ರಾಜ್ಯ ಸರ್ಕಾರದಿಂದ ಹೊಸ ನಿಯಮ ಜಾರಿ; ಹೊರರಾಜ್ಯದಿಂದ ಬರುವ ಎಲ್ಲರಿಗೂ ಮನೆಯಲ್ಲೇ ಕ್ವಾರಂಟೈನ್

ಇಂದು ಹೊಸ ನಿಯಮವನ್ನು ಬಿಡುಗಡೆ ಮಾಡಿರುವ ರಾಜ್ಯ ಸರ್ಕಾರ, ಪ್ರಸ್ತುತ ಅನ್‌ಲಾಕ್‌-2 ಜಾರಿಯಲ್ಲಿರುವ ಪರಿಣಾಮ ಇನ್ನೂ ಮಹಾರಾಷ್ಟ್ರ ಸೇರಿದಂತೆ ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವವರು ಹೋಟೆಲ್‌ಗಳಲ್ಲಿ ಹಣ ಪಾವತಿಸಿ ಕ್ವಾರಂಟೈನ್‌ಗೆ ಒಳಗಾಗಬೇಕಾಗಿಲ್ಲ. ಬದಲಾಗಿ ಮನೆಯಲ್ಲೇ 14 ದಿನ ಕ್ವಾರಂಟೈನ್‌ಗೆ ಒಳಗಾದರೆ ಸಾಕು ಎಂದು ತಿಳಿಸಿದೆ.

news18-kannada
Updated:July 6, 2020, 2:35 PM IST
ರಾಜ್ಯ ಸರ್ಕಾರದಿಂದ ಹೊಸ ನಿಯಮ ಜಾರಿ; ಹೊರರಾಜ್ಯದಿಂದ ಬರುವ ಎಲ್ಲರಿಗೂ ಮನೆಯಲ್ಲೇ ಕ್ವಾರಂಟೈನ್
ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು (ಜುಲೈ 06); ಹೊರ ರಾಜ್ಯ ಅಥವಾ ವಿದೇಶದಿಂದ ಕರ್ನಾಟಕಕ್ಕೆ ಆಗಮಿಸುವವರು ಇನ್ನೂ ಖಾಸಗಿ ಹೋಟೆಲ್ ಅಥವಾ ಸರ್ಕಾರಿ ಕ್ವಾರಂಟೈನ್‌ಗೆ ಒಳಗಾಗುವ ಅಗತ್ಯ ಇಲ್ಲ. ಬದಲಾಗಿ ಮನೆಯಲ್ಲೇ 14 ದಿನ ಕ್ವಾರಂಟೈನ್‌ಗೆ ಒಳಗಾದರೆ ಸಾಕು ಎಂದು ರಾಜ್ಯ ಸರ್ಕಾರ ಹೊಸ ನಿಯಮವನ್ನು ಇಂದು ಬಿಡುಗಡೆ ಮಾಡಿದೆ.

ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದ ಕಾರಣ ಕಳೆದ ಕಠಿಣ ನಿಯಮ ರೂಪಿಸಿದ್ದ ರಾಜ್ಯ ಸರ್ಕಾರ ಹೊರ ರಾಜ್ಯ ಅಥವಾ ವಿದೇಶದಿಂದ ಆಗಮಿಸುವವರು ಖಡ್ಡಾಯವಾಗಿ 07 ದಿನ ಸಾಂಸ್ಥಿಕ ಕ್ವಾರಂಟೈನ್ ಹಾಗೂ 07 ದಿನ ಹೋಮ್‌ ಕ್ವಾರಂಟೈನ್‌ಗೆ ಒಳಗಾಗಬೇಕು ಎಂದು ನಿಯಮ ರೂಪಿಸಿತ್ತು. ಅಲ್ಲದೆ, ಕ್ವಾರಂಟೈನ್‌ಗೆ ಒಳಗಾಗುವವರೇ ಅದರ ಹಣವನ್ನು ಪಾವತಿ ಮಾಡಬೇಕು ಎಂದು ಸೂಚಿಸಲಾಗಿತ್ತು. ಈ ನಿಯಮದಿಂದಾಗಿ ಅನೇಕರಿಗೆ ಆರ್ಥಿಕವಾಗಿ ಸಾಕಷ್ಟು ತೊಂದರೆಯೂ ಉಂಟಾಗಿತ್ತು.

ಅಲ್ಲದೆ, "ಆಸ್ಪತ್ರೆಗಳಲ್ಲಿ ಚಿಕಿತ್ಸೆ ಅಗತ್ಯ ಇರುವವರಿಗೆ ಉತ್ತಮ ಚಿಕಿತ್ಸೆ ನೀಡುವ ಕುರಿತು ಸರ್ಕಾರ ಗಮನವಹಿಸಲಿ, ಅಲ್ಲದೆ, ಹೋಮ್‌ ಕ್ವಾರಂಟೈನ್‌ ಬಗ್ಗೆ ಮನೆಯಲ್ಲಿರುವವರಿಗೆ ಮಾಹಿತಿ ನೀಡುವ ಮೂಲಕ ಹೊರ ರಾಜ್ಯ-ದೇಶದಿಂದ ಆಗಮಿಸಿದವರಿಗೆ ಮನೆಯಲ್ಲೇ ಕ್ವಾರಂಟೈನ್‌ಗೆ ಒಳಗಾಗಲು ಅವಕಾಶ ನೀಡಲಿ" ಎಂದು ಆರೋಗ್ಯ ಇಲಾಖೆ ತಜ್ಞರು ಸರ್ಕಾರಕ್ಕೆ ಸಲಹೆ ನೀಡಿದ್ದರು.

ಇದನ್ನೂ ಓದಿ : India-China Border: ಲಡಾಖ್​ ಗಡಿಯ ವಿವಾದಿತ ಪ್ರದೇಶದಿಂದ ಕೊನೆಗೂ ಹಿಂದೆ ಸರಿದ ಚೀನಾ ಸೇನೆ

 

ಅದರಂತೆ ಇಂದು ಹೊಸ ನಿಯಮವನ್ನು ಬಿಡುಗಡೆ ಮಾಡಿರುವ ರಾಜ್ಯ ಸರ್ಕಾರ, "ಪ್ರಸ್ತುತ ಅನ್‌ಲಾಕ್‌-2 ಜಾರಿಯಲ್ಲಿರುವ ಪರಿಣಾಮ ಇನ್ನೂ ಮಹಾರಾಷ್ಟ್ರ ಸೇರಿದಂತೆ ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವವರು ಹೋಟೆಲ್‌ಗಳಲ್ಲಿ ಹಣ ಪಾವತಿಸಿ ಕ್ವಾರಂಟೈನ್‌ಗೆ ಒಳಗಾಗಬೇಕಾಗಿಲ್ಲ. ಬದಲಾಗಿ ಮನೆಯಲ್ಲೇ 07 ದಿನದ ಬದಲಿಗೆ 14 ದಿನ ಕ್ವಾರಂಟೈನ್‌ಗೆ ಒಳಗಾದರೆ ಸಾಕು. ಇದು ಎಲ್ಲರಿಗೂ ಅನ್ವಯಿಸುತ್ತದೆ" ಎಂದು ತಿಳಿಸಿದೆ. 
Published by: MAshok Kumar
First published: July 6, 2020, 2:31 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading