Karnataka CoronaVirus: ಕೊರೋನಾ‌ ರೋಗಿಯ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಯ ದರ ಶೀಘ್ರದಲ್ಲಿ ನಿಗದಿ; ಸಚಿವ ಶ್ರೀರಾಮುಲು

ಖಾಸಗಿ ಆಸ್ಪತ್ರೆಲ್ಲಿ ಕೊರೋನಾ ರೋಗಿಯ ಚಿಕಿತ್ಸೆಗೆ ಇಂತಿಷ್ಟೇ ದರ ನಿಗದಿ ಆಗಬೇಕು ಎಂದು ಡಾಕ್ಟರ್ ಅಸೋಸಿಯೇಷನ್ ಮನವಿ ಮಾಡಿದೆ. ಇದಲ್ಲದೆ ಬೇರೆ ಬೇರೆ ರಾಜ್ಯದಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಎಷ್ಟು ದರ ನಿಗದಿ ಮಾಡಲಾಗಿದೆ? ಎಂದು ಪರಿಶೀಲನೆ ನಡೆಸಿ ಕ್ಯಾಬಿನೆಟ್‌ ಮೀಟಿಂಗ್‌ನಲ್ಲಿ ಈ ಕುರಿತು ನಿರ್ಧರಿಸಲಾಗುವುದು ಎಂದು ಶ್ರೀರಾಮುಲು ತಿಳಿಸಿದ್ದಾರೆ.

ಶ್ರೀರಾಮುಲು

ಶ್ರೀರಾಮುಲು

  • Share this:
ಬೆಂಗಳೂರು (ಜೂನ್‌ 18); ಕೊರೋನಾ ರೋಗಿಗಳು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುವುದಾದರೆ, ಈ ಚಿಕಿತ್ಸೆಗೆ ಎಷ್ಟು ದರ ನಿಗದಿ ಮಾಡಬೇಕು? ಎಂಬ ಕುರಿತು ಮುಂದಿನ ಕ್ಯಾಬಿನೆಟ್‌ ಮೀಟಿಂಗ್‌ನಲ್ಲಿ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.

ಆರೋಗ್ಯ ಸಚಿವ ಶ್ರೀರಾಮುಲು ನೇತೃತ್ವದಲ್ಲಿ ಡಿಸಿಎಂ‌ ಅಶ್ವತ್ಥನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಹಾಗೂ ತಜ್ಞರು ಪಾಲ್ಗೊಂಡಿದ್ದ ಇಂದಿನ ಕೊರೋನಾ ಟಾಸ್ಕ್ ಪೋರ್ಸ್ ಸಭೆಯಲ್ಲಿ ಕೋವಿಡ್ ರೋಗಿಗಳು ಖಾಸಗಿ ಆಸ್ಪತ್ರೆಗೆ ದಾಖಲಾದರೆ ಹೆಚ್ಚು ದರ ತೆಗೆದುಕೊಳ್ಳಲಾಗುತ್ತಿದೆ ಎಂಬ ಕುರಿತು ಚರ್ಚೆ ನಡೆಸಲಾಗಿತ್ತು.

ಈ ಚರ್ಚೆ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಶ್ರೀರಾಮುಲು, "ಖಾಸಗಿ ಆಸ್ಪತ್ರೆಲ್ಲಿ ಕೊರೋನಾ ರೋಗಿಯ ಚಿಕಿತ್ಸೆಗೆ ಇಂತಿಷ್ಟೇ ದರ ನಿಗದಿ ಆಗಬೇಕು ಎಂದು ಡಾಕ್ಟರ್ ಅಸೋಸಿಯೇಷನ್ ಮನವಿ ಮಾಡಿದೆ. ಇದಲ್ಲದೆ ಬೇರೆ ಬೇರೆ ರಾಜ್ಯದಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಎಷ್ಟು ದರ ನಿಗದಿ ಮಾಡಲಾಗಿದೆ? ಎಂದು ಪರಿಶೀಲನೆ ನಡೆಸಲಾಗುವುದು.

ಈಗಾಲೇ ಗುಜರಾತ್‌ ರಾಜ್ಯದಲ್ಲಿ ದರ ನಿಗದಿಪಡಿಸಿರುವ ಕುರಿತು ಚರ್ಚೆ ನಡೆಸಲಾಗಿದೆ. ಈ ಕುರಿತು ತಜ್ಞರ ಸಲಹೆಯನ್ನೂ ಪಡೆಯಲಾಗುವುದು. ಇದು ಕ್ಯಾಬಿನೆಟ್‌ನಲ್ಲಿ ಚರ್ಚೆಯಾಗಬೇಕಾದ ವಿಚಾರವಾಗಿದ್ದು, ಕ್ಯಾಬಿನೆಟ್‌ ಮೀಟಿಂಗ್‌ನಲ್ಲಿ ಚರ್ಚೆ ನಡೆಸಿ ಆನಂತರ ಖಾಸಗಿ ಆಸ್ಪತ್ರೆಗಳ ದರವನ್ನು ನಿರ್ಧರಿಸಲಾಗುವುದು" ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ : Corona Virus: ಜಿಂದಾಲ್ ಕೊರೋನಾ ನಂಜು; ಶವಸಂಸ್ಕಾರಕ್ಕೆ ಕೊಪ್ಪಳದಲ್ಲಿ ಗ್ರಾಮಸ್ಥರ ವಿರೋಧ

ಇದಲ್ಲದೆ, ರಾಜ್ಯದಲ್ಲಿ ಮಾರಣಾಂತಿಕ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇದರ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತೂ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ಸಚಿವ ಶ್ರೀರಾಮುಲು ತಿಳಿಸಿದ್ದಾರೆ.
First published: