ಕೊರೋನಾ ತಡೆಗೆ ಕ್ರಮ: ಇಂದಿನಿಂದ ಉಡುಪಿಯಲ್ಲಿ ಬೆಳಿಗ್ಗೆ 7ರಿಂದ 11ರವರೆಗೆ ಮಾತ್ರ ಅಂಗಡಿಗಳು ಓಪನ್

ಈ ಹಿಂದೆಯೇ ಕೊರೊನಾ ಸೋಂಕಿಗೆ ಸಂಬಂಧಿಸಿ ಮಣಿಪಾಲ ಆಸ್ಪತ್ರೆಗೆ ಸೇರಿದ ಇಬ್ಬರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಇಲ್ಲ ಎಂದು ಪರೀಕ್ಷೆಯಿಂದ ದೃಢಪಟ್ಟಿತ್ತು. ಆಂಧ್ರ ಮತ್ತು ಕೇರಳ ಮೂಲದ ಈ ವಿದ್ಯಾರ್ಥಿಗಳು ಅಮೆರಿಕ ಮತ್ತು ಮಲೇಶ್ಯಾಕ್ಕೆ ಹೋಗಿ ಮಣಿಪಾಲಕ್ಕೆ ಆಗಮಿಸಿದ್ದರು. ಇವರಲ್ಲಿ ಸೋಂಕು ಲಕ್ಷಣಗಳು ಕಂಡು ಬಂದಾಗ ರಕ್ತ ಪರೀಕ್ಷೆಯನ್ನು ಶಿವಮೊಗ್ಗಕ್ಕೆ ಕಳುಹಿಸಲಾಯಿತು. ನಂತರ ಸೋಂಕು ಇಲ್ಲ ಎಂದು ವರದಿ ಬಂದಿತ್ತು.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  ಉಡುಪಿ(ಮಾ.29): ಕೊರೋನಾ ವೈರಸ್​​ ಹರಡಂತೆ ಮುಂಜಾಗೃತ ಕ್ರಮವಾಗಿ ಉಡುಪಿ ಜಿಲ್ಲಾಡಳಿತ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಇದರ ಭಾಗವಾಗಿಯೇ ಇಂದಿನಿಂದ ಬೆಳಿಗ್ಗೆ 7ರಿಂದ 11 ಗಂಟೆಯವರೆಗೂ ಮಾತ್ರ ದಿನಸಿ ಸಾಮಾಗ್ರಿ ಅಂಗಡಿಗಳು ತೆರೆಯಲು ಅನುಮತಿ ನೀಡಲಾಗಿದೆ. ಈ ಅವಧಿಯಲ್ಲಿ ಮಾತ್ರ ಗ್ರಾಹಕರು ಅಗತ್ಯವಿರುವ ದಿನಸಿ, ತರಕಾರಿ ಹಣ್ಣು, ಹಾಲು, ಮಾಂಸ, ಮೀನು ಮುಂತಾದ ಅವಶ್ಯಕ ವಸ್ತುಗಳನ್ನು ಖರೀದಿಸಬಹುದಾಗಿದೆ.

  ಕೋವಿಡ್​​ ವೈರಸ್​​ ತಡೆಯುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯಲ್ಲಿ ಈ ಹಿಂದೆಯೇ 144 (3) ಸೆಕ್ಷನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಜಿ. ಜಗದೀಶ್​ ಆದೇಶ ಹೊರಡಿಸಿದ್ದರು. ಈ ಮಾರಕ ಸೋಂಕು ಹರಡುವುದನ್ನು ತಡೆಗಟ್ಟಲು ಇಲ್ಲಿನ ಧಾರ್ಮಿಕ ಸಂಸ್ಥೆಗಳ ಜಾತ್ರೆಗಳು, ಸಭೆ ಸಮಾರಂಭಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂತೆ, ಸಾಮೂಹಿಕ ವಿವಾಹಗಳು ಮತ್ತು ಯಾವುದೇ ಜನ ಸೇರುವ ಕಾರ್ಯಕ್ರಮಗಳನ್ನು ನಡೆಸಬಾರದು. ಇದರಿಂದ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿರುವ ಕಾರಣ ನಿರ್ಬಂಧ ಹೇರಲಾಗಿದೆ ಎಂದು ಹೇಳಿದ್ದರು.

  ಈ ಹಿಂದೆಯೇ ಕೊರೊನಾ ಸೋಂಕಿಗೆ ಸಂಬಂಧಿಸಿ ಮಣಿಪಾಲ ಆಸ್ಪತ್ರೆಗೆ ಸೇರಿದ ಇಬ್ಬರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಇಲ್ಲ ಎಂದು ಪರೀಕ್ಷೆಯಿಂದ ದೃಢಪಟ್ಟಿತ್ತು. ಆಂಧ್ರ ಮತ್ತು ಕೇರಳ ಮೂಲದ ಈ ವಿದ್ಯಾರ್ಥಿಗಳು ಅಮೆರಿಕ ಮತ್ತು ಮಲೇಶ್ಯಾಕ್ಕೆ ಹೋಗಿ ಮಣಿಪಾಲಕ್ಕೆ ಆಗಮಿಸಿದ್ದರು. ಇವರಲ್ಲಿ ಸೋಂಕು ಲಕ್ಷಣಗಳು ಕಂಡು ಬಂದಾಗ ರಕ್ತ ಪರೀಕ್ಷೆಯನ್ನು ಶಿವಮೊಗ್ಗಕ್ಕೆ ಕಳುಹಿಸಲಾಯಿತು. ನಂತರ ಸೋಂಕು ಇಲ್ಲ ಎಂದು ವರದಿ ಬಂದಿತ್ತು.

  ಇದನ್ನೂ ಓದಿ: ಇಂದು ರಾಜ್ಯದಲ್ಲಿ 12 ಕೋವಿಡ್​​-19 ಪಾಸಿಟಿವ್​​ ಕೇಸ್ ಪತ್ತೆ: 76ಕ್ಕೇರಿದ ಸೋಂಕಿತರ ಸಂಖ್ಯೆ ​

  ಕರ್ನಾಟಕದಲ್ಲಿ ಕೊರೋನಾ ವೈರಸ್​ ಅಟ್ಟಹಾಸ ಮುಂದುವರೆದಿದೆ. ನಿನ್ನೆಯವರೆಗೂ ರಾಜ್ಯದಲ್ಲಿ ಹೊಸದಾಗಿ 12 ಕೋವಿಡ್​​-19 ಪಾಸಿಟಿವ್​​ ಕೇಸುಗಳು ಪತ್ತೆಯಾಗಿವೆ. ಆದ್ದರಿಂದಲೇ ಇಲ್ಲಿಯವರೆಗಿನ ಸೋಂಕಿತರ ಸಂಖ್ಯೆ 76ಕ್ಕೆ ಏರಿಯಾಗಿದೆ. ಈ ಪೈಕಿ ಹೆಚ್ಚು ಕೇಸುಗಳು ಬೆಂಗಳೂರಿನಲ್ಲೇ ಕಂಡು ಬಂದಿವೆ ಎಂದು ರಾಜ್ಯ ಸರ್ಕಾರ ಮಾಹಿತಿ ಬಿಡುಗಡೆ ಮಾಡಿದೆ.
  First published: