ರೋಗಿಗಳಿಂದ ಸುಲಿಗೆ; ಜೋದ್​ಪುರದ 5 ಖಾಸಗಿ ಆಸ್ಪತ್ರೆಗಳಿಗೆ 10 ಲಕ್ಷ ರೂ ದಂಡ ವಿಧಿಸಿದ ರಾಜಸ್ಥಾನ ಸರ್ಕಾರ

ಜೋಧಪುರದ ಖಾಸಗಿ ಆಸ್ಪತ್ರೆಗಳು ಸರ್ಕಾರದ ಯೋಜನೆಯನ್ನೇ ನಿರಾಕರಿಸಿ ಸುಲಿಗೆ ಮಾಡಿದ್ದವು ಮತ್ತು ಹೆಚ್ಚಿನ ಶುಲ್ಕವನ್ನು ವಿಧಿಸಿ ಇಂತಹ ಸಂಕಷ್ಟದ ಕಾಲದಲ್ಲೂ ಜನರನ್ನು ಶೋಷಣೆ ಮಾಡಿದ್ದವು ಎಂದು ಸುಮಾರು 150 ರೋಗಿಗಳು ’’ಸಂಪರ್ಕ್​’’ ವೇದಿಕೆ ಮೂಲಕ ಸರ್ಕಾರಕ್ಕೆ ದೂರು ಸಲ್ಲಿಸಿದ್ದರು.

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​

 • Share this:
  ರಾಜಸ್ಥಾನ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ‘ಮುಖ್ಯಮಂತ್ರಿ ಚಿರಂಜೀವಿ ಸ್ವಾಸ್ಥ್ಯ ಬಿಮಾ ಯೋಜನೆ’ ಯ ಸೌಲಭ್ಯ ಹಾಗೂ ಅನುಕೂಲಗಳನ್ನು ರೋಗಿಗಳಿಗೆ ಒದಗಿಸಲು ವಿಫಲವಾದ ಕಾರಣ ಜೋಧ್‌ಪುರದ ಐದು ಖಾಸಗಿ ಆಸ್ಪತ್ರೆಗಳಿಗೆ ದಂಡ ವಿಧಿಸಲಾಗಿದೆ.

  ಈ ಖಾಸಗಿ ಆಸ್ಪತ್ರೆಗಳು ರೋಗಿಗಳಿಂದ ಅಕ್ರಮವಾಗಿ ವಸೂಲಿ ಮಾಡಿದ 10 ಲಕ್ಷ ರೂಪಾಯಿಗಳನ್ನು ಮರುಪಾವತಿಸಬೇಕು ಎಂದು  ಸರ್ಕಾರ ಆದೇಶ ಹೊರಡಿಸಿದೆ. ಕರೋನಾ ಅವಧಿಯಲ್ಲಿ ಮುಖ್ಯಮಂತ್ರಿ ಚಿರಂಜೀವಿ ಸ್ವಾಸ್ಥ್ಯ ಬಿಮಾ ಯೋಜನೆ’ಯ ಅನುಕೂಲಗಳನ್ನು ಜನಸಾಮಾನ್ಯರಿಗೆ ನೀಡದೆ ಕೊಳ್ಳೆ ಹೊಡೆದ  ಖಾಸಗಿ ಆಸ್ಪತ್ರೆಗಳ ಪಟ್ಟಿ ಸಾಕಷ್ಟು ದೊಡ್ಡದಾಗಿದೆ ಎಂದು ಸರ್ಕಾರದ ಮೂಲಗಳು ಹೇಳಿವೆ.

  ಕೋವಿಡ್ -19 ಸಾಂಕ್ರಾಮಿಕ ರೋಗದ ಎರಡನೇ ಅಲೆ ವ್ಯಾಪಕವಾಗಿ ಹರಡಿದ ಹಿನ್ನೆಲೆಯಲ್ಲಿ ನಗರದಾದ್ಯಂತ ಇರುವ ಖಾಸಗಿ ಆಸ್ಪತ್ರೆಗಳಲ್ಲಿ ನೂರಾರು ರೋಗಿಗಳಿಗೆ ಚಿಕಿತ್ಸೆ ನೀಡಲಾಗಿತ್ತು. ಆದರೆ, ಆಸ್ಪತ್ರೆಗಳು ಈ ಸರ್ಕಾರಿ ಆರೋಗ್ಯ ವಿಮಾ ಯೋಜನೆಯಾದ  ಮುಖ್ಯಮಂತ್ರಿ ಚಿರಂಜೀವಿ ಸ್ವಾಸ್ಥ್ಯ ಬಿಮಾ ಯೋಜನೆ’ ಲಾಭವನ್ನು ಜನರು ಪಡೆಯಲು ಅವಕಾಶ ನೀಡದೆ ರೋಗಿಗಳಿಂದ ಹೆಚ್ಚಿನ ಹಣ ಪೀಕಿದ್ದವು. ಜೋಧಪುರದ ಖಾಸಗಿ ಆಸ್ಪತ್ರೆಗಳು ಸರ್ಕಾರದ ಯೋಜನೆಯನ್ನೇ ನಿರಾಕರಿಸಿ ಸುಲಿಗೆ ಮಾಡಿದ್ದವು ಮತ್ತು ಹೆಚ್ಚಿನ ಶುಲ್ಕವನ್ನು ವಿಧಿಸಿ ಇಂತಹ ಸಂಕಷ್ಟದ ಕಾಲದಲ್ಲೂ ಜನರನ್ನು ಶೋಷಣೆ ಮಾಡಿದ್ದವು ಎಂದು ಸುಮಾರು 150 ರೋಗಿಗಳು ’’ಸಂಪರ್ಕ್​’’ ವೇದಿಕೆ ಮೂಲಕ ಸರ್ಕಾರಕ್ಕೆ ದೂರು ಸಲ್ಲಿಸಿದ್ದರು.

  ಒಟ್ಟು 150 ದೂರುಗಳು ಬಂದಿದ್ದವು ಅದರಲ್ಲಿ 70 ದೂರುಗಳನ್ನು ಪರಿಗಣಿಸಲಾಗಲಿಲ್ಲ. ಕಾರಣ ಈ ದೂರುಗಳು ಸರ್ಕಾರಿ ವಿಮಾ ಪ್ಯಾಕೇಜ್‌ನಲ್ಲಿ ಉಲ್ಲೇಖೀಸಿದ ಕಾನೂನುಗಳಿಗೆ ಸೇರಿಲ್ಲ ಎಂದು ತಿರಸ್ಕರಿಸಲಾಗಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ. ಉಳಿದ ದೂರುಗಳ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

  ಐದು ಪ್ರಕರಣಗಳಲ್ಲಿ ಖಾಸಗಿ ಆಸ್ಪತ್ರೆಗಳು ಸರ್ಕಾರದ ಆರೋಗ್ಯ ಯೋಜನೆಯ ಮಾನದಂಡಗಳನ್ನು ಉಲ್ಲಂಘಿಸಿದ ಕಾರಣ ತಪ್ಪಿತಸ್ಥರೆಂದು ಕಂಡುಬಂದಿದೆ. ಇನ್ನೂ 65 ದೂರುಗಳ ಬಗ್ಗೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

  ನಗರದ ಐದು ಆಸ್ಪತ್ರೆಗಳು ಮುಖ್ಯಮಂತ್ರಿಗಳ ಚಿರಂಜೀವಿ ಆರೋಗ್ಯ ವಿಮಾ ಯೋಜನೆಯ ಪ್ರಯೋಜನವನ್ನು ರೋಗಿಗಳಿಗೆ ನೀಡದ ಕಾರಣ ತಪ್ಪಿತಸ್ಥರೆಂದು ಸಾಬೀತಾಗಿದೆ. ಈ ಐದು ಖಾಸಗಿ ಆಸ್ಪತ್ರೆಗಳ ವಿರುದ್ಧ ಜೋಧಪುರ ಜಿಲ್ಲೆಯ ಮುಖ್ಯ ವೈದ್ಯಕೀಯ ಆರೋಗ್ಯ ಅಧಿಕಾರಿ ಡಾ.ಬಲ್ವಂತ್ ಮಂದಾ ಕ್ರಮ ಕೈಗೊಂಡಿದ್ದಾರೆ. ಈ ಐದು ಆಸ್ಪತ್ರೆಗಳು ರೋಗಿಗಳಿಗೆ 10 ಲಕ್ಷ ರೂ.ಗಳನ್ನು ಮರುಪಾವತಿಸಲು ನೋಟಿಸ್ ನೀಡಲಾಗಿದೆ.

  ಇದನ್ನೂ ಓದಿ: ಒಟ್ಟಿಗೆ ಕಾಣಿಸಿಕೊಂಡ ಸಿಧು- ಕ್ಯಾಪ್ಟನ್​; ಶಮನದತ್ತ ಪಂಜಾಬ್​ ಕಾಂಗ್ರೆಸ್​ ಯುದ್ಧ

  ಇದೇ ರೀತಿ ಅನೇಕ ರಾಜ್ಯದ ಅನೇಕ ಭಾಗಗಳಲ್ಲಿ ಖಾಸಗಿ ಆಸ್ಪತ್ರೆಗಳು ಈ ರೀತಿಯ ವಂಚನೆ ಎಸಗಿದ್ದು, ಸಾರ್ವಜನಿಕರಿಂದ ದೂರುಗಳು ಬಂದರೆ ತಕ್ಷಣ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುವುದು ಹಾಗೂ ಇನ್ನೂ ಬಾಕಿ ಇರುವ ದೂರುಗಳನ್ನು ಆದಷ್ಟು ಬೇಗ ಇತ್ಯರ್ಥ ಪಡಿಸಲಾಗುವುದು ಎಂದು ವರದಿ ಹೇಳಿದೆ.

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಮನೆಯಿಂದ ಹೊರ ಹೋಗುವುದನ್ನು ಆದಷ್ಟು ಕಡಿಮೆ ಮಾಡಿ, ಗುಂಪುಗೂಡುವುದನ್ನು ಕಡಿಮೆ ಮಾಡಿ

  Published by:HR Ramesh
  First published: