ಲಾಕ್‌ಡೌನ್ ಪರಿಹಾರ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ಕೇಂದ್ರ ಸರಿಯಾದ ದಿಕ್ಕಿನೆಡೆ ಹೆಜ್ಜೆ ಇಟ್ಟಿದೆ; ರಾಹುಲ್ ಗಾಂಧಿ ಪ್ರಶಂಶೆ

ಇಂದು ಪತ್ರಿಕಾಗೋಷ್ಠಿ ಕರೆದಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲಾಕ್‌ಡೌನ್‌ನಿಂದಾಗಿ ನಷ್ಟ ಅನುಭವಿಸಲಿರುವ ಸಮಾಜದ ವಿವಿಧ ವರ್ಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸುಮಾರು 1.7 ಲಕ್ಷ ಕೋಟಿ ರೂ ವಿಶೇಷ ಪ್ಯಾಕೇಜ್‌ ಅನ್ನು ಘೋಷಿಸಿದ್ದಾರೆ.

MAshok Kumar | news18-kannada
Updated:March 26, 2020, 3:40 PM IST
ಲಾಕ್‌ಡೌನ್ ಪರಿಹಾರ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ಕೇಂದ್ರ ಸರಿಯಾದ ದಿಕ್ಕಿನೆಡೆ ಹೆಜ್ಜೆ ಇಟ್ಟಿದೆ; ರಾಹುಲ್ ಗಾಂಧಿ ಪ್ರಶಂಶೆ
ರಾಹುಲ್ ಗಾಂಧಿ
  • Share this:
ನವ ದೆಹಲಿ (ಮಾರ್ಚ್‌ 26); ಕೇಂದ್ರ ಸರ್ಕಾರ ಲಾಕ್‌ಡೌನ್‌ ಪರಿಹಾರ ಪ್ಯಾಕೇಜ್  ಘೋಷಣೆ ಮಾಡುವ ಮೂಲಕ ಸರಿಯಾದ ದಿಕ್ಕಿನಲ್ಲಿ ಮೊದಲ ಹೆಜ್ಜೆ ಇಟ್ಟಿದೆ ಎಂದು ಕಾಂಗ್ರೆಸ್‌ ಪಕ್ಷದ ಮಾಜಿ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಪ್ರಶಂಶೆ ವ್ಯಕ್ತಪಡಿಸಿದ್ದಾರೆ.

ಕೊರೋನಾ ಹರಡುವುದನ್ನು ನಿಯಂತ್ರಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಮಾರ್ಚ್‌ 25 ರಿಂದ ದೇಶದಲ್ಲಿ 21 ದಿನಗಳ ಲಾಕ್‌ಡೌನ್ ಘೋಷಿಸಿದ್ಧಾರೆ. ಈ ಲಾಕ್‌ಡೌನ್‌ ನಿಂದಾಗಿ ದೇಶಕ್ಕೆ 9 ಲಕ್ಷ ಕೋಟಿ ನಷ್ಟವಾಗಲಿದೆ ಎಂದು ಅಂದಾಜಿಸಲಾಗಿದೆ. ಆದರೆ, ಈ ನಿರ್ಧಾರದಿಂದಾಗಿ ಬಡ ಮತ್ತು ಮಧ್ಯಮ ವರ್ಗದ ಜನ ಸಾಕಷ್ಟು ನಷ್ಟ ಅನುಭವಿಸಲಿದ್ದಾರೆ ಮತ್ತು ಸಂಕಷ್ಟಕ್ಕೆ ಎದುರಾಗಲಿದ್ದಾರೆ.

ಹೀಗಾಗಿ ಎಲ್ಲಾ ಸಮೂಹದ ಜನರಿಗೆ ನೆರವಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ತುರ್ತು ಹಣಕಾಸು ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ವಿರೋಧ ಪಕ್ಷಗಳು ಸಂಸತ್‌ನಲ್ಲಿ ಒತ್ತಾಯಿಸಿದ್ದವು.

ಇದರ ಬೆನ್ನಿಗೆ ಇಂದು ಪತ್ರಿಕಾಗೋಷ್ಠಿ ಕರೆದಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲಾಕ್‌ಡೌನ್‌ನಿಂದಾಗಿ ನಷ್ಟ ಅನುಭವಿಸಲಿರುವ ಸಮಾಜದ ವಿವಿಧ ವರ್ಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸುಮಾರು 1.7 ಲಕ್ಷ ಕೋಟಿ ರೂ ವಿಶೇಷ ಪ್ಯಾಕೇಜ್‌ ಅನ್ನು ಘೋಷಿಸಿದ್ದಾರೆ.
ಕೇಂದ್ರ ಸರ್ಕಾರದ ಈ ವಿಶೇಷ ಪ್ಯಾಕೇಜ್‌ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, "ಹಣಕಾಸಿನ ನೆರವು ನೀಡುವ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ಕೇಂದ್ರ ಸರ್ಕಾರ ಸರಿಯಾದ ದಿಕ್ಕಿನ ಕಡೆಗೆ ಮೊದಲ ಹೆಜ್ಜೆಯನ್ನಿಟ್ಟಿದೆ. ಆದರೆ, ಇದರ ಜೊತೆಗೆ ರೈತರು, ದೈನಂದಿನ ಕೂಲಿ ಕಾರ್ಮಿಕರು, ಮಹಿಳೆಯರು ಮತ್ತು ವೃದ್ಧರಿಗೆ ಸಾಲ ಸೌಳಭ್ಯ ನೀಡುವ ಯೋಜನೆಯನ್ನೂ ರೂಪಿಸಬೇಕಿತ್ತು" ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ : ಲಾಕ್‌ಡೌನ್ ಪರಿಹಾರಕ್ಕಾಗಿ 1.7 ಲಕ್ಷ ಕೋಟಿ ಪ್ಯಾಕೇಜ್ ಘೋಷಿಸಿದ ಕೇಂದ್ರ ಸರ್ಕಾರ; ಯಾವ ವಲಯಕ್ಕೆ ಎಷ್ಟು ಹಣ? ಇಲ್ಲಿದೆ ಮಾಹಿತಿ
First published:March 26, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading