ರಾಜಕುಮಾರ್ ಅವರ ಯೋಗ ಗುರು ಕೊರೋನಾಗೆ ಬಲಿ: ಹೊನ್ನಪ್ಪ ಫಕೀರಪ್ಪ ನಾಯ್ಕರ್ ಇನ್ನಿಲ್ಲ

90 ವರ್ಷದ ಹೊನ್ನಪ್ಪ ನಾಯ್ಕರ್​ ಅವರಿಗೆ ಕೆಲವು ದಿನಗಳ ಹಿಂದೆ ಕೊರೋನಾ ಸೋಂಕಾಗಿತ್ತು. ಅವರಿಗೆ ಚಿಕಿತ್ಸೆ ಕೊಡಿಸಿದರೂ ಅದು ಫಲಕಾರಿಯಾಗದೆ ಇಂದು ಅವರು ಸಾವನ್ನಪ್ಪಿದ್ದಾರೆ. 

ಹೊನ್ನಪ್ಪ ಫಕೀರಪ್ಪ ನಾಯ್ಕರ್​

ಹೊನ್ನಪ್ಪ ಫಕೀರಪ್ಪ ನಾಯ್ಕರ್​

  • Share this:
ಕೊರೋನಾ ಮಹಾಮಾರಿ ಇನ್ನೆಷ್ಟು ಜನರನ್ನು ಬಲಿ ಪಡೆಯುತ್ತದೆಯೋ. ಕೊರೋನಾದಿಂದಾಗಿ ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳು ಸೇರಿದಂತೆ ಸಾಮಾನ್ಯ ಜನರೂ ಪ್ರಾಣ ಕಳೆದುಕೊಂಡಿದ್ದಾರೆ. ಕೊರೋನಾ ಎರಡನೇ ಆರಂಭವಾಗುತ್ತಿದ್ದಂತೆಯೇ ಸೋಂಕಿತರ ಸಂಖ್ಯೆಯಲ್ಲಿ ತೀವ್ರ ಹೆಚ್ಚಳವಾಗಿದೆ. ಜೊತೆಗೆ ಸಾವಿನ ಪ್ರಮಾಣವೂ ಏರಿಯಾಗಿದೆ. ಸ್ಯಾಂಡಲ್​ವುಡ್​ನಲ್ಲಿ ಒಬ್ಬರ ಹಿಂದೆ ಒಬ್ಬರ ಸಾವಿನ ಸುದ್ದಿ ಬರ ಸಿಡಿಲಿನಂತೆ ಬಡಿಯುತ್ತಿದೆ. ಒಟ್ಟಾರೆ ಕೊರೋನಾದಿಂದಾಗಿ ಜನರ ಜೀವನ ದುಸ್ಥರವಾಗಿದೆ. ಈಗ ಡಾ. ರಾಜ್​ಕುಮಾರ್​ ಅವರಿಗೆ ಯೋಗ ಹೇಳಿಕೊಡುತ್ತಿದ್ದ ಯೋಗ ಗುರು  ಸಹ ಕೊರೋನಾ ಸೋಂಕಿನಿಂದ ಕೊನೆಯುಸಿರೆಳೆದಿದ್ದಾರೆ.  90 ವರ್ಷದವರಾಗಿದ್ದ ಹೊನ್ನಪ್ಪ ಫಕೀರಪ್ಪ ನಾಯ್ಕರ್ ಅವರಿಗೆ ಕೊರೋನಾ ಸೋಂಕು ತಗುಲಿತ್ತು. ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. 

90 ವರ್ಷದ ಹೊನ್ನಪ್ಪ ಫಕೀರಪ್ಪ ನಾಯ್ಕರ್​ ಅವರಿಗೆ ಕೆಲವು ದಿನಗಳ ಹಿಂದೆ ಕೊರೋನಾ ಸೋಂಕಾಗಿತ್ತು. ಅವರಿಗೆ ಚಿಕಿತ್ಸೆ ಕೊಡಿಸಿದರೂ ಅದು ಫಲಕಾರಿಯಾಗದೆ ಇಂದು ಅವರು ಸಾವನ್ನಪ್ಪಿದ್ದಾರೆ.

Rajkumar, Yoga Guru Dr Honnappa Fakeerappa Naikar, Sandalwood, corona, ಯೋಗ ಗುರು ಹೊನ್ನಪ್ಪ ಫಕೀರಪ್ಪ ನಾಯ್ಕರ್​, ಸ್ಯಾಂಡಲ್​ವುಡ್​, ರಾಜ್​ಕುಮಾರ್​ ಅವರ ಯೋಗ ಗುರು, ಕೊರೋನಾಗೆ ಹೊನ್ನಪ್ಪ ಫಕೀರಪ್ಪ ನಾಯ್ಕರ್​ ಬಲಿ, Rajkumars Yoga Guru Dr Honnappa Fakeerappa Naikar died to due to corona ae
ರಾಜ್​ಕುಮಾರ್​ ಅವರೊಂದಿಗೆ ಹೊನ್ನಪ್ಪ ಫಕೀರಪ್ಪ ನಾಯ್ಕರ್​ ಚಿತ್ರ ಕೃಪೆ: ಟ್ವಿಟರ್


ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಹೊನ್ನಪ್ಪ ನಾಯ್ಕರ್ ನಂತರ ಯೋಗದತ್ತ ಮುಖ ಮಾಡಿದರು. ಡಾ. ರಾಜಕುಮಾರ್ ಅವರ ಕುಟುಂಬ ಸೇರಿದಂತೆ ಹಲವು ಗಣ್ಯರಿಗೆ ಯೋಗ ಹೇಳಿಕೊಡುತ್ತಿದ್ದರು. ಕನಕಪುರದ ಬಳಿ ನಾಗದೇವನಹಳ್ಳಿಯಲ್ಲಿ ಹೊನ್ನಪ್ಪ ನಾಯ್ಕರ್ ಅವರ ಅಂತಿಮ ಸಂಸ್ಕಾರ ನೆರವೇರಿಸಲು ಕುಟುಂಬದವರು ತೀರ್ಮಾನಿಸಿದ್ದಾರೆ.

ಇದನ್ನೂ ಓದಿ: 35ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ಶಿವಣ್ಣ ದಂಪತಿ: ಶುಭ ಕೋರಿದ ರಾಘಣ್ಣ..!

ಕೊರೋನಾದಿಂದಾಗಿ ಸ್ಯಾಂಡಲ್​ವುಡ್​ನಲ್ಲಿ ಒಂದರ ಹಿಂದೆ ಒಂದು ಕಹಿ ಘಟನೆಗಳು ನಡೆಯುತ್ತಿವೆ. ಕಲಾ ಸೇವೆ ಮಾಡುತ್ತಿರುವ ಹಲವಾರು ಮಂದಿ ಕಲಾವಿದರು ಕೊರೋನಾಗೆ ಬಲಿಯಾಗುತ್ತಿದ್ದಾರೆ. ಶಂಖನಾದ ಅರವಿಂದ್​, ರೇಣುಕಾ ಶರ್ಮಾ, ರಾಮು, ಹಿರಿಯ ನಟ ಹಾಗೂ ರಂಗಭೂಮಿ ಕಲಾವಿದ ರಾಜಾರಾಂ, ಕನ್ನಡ ಸಿನಿಮಾದ ನಿರ್ಮಾಪಕ ಹಾಗೂ ವಿತರಕ ದೀಪಕ್​ ಸಾಮಿದೊರೈ  ಸೇರಿದಂತೆ ಹಲವರು ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ.

ಕೊರೋನಾ ವೈರಸ್, ಹೃದಯಾಘಾತ ಸೇರಿದಂತೆ ಇತರೆ ಕಾಯಿಲೆಗಳಿಂದ ಸ್ಯಾಂಡಲ್​ವುಡ್​ ಕಲಾವಿದರು ಸಾವನ್ನಪ್ಪಿದ್ದಾರೆ. ಅದರಲ್ಲೂ ಇತ್ತೀಚೆಗಷ್ಟೆ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಶ್ರೀರಂಗ ಅವರು ನಿಧನರಾಗಿದ್ದಾರೆ. ಸುಮಾರು ಒಂದು ಸಾವಿರಕ್ಕೂ ಹೆಚ್ಚು ಸಿನಿಮಾ ಹಾಡುಗಳನ್ನು ಬರೆದಿರುವ ಗೀತೆಗಳ ಸಾಹಿತಿ ಇನ್ನಿಲ್ಲ. ನಂಜುಂಡಿ ಕಲ್ಯಾಣ, ಆಸೆಗೊಬ್ಬ ಮೀಸೆಗೊಬ್ಬ, ಜನುಮದ ಜೋಡಿ, ರಕ್ತ ಕಣ್ಣೀರು ಸೇರಿದಂತೆ ಹಲವು ಸಿನಿಮಾಗಳಿಗೆ ಹಿಟ್ ಹಾಡುಗಳನ್ನು ಬರೆದಿದ್ದಾರೆ. ಅಂಜದ ಗಂಡು, ಕಿಂದರಿ ಜೋಗಿ, ಮುತ್ತೈದೆ ಭಾಗ್ಯ, ಭೂಲೋಕದಲ್ಲಿ ಯಮ ರಾಜ ಸೇರಿದಂತೆ ಹಲವು ಚಿತ್ರಗಳಿಗೆ ಸಂಭಾಷಣೆ ಸಹಬರೆದಿದ್ದರು.

ಇದನ್ನೂ ಓದಿ: Kavitha Gowda: ಮದುವೆ ಆಲ್ಬಂನಿಂದ ಮುದ್ದಾದ ಮತ್ತಷ್ಟು ಫೋಟೋ ಹಂಚಿಕೊಂಡ ನಟಿ ಕವಿತಾ ಗೌಡ

ಕಳೆದ ಕೆಲವು ವಾರಗಳಿಂದ ಕೋವಿಡ್ ಸೋಂಕಿಗೆ ಸ್ಯಾಂಡಲ್‌ವುಡ್‌ನ ಸರಿ ಸುಮಾರು ಹತ್ತುಕ್ಕೂ ಹೆಚ್ಚು ಮಂದಿ ಸೆಲೆಬ್ರಿಟಿಗಳು ಬಲಿಯಾಗಿದ್ದಾರೆ. ಮೇ 2ರಂದು ಮಿಸ್ಡ್ ಕಾಲ್ ಎಂಬ ಸಿನಿಮಾ ನಿರ್ಮಿಸಿದ್ದ ಚಂದ್ರ ಅವರು ಕೊರೋನಾ ಸೋಂಕಿಗೆ ಬಲಿಯಾಗಿದ್ದರು. ಹಾಗೇ ಮೇ 1ರಂದು 2011ರಲ್ಲಿ ಒನ್ ಡೇ ಎಂಬ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದ ನವೀನ್ ಕುಮಾರ್ ಕೊರೊನಾ ಸೋಂಕಿನಿಂದ ಕೊನೆಯುಸಿರೆಳೆದಿದ್ದರು. ಅವರಿಗೆ ಕೇವಲ 36 ವರ್ಷ ವಯಸ್ಸಾಗಿತ್ತು. ಏಪ್ರಿಲ್ 22ರಂದು ಹಿರಿಯ ನಿರ್ಮಾಪಕ ಅಣ್ಣಯ್ಯ, ಬಿಂದಾಸ್, ರನ್ನ ಸಿನಿಮಾಗಳನ್ನು ನಿರ್ಮಿಸಿದ್ದ ಎಂ. ಚಂದ್ರಶೇಖರ್ ಅವರು ಕೊವಿಡ್‌ಗೆ ಬಲಿಯಾಗಿದ್ದರು. ಹಾಗೇ ಕರ್ನಾಟಕ ಚಲನಚಿತ್ರ ವರ್ಣಾಲಂಕಾರ ಕಲಾವಿದರ ಸಂಘದ ಉಪಾಧ್ಯಕ್ಷ ಆರ್. ಶ್ರೀನಿವಾಸ್ ಕೂಡ ಕೆಲ ದಿನಗಳ ಹಿಂದಷ್ಟೇ ಈ ಮಹಾಮಾರಿಗೆ ತುತ್ತಾಗಿದ್ದರು.
Published by:Anitha E
First published: