ದೇಶದ ಆರ್ಥಿಕತೆ ಕುಸಿತ: ನಾಳೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಪರಿಶೀಲನಾ ಸಭೆ

ಕೊರೋನಾ ಮತ್ತು ಲಾಕ್ಡೌನ್ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಘೋಷಿಸಿದ್ದ 20 ಲಕ್ಷ ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜಿನಲ್ಲಿ ಅತಿ ಸಣ್ಣ, ಸಣ್ಣ, ಮಧ್ಯಮ ಪ್ರಮಾಣದ ಕೈಗಾರಿಕಾ (ಎಂಎಸ್‌ಎಂಇ) ವಲಯಕ್ಕೆ 3 ಲಕ್ಷ ಕೋಟಿ ರೂಪಾಯಿಗಳನ್ನು ಸಾಲ ನೀಡಲು ಮೀಸಲಿಡಲಾಗಿತ್ತು.

ಪ್ರಧಾನಿ ನರೇಂದ್ರ ಮೋದಿ.

ಪ್ರಧಾನಿ ನರೇಂದ್ರ ಮೋದಿ.

  • Share this:
ನವದೆಹಲಿ(ಜು.28): ಕೊರೋನಾ ಶುರುವಾಗುವ ಮುನ್ನವೇ ದೇಶದ ಆರ್ಥಿಕತೆಯಲ್ಲಿ ಕುಸಿತ ಕಂಡು ಬಂದಿತ್ತು. ಲಾಕ್ಡೌನ್ ಜಾರಿಯಿಂದ ಪಾತಾಳಮುಖಿಯಾಗಿದೆ. ಕಡುಕಷ್ಟದಲ್ಲಿರುವ ದೇಶದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಪರಮಾರ್ಶೆ ನಡೆಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಳೆ (ಜುಲೈ 29ರಂದು) ಮಹತ್ವದ ಸಭೆ ಕರೆದಿದ್ದಾರೆ.

ಈ ಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಹಣಕಾಸು ಇಲಾಖೆಯ ರಾಜ್ಯ ಸಚಿವ ಅನುರಾಗ್ ಠಾಕೂರ್, ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳು, ಪಿಎಸ್‌ಯು ಬ್ಯಾಂಕುಗಳ ಮುಖ್ಯಸ್ಥರು ಹಾಗೂ ಎನ್‌ಬಿಎಫ್‌ಸಿ ಮುಖ್ಯಸ್ಥರು ಭಾಗಿಯಾಗಲಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಭೆ ನಡೆಯಲಿದೆ.

ಸಭೆಯಲ್ಲಿ ಮುಖ್ಯವಾಗಿ ಅತಿ ಸಣ್ಣ, ಸಣ್ಣ, ಮಧ್ಯಮ ಪ್ರಮಾಣದ ಕೈಗಾರಿಕಾ (ಎಂಎಸ್‌ಎಂಇ) ವಲಯಕ್ಕೆ ನೀಡಲಾಗಿರುವ ಯೋಜನೆಗಳ ಬಗ್ಗೆ ಪರಿಶೀಲನೆ ನಡೆಯಲಿದೆ ಎಂದು ತಿಳಿದುಬಂದಿದೆ.

ಕೊರೋನಾ ಮತ್ತು ಲಾಕ್ಡೌನ್ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಘೋಷಿಸಿದ್ದ 20 ಲಕ್ಷ ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜಿನಲ್ಲಿ ಅತಿ ಸಣ್ಣ, ಸಣ್ಣ, ಮಧ್ಯಮ ಪ್ರಮಾಣದ ಕೈಗಾರಿಕಾ (ಎಂಎಸ್‌ಎಂಇ) ವಲಯಕ್ಕೆ 3 ಲಕ್ಷ ಕೋಟಿ ರೂಪಾಯಿಗಳನ್ನು ಸಾಲ ನೀಡಲು ಮೀಸಲಿಡಲಾಗಿತ್ತು.

ದೇಶದ ಆರ್ಥಿಕತೆಯ ಬೆನ್ನೆಲುಬಾಗಿರುವ ಅತಿ ಸಣ್ಣ, ಸಣ್ಣ, ಮಧ್ಯಮ ಪ್ರಮಾಣದ ಕೈಗಾರಿಕಾ(ಎಂಎಸ್‌ಎಂಇ) ವಲಯಕ್ಕೆ ಉತ್ತೇಜನ ನೀಡಬೇಕು. ಅತಿ ಸಣ್ಣ, ಸಣ್ಣ, ಮಧ್ಯಮ ಪ್ರಮಾಣದ ಕೈಗಾರಿಕಾ ವಲಯದ ಹಿಂಜರಿತ, ನಿರುದ್ಯೋಗ ಸಮಸ್ಯೆ ಬಗೆಹರಿಸಬೇಕೆಂದು 3 ಲಕ್ಷ ಕೋಟಿ ರೂಪಾಯಿಗಳನ್ನು ಸಾಲ ನೀಡಲು ಮೀಸಲಿಡಲಾಗಿತ್ತು.

ನಂತರ ಬ್ಯಾಂಕುಗಳಿಗೂ ಅತಿ ಸಣ್ಣ, ಸಣ್ಣ, ಮಧ್ಯಮ ಪ್ರಮಾಣದ ಕೈಗಾರಿಕಾ (ಎಂಎಸ್‌ಎಂಇ) ವಲಯಕ್ಕೆ ಸಾಲ ನೀಡಲು ಸೂಚಿಸಲಾಗಿತ್ತು. ಈ ಹಿನ್ನಲೆಯಲ್ಲಿ ಬ್ಯಾಂಕ್‌ಗಳು ನೀಡುವ ಸಾಲಗಳ ಪ್ರಮಾಣದ ಬಗ್ಗೆ ನಾಳಿನ ಸಭೆಯಲ್ಲಿ ಪರಿಶೀಲನೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Central Cabinet Meeting: ಅನ್​ಲಾಕ್​​ -3.0: ನಾಳೆ ಕೇಂದ್ರ ಸಚಿವ ಸಂಪುಟ ಮಹತ್ವದ ಸಭೆ

ಇದಲ್ಲದೆ ಸ್ವಾವಲಂಬಿ ಭಾರತ ಪ್ಯಾಕೇಜ್ ಅನುಷ್ಠಾನದ ಪ್ರಕ್ರಿಯೆಗಳು ಹೇಗೆ ನಡೆಯುತ್ತಿವೆ ಎನ್ನುವುದರ ಪರಮಾರ್ಶೆ ಕೂಡ ಆಗಲಿದೆ ಎನ್ನಲಾಗುತ್ತಿದೆ.
Published by:Ganesh Nachikethu
First published: