HOME » NEWS » Coronavirus-latest-news » PRIME MINISTERS HOLDS A COMPREHENSIVE MEETING TO DISCUSS STRATEGIES ON BOOSTING INVESTMENT IN INDIA RH

ವಿದೇಶಿ ಹೂಡಿಕೆದಾರರನ್ನು ಆಕರ್ಷಿಸುವ ಕಾರ್ಯತಂತ್ರಗಳ ಬಗ್ಗೆ ಸಚಿವರು, ಅಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಚರ್ಚೆ

ತ್ವರಿತಗತಿಯಲ್ಲಿ ಭಾರತಕ್ಕೆ ಹೂಡಿಕೆ ತರಲು ಮತ್ತು ಭಾರತೀಯ ದೇಶೀಯ ವಲಯಗಳನ್ನು ಉತ್ತೇಜಿಸುವ ವಿವಿಧ ತಂತ್ರಗಳ ಬಗ್ಗೆ ಚರ್ಚಿಸಲಾಯಿತು. ರಾಜ್ಯಗಳು ತಮ್ಮ ಕಾರ್ಯತಂತ್ರ ಮತ್ತು ಹೂಡಿಕೆಗಳನ್ನು ಆಕರ್ಷಿಸುವಲ್ಲಿ ಹೆಚ್ಚು ಕಾರ್ಯಪ್ರವೃತ್ತರಾಗಲು ಮಾರ್ಗದರ್ಶನ ನೀಡುವ ಬಗ್ಗೆ ಚರ್ಚೆಗಳು ನಡೆದವು.


Updated:April 30, 2020, 6:22 PM IST
ವಿದೇಶಿ ಹೂಡಿಕೆದಾರರನ್ನು ಆಕರ್ಷಿಸುವ ಕಾರ್ಯತಂತ್ರಗಳ ಬಗ್ಗೆ ಸಚಿವರು, ಅಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಚರ್ಚೆ
ಪ್ರಧಾನಿ ಮೋದಿ.
  • Share this:
ನವದೆಹಲಿ: ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಪಾತಾಳಕ್ಕೆ ಕುಸಿದಿರುವ ದೇಶದ ಆರ್ಥಿಕತೆಗೆ ಉತ್ತೇಜನ ನೀಡುವ ಸಲುವಾಗಿ ಭಾರತಕ್ಕೆ ಹೆಚ್ಚಿನ ಪ್ರಮಾಣದಲ್ಲಿ ವಿದೇಶಿ ಹೂಡಿಕೆದಾರರನ್ನು ಆಕರ್ಷಿಸುವ ಕಾರ್ಯತಂತ್ರಗಳ ಕುರಿತು ಚರ್ಚಿಸಲು ಮತ್ತು ಸ್ಥಳೀಯ ಹೂಡಿಕೆಗಳನ್ನು ಉತ್ತೇಜಿಸಲು ಉದ್ದೇಶದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಭೆ ನಡೆಸಿದರು.

ದೇಶದಲ್ಲಿ ಇರುವ ಕೈಗಾರಿಕಾ ಜಮೀನು,  ಪ್ಲಾಟ್, ಎಸ್ಟೇಟ್​ಗಳಲ್ಲಿ ಹೆಚ್ಚಿನ ಮೂಲಸೌಕರ್ಯ ಉತ್ತೇಜಿಸಲು ಮತ್ತು ಅಗತ್ಯ ಹಣಕಾಸಿನ ನೆರವು ನೀಡುವ ಯೋಜನೆ ಅಭಿವೃದ್ಧಿಪಡಿಸುವ ಸಂಬಂಧ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಹೂಡಿಕೆದಾರರ ಆಕರ್ಷಿಸುವ ಕಾರ್ಯವಿಧಾನಗಳನ್ನು ಜಾರಿಗೊಳಿಸಬೇಕು ಮತ್ತು ಸಮಸ್ಯೆ ಇದ್ದಲ್ಲಿ ಅಗತ್ಯವಿದ್ದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಾಯ ಪಡೆದು ಪರಿಹರಿಸುವಂತೆ ಸಭೆಯಲ್ಲಿ ಪ್ರಧಾನಿ ಮೋದಿ ಅವರು ನಿರ್ದೇಶನ ನೀಡಿದರು.

ತ್ವರಿತಗತಿಯಲ್ಲಿ ಭಾರತಕ್ಕೆ ಹೂಡಿಕೆ ತರಲು ಮತ್ತು ಭಾರತೀಯ ದೇಶೀಯ ವಲಯಗಳನ್ನು ಉತ್ತೇಜಿಸುವ ವಿವಿಧ ತಂತ್ರಗಳ ಬಗ್ಗೆ ಚರ್ಚಿಸಲಾಯಿತು. ರಾಜ್ಯಗಳು ತಮ್ಮ ಕಾರ್ಯತಂತ್ರ ಮತ್ತು ಹೂಡಿಕೆಗಳನ್ನು ಆಕರ್ಷಿಸುವಲ್ಲಿ ಹೆಚ್ಚು ಕಾರ್ಯಪ್ರವೃತ್ತರಾಗಲು ಮಾರ್ಗದರ್ಶನ ನೀಡುವ ಬಗ್ಗೆ ಚರ್ಚೆಗಳು ನಡೆದವು.

ವಿವಿಧ ಸಚಿವಾಲಯಗಳು ತೆಗೆದುಕೊಂಡ ಸುಧಾರಣಾ ಕ್ರಮಗಳನ್ನು ಮುಂದುವರಿಯಬೇಕು ಮತ್ತು ಹೂಡಿಕೆ ಹಾಗೂ ಕೈಗಾರಿಕಾ ಅಭಿವೃದ್ಧಿ ಉತ್ತೇಜಿಸಲು ಇರುವ ಅಡೆತಡೆಗಳನ್ನು ತೆಗೆದುಹಾಕುವ  ಕ್ರಮ ಕೈಗೊಳ್ಳಬೇಕು ಎಂದು ಚರ್ಚಿಸಲಾಯಿತು.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪಿಯೂಶ್ ಗೋಯೆಲ್ ಹಾಗೂ ಭಾರತ ಸರ್ಕಾರದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.

ಇದನ್ನು ಓದಿ: ರಾಷ್ಟ್ರಪತಿ, ಪಿಎಂಓ, ಮೋದಿಯನ್ನು ಟ್ವಿಟರ್​ನಲ್ಲಿ ಅನ್​ಫಾಲೋ ಮಾಡಿದ ಬಗ್ಗೆ ಸ್ಪಷ್ಟೀಕರಣ ನೀಡಿದ ಶ್ವೇತಭವನ
Youtube Video
First published: April 30, 2020, 6:22 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories