• Home
  • »
  • News
  • »
  • coronavirus-latest-news
  • »
  • ಆತಂಕಗೊಂಡಿದ್ದ ರಾಮನಗರ ಮಂದಿ ಕೊಂಚ ನಿರಾಳ; 68 ಜನರ ಪರೀಕ್ಷಾ ವರದಿ ನೆಗೆಟಿವ್

ಆತಂಕಗೊಂಡಿದ್ದ ರಾಮನಗರ ಮಂದಿ ಕೊಂಚ ನಿರಾಳ; 68 ಜನರ ಪರೀಕ್ಷಾ ವರದಿ ನೆಗೆಟಿವ್

ಕೊರೋನಾ ವೈರಸ್ ಪ್ರಾತಿನಿಧಿಕ ಚಿತ್ರ

ಕೊರೋನಾ ವೈರಸ್ ಪ್ರಾತಿನಿಧಿಕ ಚಿತ್ರ

ವರದಿಗೆ ಕಳುಹಿಸಿದ್ದ ಎಲ್ಲಾ ವರದಿಗಳು ನೆಗೆಟಿವ್ ಬಂದಿದ್ದು, ಯಾವುದೇ ಆತಂಕ ಇಲ್ಲ. ಎಲ್ಲರೂ ಆರೋಗ್ಯವಾಗಿದ್ದಾರೆ ಎಂದು ರಾಮನಗರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಿರಂಜನ್ ಮಾಹಿತಿ ನೀಡಿದ್ದಾರೆ.

  • Share this:

ರಾಮನಗರ: ಪಾದರಾಯನಪುರ ಗಲಭೆ ಮಾಡಿದ ಆರೋಪದ ಮೇಲೆ ಬಂಧಿಸಿದ್ದ 58 ಆರೋಪಿಗಳನ್ನು ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿತ್ತು. ಇವರ ಪೈಕಿ ಇಬ್ಬರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲೆಯ ಜನರು ಆತಂಕಕ್ಕೆ ಒಳಗಾಗಿದ್ದರು.

ಇಬ್ಬರು ಆರೋಪಿಗಳಲ್ಲಿ ಕೊರೋನಾ ಸೋಂಕು ಕಾಣಿಸಿಕೊಳ್ಳುತ್ತಿದ್ದಂತೆ ಎಲ್ಲ ಆರೋಪಿಗಳನ್ನು ಮತ್ತೆ ಬೆಂಗಳೂರಿಗೆ ಸ್ಥಳಾಂತರಿಸಲಾಗಿತ್ತು. ಮತ್ತು ಆರೋಪಿಗಳ ಜೊತೆಗೆ ಸಂಪರ್ಕ ಪಡೆದಿದ್ದ 68 ಜನರನ್ನು ಕ್ವಾರಂಟೈನ್​ ಮಾಡಿ, ಅವರ ಗಂಟಲು ಮಾದರಿಯನ್ನು ಸಂಗ್ರಹಿಸಿ, ಪರೀಕ್ಷೆಗೆ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು.

ವರದಿಗೆ ಕಳುಹಿಸಿದ್ದ ಎಲ್ಲಾ ವರದಿಗಳು ನೆಗೆಟಿವ್ ಬಂದಿದ್ದು, ಯಾವುದೇ ಆತಂಕ ಇಲ್ಲ. ಎಲ್ಲರೂ ಆರೋಗ್ಯವಾಗಿದ್ದಾರೆ ಎಂದು ರಾಮನಗರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಿರಂಜನ್ ಮಾಹಿತಿ ನೀಡಿದ್ದಾರೆ. ಇದರಿಂದಾಗಿ ರಾಮನಗರ ಜಿಲ್ಲೆಯ ಜನರು ಕೊಂಚ ನಿರಾಳರಾಗಿದ್ದಾರೆ.  ಸದ್ಯ 68 ಜನರನ್ನು ರಾಮನಗರದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕ್ವಾರೆಂಟೈನ್​ನಲ್ಲಿ ಇರಿಸಲಾಗಿದೆ.

ವರದಿ: ಎ.ಟಿ. ವೆಂಕಟೇಶ್

ಇದನ್ನು ಓದಿ: ಪಾದರಾಯನಪುರ ಗಲಾಟೆ ಆರೋಪಿಗಳು ಬೆಂಗಳೂರಿಗೆ ಶಿಫ್ಟ್‌; ರೆಡ್‌ಜೋನ್‌ನಲ್ಲಿ ಹೆಚ್ಚಿದ ಆತಂಕ

First published: