HOME » NEWS » Coronavirus-latest-news » SECOND PUC EXAM ON JUNE 18TH AND THERMAL SCREENING IS MANDATORY IN EXAM CENTERS LG

ಇದೇ ಜೂನ್​ 18ರಂದು ಪಿಯುಸಿ ಎಕ್ಸಾಂ; ಪರೀಕ್ಷಾ ಕೇಂದ್ರಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ

ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು. ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳು ತಮ್ಮ ಮನೆಯಿಂದ  ಕುಡಿಯುವ ನೀರಿನ ಬಾಟಲ್‍ಗಳನ್ನು ತಂದುಕೊಳ್ಳುವುದು ಅಗತ್ಯ. ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳನ್ನು  ಮೂರು ದಿನ ಮುಂಚಿತವಾಗಿ ಸ್ಯಾನಿಟೈಸ್ ಮಾಡಿಸಲಾಗುವುದು.

news18-kannada
Updated:June 16, 2020, 10:55 AM IST
ಇದೇ ಜೂನ್​ 18ರಂದು ಪಿಯುಸಿ ಎಕ್ಸಾಂ; ಪರೀಕ್ಷಾ ಕೇಂದ್ರಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ
ಸಾಂದರ್ಭಿಕ ಚಿತ್ರ
  • Share this:
ಚಿಕ್ಕಬಳ್ಳಾಪುರ(ಜೂ.16): ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಯನ್ನು ಸುಸೂತ್ರವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ಸಂಬಂಧ ಚರ್ಚಿಸುವ ಸಲುವಾಗಿ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ  ಪೂರ್ವಭಾವಿ ಸಭೆ ನಡೆಸಲಾಯಿತು.

ಉಪವಿಭಾಗಾಧಿಕಾರಿ ಎ.ಎನ್. ರಘುನಂದನ್  ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾಹಿತಿ ಪಡೆದ ರಘುನಾಥ್ ಮಾಹಿತಿ ಹಂಚಿಕೊಂಡರು. ಜೂನ್​ 18ರಂದು ಬೆಳಗ್ಗೆ 10-15 ರಿಂದ 1.30ರವರೆಗೆ ಪರೀಕ್ಷೆ ನಡೆಯಲಿದೆ. ಜಿಲ್ಲೆಯಲ್ಲಿ ಒಟ್ಟು 22 ದ್ವಿತೀಯ ಪಿ.ಯು.ಸಿ ಪರೀಕ್ಷಾ ಕೇಂದ್ರಗಳಿವೆ. ಚಿಕ್ಕಬಳ್ಳಾಪುರ-06, ಶಿಡ್ಲಘಟ್ಟ-02, ಚಿಂತಾಮಣಿ-06, ಗೌರಿಬಿದನೂರು-04, ಬಾಗೇಪಲ್ಲಿ-03, ಗುಡಿಬಂಡೆ-01 ಪರೀಕ್ಷಾ ಕೆಂದ್ರಗಳಿವೆ ಎಂದು ಹೇಳಿದರು.

ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳು: ಚಿಕ್ಕಬಳ್ಳಾಪುರ-3209, ಬಾಗೇಪಲ್ಲಿ-1676, ಗೌರಿಬಿದನೂರು-2230, ಶಿಡ್ಲಘಟ್ಟ-1671, ಚಿಂತಾಮಣಿ-3326, ಗುಡಿಬಂಡೆ-103, ಒಟ್ಟು-12215 ವಿದ್ಯಾರ್ಥಿಗಳು ಹಾಜರಾಗುವರು. ಪರೀಕ್ಷಾ ದಿನಾಂಕದಂದು ಪರೀಕ್ಷೆಗೆ ಹೋಗಿ ಬರಲು ಹಳೆಯ ಸ್ಮಾರ್ಟ್ ಪಾಸ್/ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಕೆ.ಎಸ್.ಆರ್.ಟಿ.ಸಿ ಬಸ್‍ಗಳಲ್ಲಿ ಸಂಚರಿಸಲು ಅವಕಾಶ ಮಾಡಿಕೊಡಲಾಗಿದೆ.

ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತ ಸೆಕ್ಷನ್ 144 ಜಾರಿ ಮಾಡಿ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷೆ ನಡೆಯುವ ಸಮಯದಂದು ಮುಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ವಿದ್ಯಾರ್ಥಿಗಳು ಬೆಳಿಗ್ಗೆ 8-30 ನಿಮಿಷದೊಳಗಾಗಿ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಿ ಥರ್ಮಲ್ ಸ್ಕ್ರೀನಿಂಗ್‍ಗೆ ಒಳಪಡಬೇಕಾಗಿದೆ. ಇದಕ್ಕಾಗಿ  ಪ್ರತಿ ಪರೀಕ್ಷಾ ಕೇಂದ್ರಕ್ಕೆ 04 ಮಂದಿ ಆರೋಗ್ಯ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಇನ್ನು, ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು. ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳು ತಮ್ಮ ಮನೆಯಿಂದ  ಕುಡಿಯುವ ನೀರಿನ ಬಾಟಲ್‍ಗಳನ್ನು ತಂದುಕೊಳ್ಳುವುದು ಅಗತ್ಯ. ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳನ್ನು  ಮೂರು ದಿನ ಮುಂಚಿತವಾಗಿ ಸ್ಯಾನಿಟೈಸ್ ಮಾಡಿಸಲಾಗುವುದು.
Youtube Video

ಎಲ್ಲಾ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯ  ಮೂಲಭೂತ ಸೌಲಭ್ಯಗಳನ್ನು  ಕಡ್ಡಾಯವಾಗಿ ಕಲ್ಪಿಸುವಂತೆ ಸೂಚಿಸಲಾಗಿದೆ. ಜಿಲ್ಲೆಯ ಎಲ್ಲಾ ಹೋಬಳಿ ಕೇಂದ್ರ ಸ್ಥಾನಗಳಿಂದ ಆಯಾ ತಾಲ್ಲೂಕುಗಳ ಪರೀಕ್ಷಾ ಕೇಂದ್ರಗಳಿಗೆ ಕ.ರಾ.ರಸಾ.ಸಂಸ್ಥೆಯ ವತಿಯಿಂದ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಜಿಲ್ಲಾ ಉಪ ವಿಭಾಗಾಧಿಕಾರಿ ರಘುನಂಧನ್ ಅಧಿಕಾರಿಗಳಿಗೆ ಮಾಹಿತಿ ನೀಡಿದರು.
First published: June 16, 2020, 10:55 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories