ಇಂದು ಸೌದಿ ಅರೇಬಿಯಾ ರಾಜ ಸಲ್ಮಾನ್ ಅಧ್ಯಕ್ಷತೆಯಲ್ಲಿ ಶೃಂಗಸಭೆ; ಪ್ರಧಾನಿ ಮೋದಿ ಸೇರಿದಂತೆ ವಿಶ್ವ ನಾಯಕರು ಭಾಗಿ

ಇನ್ನು, ಸೌದಿ ಅರೇಬಿಯಾದ ರಾಜ ಸಲ್ಮಾನ್ ಅಧ್ಯಕ್ಷತೆಯಲ್ಲಿ ನಡೆಯುವ ಶೃಂಗಸಭೆಯನ್ನು ಬೆಂಬಲಿಸಿ ವಿಶ್ವಸಂಸ್ಥೆ, ವಿಶ್ವ ಬ್ಯಾಂಕ್, ವಿಶ್ವ ಆರೋಗ್ಯ ಸಂಸ್ಥೆ, ವಿಶ್ವ ವ್ಯಾಪಾರ ಸಂಘಟನೆ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಚೀನಾ ಮತ್ತು ಫ್ರಾನ್ ಕೂಡ ವಿಡಿಯೋ ಶೃಂಗಸಭೆಯನ್ನು ಬೆಂಬಲಿಸಿದೆ.

news18-kannada
Updated:March 26, 2020, 7:04 AM IST
ಇಂದು ಸೌದಿ ಅರೇಬಿಯಾ ರಾಜ ಸಲ್ಮಾನ್ ಅಧ್ಯಕ್ಷತೆಯಲ್ಲಿ ಶೃಂಗಸಭೆ; ಪ್ರಧಾನಿ ಮೋದಿ ಸೇರಿದಂತೆ ವಿಶ್ವ ನಾಯಕರು ಭಾಗಿ
ಪ್ರಧಾನಿ ನರೇಂದ್ರ ಮೋದಿ.
  • Share this:
ನವದೆಹಲಿ(ಮಾ.26): ತೀವ್ರವಾಗಿ ಹರಡುತ್ತಿರುವ ಕೊರೋನಾ ವೈರಸ್​​ ತಡೆಗೆ ಜಗತ್ತಿನ ಎಲ್ಲಾ ಬಲಿಷ್ಠ ರಾಷ್ಟ್ರಗಳು ಸಾಕಷ್ಟು ಪ್ರಯತ್ನಿಸುತ್ತಿವೆ. ಹೀಗೆ ಕೋವಿಡ್​​​-19 ನಿಯಂತ್ರಿಸುವ ಪ್ರಯತ್ನದಲ್ಲಿ ಭಾರತವೂ ಈ ಹಿಂದೆ ಸಾರ್ಕ್‍ ರಾಷ್ಟ್ರಗಳ ನಾಯಕರ ಜತೆಗೆ ವಿಡಿಯೋ ಕಾನ್ಫೆರೆನ್ಸ್​ ಮಾಡಿತ್ತು. ಈ ಬೆನ್ನಲ್ಲೀಗ ಸೌದಿ ಅರೇಬಿಯಾದ ರಾಜ ಸಲ್ಮಾನ್ ಅಧ್ಯಕ್ಷತೆಯಲ್ಲಿ ಮತ್ತೊಂದು ಶೃಂಗಸಭೆ ನಡೆಯುತ್ತಿದೆ. G20 Virtual Summit ಎಂಬ ಹೆಸರಿನ ಶೃಂಗಸಭೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ರಷ್ಯಾದ ಅಧ್ಯಕ್ಷ ಪುಟಿನ್​​​​ ಮತ್ತು ಜಾಗತಿಕ ನಾಯಕರು ಭಾಗಿಯಾಗಲಿದ್ದಾರೆ.

ಕೋವಿಡ್​-19​ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಈ ಸಭೆ ನಡೆಸಲಾಗುತ್ತಿದೆ. ಈ ಸೋಂಕಿನಿಂದ ಜನ ಮತ್ತು ದೇಶದ ಆರ್ಥಿಕತೆ ಮೇಲಾಗುವ ಪರಿಣಾಮಗಳ ಬಗ್ಗೆ ಚರ್ಚೆ ನಡೆಯಲಿದೆ. ಸ್ಪೇನ್‍, ಜೋರ್ಡಾನ್‍, ಸಿಂಗಾಪುರ, ಸ್ವಿಜರ್ಲೆಂಡ್‍ ಮುಂತಾದ ಸಂತ್ರಸ್ತ ರಾಷ್ಟ್ರಗಳ ನಾಯಕರ ಜತೆಗೆ ಮಾತುಕತೆ ನಡೆಯಲಿದೆ.

ಇನ್ನು, ಸೌದಿ ಅರೇಬಿಯಾದ ರಾಜ ಸಲ್ಮಾನ್ ಅಧ್ಯಕ್ಷತೆಯಲ್ಲಿ ನಡೆಯುವ ಶೃಂಗಸಭೆಯನ್ನು ಬೆಂಬಲಿಸಿ ವಿಶ್ವಸಂಸ್ಥೆ, ವಿಶ್ವ ಬ್ಯಾಂಕ್, ವಿಶ್ವ ಆರೋಗ್ಯ ಸಂಸ್ಥೆ, ವಿಶ್ವ ವ್ಯಾಪಾರ ಸಂಘಟನೆ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಚೀನಾ ಮತ್ತು ಫ್ರಾನ್ ಕೂಡ ವಿಡಿಯೋ ಶೃಂಗಸಭೆಯನ್ನು ಬೆಂಬಲಿಸಿದೆ.

ಇದನ್ನೂ ಓದಿ: ಭಾರತದಲ್ಲಿ 600ರ ಗಡಿ ದಾಟಿದ ಸೋಂಕಿತರ ಸಂಖ್ಯೆ; ಇದುವರೆಗೂ 10 ಮಂದಿ ಸಾವು

ಈ ಸಂಬಂಧ ಬುಧವಾರ ಟ್ವೀಟ್​ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಈ ಶೃಂಗದಲ್ಲಿ ಪಾಲ್ಗೊಳ್ಳುವುದಕ್ಕಾಗಿ ಕಾತರದಿಂದ ಎದುರು ನೋಡುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

First published:March 26, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading