ಕೊರೋನಾ ಭೀತಿ: ಇಂದಿನಿಂದ ಮಾರ್ಚ್​​ 31ರವರೆಗೂ ಶಾಲಾ ಶಿಕ್ಷಕರಿಗೆ ರಜೆ

ಇಂದಿನಿಂದ ಶಿಕ್ಷಕರು ಆನ್‌ಲೈನ್ ಮೂಲಕ ಬೋಧನೆ ಮಾಡಬಹುದಾಗಿದೆ. ಜತೆಗೆ ಆನ್‌ಲೈನ್ ಮೂಲಕ ಮೌಲ್ಯಮಾಪನ ಮಾಡಲು ಅಗತ್ಯವಿರುವ ಪಠ್ಯವಸ್ತು ಅಭಿವೃದ್ಧಿ ಮಾಡಬಹುದು. ಮುಂದಿನ ಶೈಕ್ಷಣಿಕ ವರ್ಷಕ್ಕೆ ಬೇಕಾದ ಪಠ್ಯ ಯೋಜನೆ ಈಗಿನಿಂದಲೇ ತಯಾರು ಮಾಡಿಕೊಳ್ಳಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸಲಹೆ ನೀಡಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  ಬೆಂಗಳೂರು(ಮಾ.22): ಕೊರೋನ ವೈರಸ್ ಭೀತಿ ಹಿನ್ನೆಲೆಯಲ್ಲಿ ಇಂದಿನಿಂದ ರಾಜ್ಯದ ಎಲ್ಲಾ ಶಾಲೆಗಳ ಶಿಕ್ಷಕರಿಗೆ ಮಾರ್ಚ್​​ 31ನೇ ತಾರೀಕಿನವರೆಗೂ ರಜೆಯನ್ನು ನೀಡಲಾಗಿದೆ. ರಾಜ್ಯದ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳ ಶಿಕ್ಷಕರು ಮತ್ತಿತರ  ಸಿಬ್ಬಂದಿ ಮಾ.31ರವರೆಗೆ ಮನೆಯಿಂದಲೇ ಶಾಲಾ ಕೆಲಸ ನಿರ್ವಹಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

  ಇಂದಿನಿಂದ ಶಿಕ್ಷಕರು ಆನ್‌ಲೈನ್ ಮೂಲಕ ಬೋಧನೆ ಮಾಡಬಹುದಾಗಿದೆ. ಜತೆಗೆ ಆನ್‌ಲೈನ್ ಮೂಲಕ ಮೌಲ್ಯಮಾಪನ ಮಾಡಲು ಅಗತ್ಯವಿರುವ ಪಠ್ಯವಸ್ತು ಅಭಿವೃದ್ಧಿ ಮಾಡಬಹುದು. ಮುಂದಿನ ಶೈಕ್ಷಣಿಕ ವರ್ಷಕ್ಕೆ ಬೇಕಾದ ಪಠ್ಯ ಯೋಜನೆ ಈಗಿನಿಂದಲೇ ತಯಾರು ಮಾಡಿಕೊಳ್ಳಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸಲಹೆ ನೀಡಿದೆ.

  ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 26ಕ್ಕೇರಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಬುಲೆಟಿನ್ ಪ್ರಕಾರ ಬೆಂಗಳೂರಿನಲ್ಲಿ 17, ಕಲ್ಬುರ್ಗಿ 3, ಕೊಡಗು 1, ಚಿಕ್ಕಬಳ್ಳಾಪುರ 2, ಮೈಸೂರು 1, ಧಾರವಾಡ 1, ಉತ್ತರ ಕನ್ನಡ 1 ಪ್ರಕರಣಗಳು ದಾಖಲಾಗಿವೆ. ಬೆಂಗಳೂರಿನ ಒಬ್ಬ ರೋಗಿ ಮಾತ್ರ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.‌ ಉಳಿದವರು ಬೇರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

  ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ 6 ಮಂದಿಗೆ ಕೊರೋನಾ: ಸೋಂಕಿತರ ಸಂಖ್ಯೆ 26ಕ್ಕೇರಿಕೆ - ಆರೋಗ್ಯ ಇಲಾಖೆ ಸ್ಪಷ್ಟನೆ

  ಕರ್ನಾಟಕದಲ್ಲಿ ಇದುವರೆಗೂ 26 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಭಾನುವಾರ ಒಂದೇ ದಿನ ಆರು ಮಂದಿಗೆ ಕೊರೋನಾ ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಇನ್ನಷ್ಟು ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ಕೊರೋನಾ ಕೇಂದ್ರವಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ.

  !function(e,i,n,s){var t="InfogramEmbeds",d=e.getElementsByTagName("script")[0];if(window[t]&&window[t].initialized)window[t].process&&window[t].process();else if(!e.getElementById(n)){var o=e.createElement("script");o.async=1,o.id=n,o.src="https://e.infogram.com/js/dist/embed-loader-min.js",d.parentNode.insertBefore(o,d)}}(document,0,"infogram-async");
  First published: