೆ. ಅಲ್ಲದೆ ಮೇ 1ರಿಂದ ಆರಂಭವಾಗಿರುವ ಮೂರನೇ ಹಂತದ ಕೊರೋನಾ ಲಸಿಕೆ ನೀಡುವ ಕಾರ್ಯಕ್ರಮ ಹೇಗೆ ನಡೆಯುತ್ತಿದೆ ಎಂಬುದರ ಬಗ್ಗೆ ಮತ್ತು ಇನ್ನಷ್ಟು ಹೆಚ್ಚಿಸುವ ಕುರಿತು ಚರ್ಚೆ ನಡೆಯಲಿದೆ. ಜಿಲ್ಲಾಧಿಕಾರಿಗಳಿಂದ ಸದ್ಯದ ಪರಿಸ್ಥಿತಿ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತದೆ. ಕೊರೋನಾ ಅಂಕಿ ಅಂಶಗಳು‌ ಸರಿಯಾಗಿ ಇಲ್ಲ ಎನ್ನುವ ಹಿನ್ನೆಲೆಯಲ್ಲಿ ಪ್ರಕರಣಗಳ ವಿಷಯದಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳುವ ಬಗ್ಗೆ ಚರ್ಚೆ ಮಾಡಲಾಗುತ್ತದೆ.

ಕೊರೊನಾ ನಿಯಂತ್ರಣ ಮಾಡುವುದು ಹೇಗೆ ಎಂಬ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ವಿಶೇಷವಾಗಿ ಗ್ರಾಮೀಣ ಭಾಗದಲ್ಲಿ ನಿಯಂತ್ರಿಸುವ ಬಗ್ಗೆ ಸಮಾಲೋಚನೆ ನಡೆಸಲಾಗುತ್ತದೆ‌. ಇದಲ್ಲದೆ ಕೊರೋನಾ ಲಸಿಕೆಗಳ ಕೊರತೆಯ ನಡುವೆಯೂ ವ್ಯಾಕ್ಸಿನೇಷನ್‌ ಹೆಚ್ಚಿಸುವ ಬಗ್ಗೆ ಚರ್ಚಿಸಲಾಗುತ್ತದೆ. ಔಷಧೀಯ ಉತ್ಪನ್ನಗಳ ಸಮರ್ಪಕ ಪೂರೈಕೆ ಮತ್ತು ಬಳಕೆ ಬಗ್ಗೆ ಸಮಾಲೋಚನೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.

ಭಾನುವಾರ 2,81,386 ಪ್ರಕರಣಗಳು ಪತ್ತೆಯಾಗಿವೆ. ಡಿಸ್ಚಾರ್ಜ್ ಆದವರು 3,78,741 ಜನ. ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ 2,49,65,463ಕ್ಕೆ ಏರಿಕೆ ಆಗಿದೆ.‌ ದಿನದಿಂದ ದಿನಕ್ಕೆ ಕೊರೋನಾ ರೋಗಕ್ಕೆ ಬಲಿ ಆಗುತ್ತಿರುವವರ ಸಂಖ್ಯೆ ಕೂಡ‌ ಹೆಚ್ಚಾಗಿದೆ. ಭಾನುವಾರ 4,106 ಜನರು ಬಲಿ ಆಗಿದ್ದು ಈವರೆಗೆ ಕೊರೋನಾದಿಂದ ಸತ್ತವರ ಸಂಖ್ಯೆ 2,74,390ಕ್ಕೆ ಏರಿಕೆ ಆಗಿದೆ.
Youtube Video
ದೇಶದಲ್ಲಿ ಮೊದಲ ಬಾರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು 2020ರ ಜನವರಿ 30ರಂದು; ಕೇರಳದಲ್ಲಿ. ಆಗ ಸೋಂಕು ಪೀಡಿತರ ಸಂಖ್ಯೆ ಲಕ್ಷದ ಗಡಿ ಬಳಿ ಬರಲು ಹೆಚ್ಚು ಕಡಿಮೆ ಎಂಟು ತಿಂಗಳು ಹಿಡಿದವು. ಆಗಲೂ ದಿನ ಒಂದರಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಲಕ್ಷ ದಾಟಿರಲಿಲ್ಲ. 2020ರ ಸೆಪ್ಟೆಂಬರ್ 17ರಂದು 98,795 ಕೇಸ್ ಕಂಡುಬಂದಿದ್ದೇ ಅತಿಹೆಚ್ಚಾಗಿತ್ತು.
Published by: Latha CG
First published: May 18, 2021, 7:35 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories