Coronavirus: ಹೊರಗಿನಿಂದ ರಾಜ್ಯಕ್ಕೆ ಬರುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ; ಪಂಜಾಬ್ ಸರ್ಕಾರ ಆದೇಶ

ಪಂಜಾಬ್‌ನಲ್ಲಿ ಕಳೆದ ವಾರದಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಮುಂದಿನ 64 ದಿನಗಳಲ್ಲಿ ಪ್ರಕರಣಗಳು ದ್ವಿಗುಣಗೊಳ್ಳುವ ಸಾಧ್ಯತೆಯಿದೆ ಎಂದು ಕೇಂಬ್ರಿಡ್ಜ್ ಅಧ್ಯಯನವು ಭವಿಷ್ಯ ನುಡಿದಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    ಕೋವಿಡ್ ನಿಯಂತ್ರಣಕ್ಕಾಗಿ ಪಕ್ಕದ ಹಿಮಾಚಲ ಪ್ರದೇಶ ತೆಗೆದುಕೊಂಡಂತಹ ಕಠಿಣ ಕ್ರಮಗಳನ್ನು ಇದೀಗ ಪಂಜಾಬ್ ಸಹ ತೆಗೆದುಕೊಂಡಿದೆ.  ಪಂಜಾಬ್ ರಾಜ್ಯಕ್ಕೆ ಹೊರಗಿನಿಂದ ಯಾರೆ ಬಂದರೂ ಅವರು ಕೋವಿಡ್ ಲಸಿಕೆ ಅಥವಾ ಆರ್​ಟಿಪಿಸಿಆರ್ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯ ಮಾಡಲಾಗಿದೆ.

    ಹಿಮಾಚಲ ಪ್ರದೇಶ ಹಾಗೂ ಜಮ್ಮುವಿನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಈ ಪ್ರದೇಶದಿಂದ ಪಂಜಾಬ್​ ರಾಜ್ಯಕ್ಕೆ ಹೆಚ್ಚಿನ ಜನರು ಬರುತ್ತಾರೆ. ಹೀಗಾಗಿ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಶನಿವಾರ ಈ ಆದೇಶ ಹೊರಡಿಸಿದ್ದಾರೆ.


    ಶಾಲೆಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾದ ಕಾರಣ ಪ್ರತಿ ಶಾಲೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಲಸಿಕೆ ಪಡೆದುಕೊಂಡವರು ಅಥವಾ ಕೋವಿಡ್‌ನಿಂದ ಇತ್ತೀಚೆಗೆ ಚೇತರಿಸಿಕೊಂಡವರು ಮಾತ್ರ ಶಾಲಾ-ಕಾಲೇಜುಗಳಲ್ಲಿ ದೈಹಿಕವಾಗಿ ಹಾಜರಾಗಬೇಕು. ಆನ್‌ಲೈನ್ ಕಲಿಕಾ ಆಯ್ಕೆಯು ಎಲ್ಲರಿಗೂ ಲಭ್ಯವಿರಬೇಕೆಂದು ಮುಖ್ಯಮಂತ್ರಿ ಸೂಚಿಸಿದ್ದಾರೆ.


    ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಬೇಕು ಎಂದು ಸಿಎಂ ಅಮರೀಂದರ್ ಸಿಂಗ್ ಅವರು ಆದೇಶಿಸಿದರು. ಈ ತಿಂಗಳೊಳಗೆ ಎಲ್ಲರನ್ನು ಮೊದಲ ಡೋಸ್‌ಗೆ ಒಳಪಡಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ವಿಶೇಷ ಶಿಬಿರಗಳನ್ನು ನಡೆಸಲಾಗುವುದು. ಮತ್ತು 2 ನೇ ಡೋಸ್‌ಗೆ ಆದ್ಯತೆ ನೀಡಬೇಕು. ಶಿಕ್ಷಕರು ಮತ್ತು ಇತರ ಶಾಲಾ ಸಿಬ್ಬಂದಿಗೆ ಎರಡನೇ ಡೋಸ್‌ಗೆ ಆದ್ಯತೆ ನೀಡಲು ಎರಡು ಡೋಸ್‌ಗಳ ನಡುವಿನ ಅಂತರವನ್ನು ಕಡಿಮೆ ಮಾಡಲು ಆರೋಗ್ಯ ಸಚಿವ ಬಲಬೀರ್ ಸಿಂಗ್ ಗೆ ಸಿಧು ಸಲಹೆ ನೀಡಿದರು.

    ಹಿಮಾಚಲ ಪ್ರದೇಶ ಮತ್ತು ದೇಶದ ಇತರ ಭಾಗಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಕ್ಯಾಪ್ಟನ್ ಅಮರೀಂದರ್ ಸಿಂಗ್, ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಹಲವು ನಿರ್ದೇಶನಗಳನ್ನು ನೀಡಿದರು. ಪಂಜಾಬ್‌ನಲ್ಲಿ ಕಳೆದ ವಾರದಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಮುಂದಿನ 64 ದಿನಗಳಲ್ಲಿ ಪ್ರಕರಣಗಳು ದ್ವಿಗುಣಗೊಳ್ಳುವ ಸಾಧ್ಯತೆಯಿದೆ ಎಂದು ಕೇಂಬ್ರಿಡ್ಜ್ ಅಧ್ಯಯನವು ಭವಿಷ್ಯ ನುಡಿದಿದೆ. ಹೀಗಾಗಿ ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಇಂದು ಕೋವಿಡ್ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಯಿತು.

    ಇದನ್ನು ಓದಿ: ಸದ್ಯಕ್ಕಿಲ್ಲ Lockdown​; ಇನ್ನೆರಡು ವಾರ ಕಾದು ನೋಡಿ ಬಳಿಕ ತೀರ್ಮಾನ: ಸಿಎಂ

    ಶಾಲೆಗಳಿಂದ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯ ಕನಿಷ್ಠ 10000 ಪರೀಕ್ಷಾ ಮಾದರಿಗಳನ್ನು ಪ್ರತಿದಿನ ಸಂಗ್ರಹಿಸುವಂತೆ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಆದೇಶಿಸಿದ್ದಾರೆ. ಪಾಸಿಟಿವಿಟಿ ದರ ಶೇ 0.2  ಕ್ಕಿಂತ ಹೆಚ್ಚಿರುವ ಜಿಲ್ಲೆಗಳು, ನಗರಗಳ ಪರಿಸ್ಥಿತಿ ಸುಧಾರಿಸುವವರೆಗೆ 4 ಮತ್ತು ಅದಕ್ಕಿಂತ ಕಡಿಮೆ ತರಗತಿಗಳಿಗೆ ಶಾಲೆಗಳನ್ನು ತೆರೆಯದಂತೆ ಸೂಚಿಸಲಾಗಿದೆ.

    ಕರ್ನಾಟಕದಲ್ಲಿಯೂ ಸಹ ಕೋವಿಡ್​ ಮೂರನೇ ಅಲೆ ನಿಯಂತ್ರಣ ಸಂಬಂಧ ಇಂದು ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರು ಕೋವಿಡ್​ ತಾಂತ್ರಿಕ  ತಜ್ಞರು, ಅಧಿಕಾರಿಗಳೊಂದಿಗೆ ಮುಂಜಾಗ್ರತಾ ಕ್ರಮಗಳ ಕುರಿತು ಗಂಭೀರ ಚರ್ಚೆ ನಡೆಸಿದರು. ಇನ್ನು ರಾಜ್ಯದಲ್ಲಿ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನಲೆ ಆಗಸ್ಟ್​ 15ರ ಬಳಿಕ ಕಠಿಣ ನಿಲುವು ಕೈಗೊಳ್ಳಲಾಗುತ್ತದೆ ಎನ್ನಲಾಗಿತ್ತು. ಆದರೆ, ಸದ್ಯ ಸೋಂಕು ನಿಯಂತ್ರಣದಲ್ಲಿದ್ದು, ಪ್ರಸ್ತುತ ರಾಜ್ಯದಲ್ಲಿರುವ ಈಗಿರುವ ನಿಯಮಗಳನ್ನೇ ಮುಂದುವರೆಸುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಹೊಸದಾಗಿ ಯಾವುದೇ ನಿಯಮವಿಲ್ಲ. ಈಗ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ನೈಟ್​ ಕರ್ಫ್ಯೂ ಹಾಗೂ ಎಂಟು ಗಡಿ ಜಿಲ್ಲೆಗಳಲ್ಲಿ ವೀಕೆಂಡ್​ ಕರ್ಫ್ಯೂ ಜಾರಿಯಲ್ಲಿದ್ದು, ಇದನ್ನೆ ಮುಂದುವರೆಸಬೇಕು. ಹೊಸದಾಗಿ ಯಾವುದೇ ನಿಯಮಗಳಿಲ್ಲ. ಈಗ ಜಾರಿಯಲ್ಲಿರುವ ನಿಯಮಗಳನ್ನೇ ಸರಿಯಾಗಿ ಪಾಲಿಸುವಂತೆ ಅವರು ಸೂಚನೆ ನೀಡಿರುವ ಅವರು ಅ. 30ರವರೆಗೆ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದ್ದಾರೆ.
    Published by:HR Ramesh
    First published: