ವಿದೇಶ ಪ್ರಯಾಣದ ಇತಿಹಾಸವಿಲ್ಲದ ಪುಣೆ ಮಹಿಳೆಯಲ್ಲಿ ಕೊರೋನಾ ವೈರಸ್ ಪತ್ತೆ

40 ವರ್ಷದ ಈ ಮಹಿಳೆ ಬೇರೆ ದೇಶಕ್ಕೆ ಪ್ರಯಾಣ ಬೆಳೆಸಿರಲಿಲ್ಲ. ಆದರೆ ಮಾರ್ಚ್ 3 ರಂದು ನಡೆದ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ನವ ಮುಂಬಯಿಯ ವಾಶಿಗೆ ಪ್ರಯಾಣಿಸಿದ್ದರು ಎಂದು ಮೂಲಗಳು ಹೇಳಿವೆ.

news18-kannada
Updated:March 21, 2020, 4:19 PM IST
ವಿದೇಶ ಪ್ರಯಾಣದ ಇತಿಹಾಸವಿಲ್ಲದ ಪುಣೆ ಮಹಿಳೆಯಲ್ಲಿ ಕೊರೋನಾ ವೈರಸ್ ಪತ್ತೆ
ಪ್ರಾತಿನಿಧಿಕ ಚಿತ್ರ.
  • Share this:
ಪುಣೆ: ಮಹಾರಾಷ್ಟ್ರದ ಪುಣೆ ನಗರದಲ್ಲಿ 40 ವರ್ಷದ ಮಹಿಳೆಯೊಬ್ಬರಲ್ಲಿ ಕರೋನ ವೈರಸ್ ಇರುವುದು ದೃಢಪಟ್ಟಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಪ್ರಸ್ತುತ ಭಾರತಿ ಆಸ್ಪತ್ರೆಯಲ್ಲಿ ವೆಂಟಿಲೇಟರ್​ನಲ್ಲಿರುವ ಚಿಕಿತ್ಸೆ ಪಡೆಯುತ್ತಿರುವ ಮಹಿಳೆ, ಹಂದಿ ಜ್ವರ ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗಾಗಿ ಲ್ಯಾಬ್​ ಕಳುಹಿಸಿದ ನಂತರ ಕೊರೋನಾ ಸೋಂಕಿರುವುದು ದೃಢಪಟ್ಟಿದೆ ಎಂದು ಅವರು ಹೇಳಿದರು.

ನಾವು ಪ್ರಕರಣದ ತನಿಖೆ ನಡೆಸುತ್ತಿದ್ದೇವೆ. ಅವರಲ್ಲಿ ಕೊರೋನಾ ವೈರಸ್ ದೃಢವಾಗಿದ್ದರೂ ಸಹ ಅವರು ಯಾವುದೇ ವಿದೇಶ ಪ್ರವಾಸ ಕೈಗೊಂಡಿರಲಿಲ್ಲ. ಆದರೆ ಅವರು ವಿದೇಶದಿಂದ ಬಂದ ಯಾರೊಂದಿಗಾದರೂ ಸಂಪರ್ಕ ಹೊಂದಿದ್ದರೆ ಎಂಬುದನ್ನು ಪತ್ತೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ನೇವಲ್ ಕಿಶೋರ್ ರಾಮ್ ತಿಳಿಸಿದ್ದಾರೆ.

ಮುಂಬೈನಲ್ಲಿ ಮಹಿಳೆಯ ಕ್ಯಾಬ್ ಪ್ರಯಾಣದ ವಿವರಗಳನ್ನು ಪರಿಶೀಲಿಸಲಾಗುತ್ತಿದೆ. ಅಲ್ಲದೇ ಇಂತಹ ಪ್ರಕರಣಗಳನ್ನು ಎದುರಿಸಲು ಪ್ರತ್ಯೇಕ ಮಾರ್ಗಸೂಚಿಗಳಿವೆ. ಮಹಿಳೆಯ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಉನ್ನತ ಅಧಿಕಾರಿಗಳಿಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು.

ಏತನ್ಮಧ್ಯೆ, ಶುಕ್ರವಾರ ಪುಣೆಯಲ್ಲಿ 25 ವರ್ಷದ ವ್ಯಕ್ತಿಯಲ್ಲಿ ಕೊರೋನಾ ವೈರಸ್ ಕಂಡುಬಂದಿದ್ದು, ಆತ ಇತ್ತೀಚೆಗೆ ಐರ್ಲೆಂಡ್​ಗೆ ಪ್ರಯಾಣ ಬೆಳೆಸಿದ್ದ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನು ಓದಿ: ಕೊರೋನಾ ವೈರಸ್ ಪ್ರಭಾವ; ಶೇ.11 ರಷ್ಟು ಇಳಿದ ಭಾರತದ ತೈಲ ಬೇಡಿಕೆ

ಆ ವ್ಯಕ್ತಿಯನ್ನು ಶುಕ್ರವಾರ ನಾಯ್ಡು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಂಜೆ ನಂತರ ಅವರ ಗಂಟಲು ದ್ರವ ಮಾದರಿ ಪರೀಕ್ಷೆಯಿಂದ ಕೊರೋನಾ ಸೋಂಕು ಇರುವುದು ದೃಢವಾಯಿತು ಎಂದು ಅವರು ಹೇಳಿದರು.

ಕೊರೋನಾ ವೈರಸ್ ಮಹಾಮಾರಿಯಿಂದ ಇಡೀ ಜಗತ್ತು ತತ್ತರಿಸಿದೆ. ಈವರೆಗೆ ಸತ್ತವರ ಸಂಖ್ಯೆ 11 ಸಾವಿರದ ಗಡಿ ದಾಟಿದೆ. ಎರಡೂವರೆ ಲಕ್ಷಕ್ಕೂ ಹೆಚ್ಚು ಮಂದಿಗೆ ಈ ಸೋಂಕು ತಗುಲಿದೆ. 

(ವರದಿ: ಸಂಧ್ಯಾ ಎಂ)
First published:March 21, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading