ಇಂದು ಕೂಡ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ಸಭೆ; ಕೊರೋನಾ ಪರಿಸ್ಥಿತಿ ಅವಲೋಕನ

ದೇಶದಲ್ಲೇ ಅತಿಹೆಚ್ಚು‌ ಕೊರೊನಾ ಪೀಡಿತರಿರುವ ಮಹಾರಾಷ್ಟ್ರ, ದೆಹಲಿ, ಗುಜರಾತ್ ಮತ್ತು ತಮಿಳುನಾಡು ಮುಖ್ಯಮಂತ್ರಿಗಳ ಜೊತೆ ಈ ರಾಜ್ಯಗಳಿಗೆ ಪ್ರತ್ಯೇಕವಾದ ಕಾರ್ಯಯೋಜನೆ ರೂಪಿಸುವ ಬಗ್ಗೆ ಚರ್ಚೆ ನಡೆಸಬಹುದು ಎಂದು ತಿಳಿದುಬಂದಿದೆ.

ನರೇಂದ್ರ ಮೋದಿ

ನರೇಂದ್ರ ಮೋದಿ

  • Share this:
ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕು ತೀವ್ರವಾಗಿ ಪ್ರಧಾನಿ ನರೇಂದ್ರ ಮೋದಿ ನಿನ್ನೆ ಮತ್ತು ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿದ್ದು, ಇಂದು 15 ರಾಜ್ಯಗಳ ಸಿಎಂಗಳ‌ ಜೊತೆ ಸಭೆ ನಡೆಸಲಿದ್ದಾರೆ. ಆ ಪೈಕಿ ಕರ್ನಾಟಕವೂ ಒಂದು.

ಇದು ದೇಶದಲ್ಲಿ ಕೊರೋನಾ ಕಷ್ಟ ಆರಂಭವಾದ ಮೇಲೆ ಪ್ರಧಾನಿ ನರೇಂದ್ರ ಮೋದಿ ಕಳೆದ 88 ದಿನಗಳಲ್ಲಿ ನಡೆಸುತ್ತಿರುವ 6ನೇ ಸಭೆಯಾಗಿದೆ. ಇದಕ್ಕೂ‌‌ ಮೊದಲು ಮಾರ್ಚ್ 20, ಏಪ್ರಿಲ್ 2, ಏಪ್ರಿಲ್ 11, ಏಪ್ರಿಲ್ 27 ಮತ್ತು ಮೇ 11 ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದರು.

ನಿನ್ನೆ ಪಂಜಾಬ್, ಅಸ್ಸಾಂ, ಕೇರಳ, ಉತ್ತರಾಖಂಡ, ಜಾರ್ಖಂಡ್, ಛತ್ತೀಸ್ಘಡ, ತ್ರಿಪುರ, ಹಿಮಾಚಲ ಪ್ರದೇಶ, ಚಂಡೀಗಢ, ಗೋವಾ, ಮಣಿಪುರ, ನಾಗಾಲ್ಯಾಂಡ್, ಲಡಾಖ್, ಪುದುಚೇರಿ, ಅರುಣಾಚಲ ಪ್ರದೇಶ, ಮೇಘಾಲಯ, ಮಿಜೋರಾಂ, ದಾದಾಮನ್, ನಡಾಬಾರ್ ಸಿಕ್ಕಿಂ ಮತ್ತು ಲಕ್ಷದ್ವೀಪ‌ಗಳ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿದ್ದರು.

ಇದನ್ನೂ ಓದಿ: ಡಿಸಿಎಂ ಅಶ್ವತ್ಥ್ ನಾರಾಯಣ್ ರಾಮನಗರ ರೈತರ ಸಮಸ್ಯೆಗೆ ಕಿವಿಗೊಡುತ್ತಿಲ್ಲ; ಭುಗಿಲೆದ್ದ ಆಕ್ರೋಶ

ಇಂದು ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ದೆಹಲಿ, ಗುಜರಾತ್, ರಾಜಸ್ಥಾನ, ಉತ್ತರ ಪ್ರದೇಶ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಬಿಹಾರ, ಆಂಧ್ರಪ್ರದೇಶ, ಹರಿಯಾಣ, ಜಮ್ಮು ಕಾಶ್ಮೀರ, ತೆಲಂಗಾಣ ಮತ್ತು ಒಡಿಶಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಿದ್ದಾರೆ.

ದೇಶದಲ್ಲೇ ಅತಿಹೆಚ್ಚು‌ ಕೊರೊನಾ ಪೀಡಿತರಿರುವ ಮಹಾರಾಷ್ಟ್ರ, ದೆಹಲಿ, ಗುಜರಾತ್ ಮತ್ತು ತಮಿಳುನಾಡು  ಮುಖ್ಯಮಂತ್ರಿಗಳ ಜೊತೆ ಈ ರಾಜ್ಯಗಳಿಗೆ ಪ್ರತ್ಯೇಕವಾದ ಕಾರ್ಯಯೋಜನೆ ರೂಪಿಸುವ ಬಗ್ಗೆ ಚರ್ಚೆ ನಡೆಸಬಹುದು ಎಂದು ತಿಳಿದುಬಂದಿದೆ.

ಇಂದಿನ ಸಭೆಯ ಕೊನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡುವ ಸಾಧ್ಯತೆ ಇದೆ. ಕೊರೋನಾ ತಡೆಯಲು ರಾಜ್ಯಗಳಿಗೆ ಹೆಚ್ಚಿನ ಅಧಿಕಾರ ನೀಡುವ ಸಾಧ್ಯತೆ ಇದೆ ಎಂದು ಕೂಡ ಹೇಳಲಾಗುತ್ತಿದೆ.
First published: