ಕೊರೋನಾ ಭೀತಿ ; ಶಿವಮೊಗ್ಗದಲ್ಲಿ ನಾಳೆಯಿಂದ ಐದು ದಿನ ನಿಷೇಧಾಜ್ಞೆ ಜಾರಿ

ಜಿಲ್ಲೆಯಲ್ಲಿ 100 ಜನರನ್ನ ಕೆಎಫ್​​ಡಿ ಪಾಸಿಟಿವ್ ಎಂದು ಗುರುತಿಸಲಾಗಿದೆ. 88 ಜನ ಗುಣಮುಖರಾಗಿದ್ದಾರೆ. ಒಬ್ಬರು ನಮ್ಮ ನಿಗಾ ಘಟಕದಿಂದ ತಪ್ಪಿಸಿಕೊಂಡಿದ್ದಾರೆ.

news18-kannada
Updated:March 19, 2020, 6:53 PM IST
ಕೊರೋನಾ ಭೀತಿ ; ಶಿವಮೊಗ್ಗದಲ್ಲಿ ನಾಳೆಯಿಂದ ಐದು ದಿನ ನಿಷೇಧಾಜ್ಞೆ ಜಾರಿ
ಸಾಂದರ್ಭಿಕ ಚಿತ್ರ
  • Share this:
ಶಿವಮೊಗ್ಗ(ಮಾ.19) : ಕೊರೋನಾ ವೈರಸ್​​ ಸೋಂಕು ತಡೆಗೆ ಮುಂಜಾಗೃತಾ ಕ್ರಮವಾಗಿ ನಾಳೆಯಿಂದ ಮಾರ್ಚ್​ 25 ರವರೆಗೆ ಐದು ದಿನಗಳ ಕಾಲ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಸ್ವಚ್ಚತೆ ಅಂತರ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಜಾತ್ರೆಯನ್ನ ಬಂದ್ ಮಾಡಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ 76 ಜನರನ್ನ ನಿಗಾ ಘಟಕದಲ್ಲಿ ಇಡಲಾಗಿದೆ. 66 ಜನರನ್ನ ಮನೆಯಲ್ಲಿಯೇ ಪ್ರತ್ಯೇಕಿಸಿ 14 ಜನರನ್ನ ನಿಗಾ ಇಡಲಾಗಿದೆ. ಫುಟ್ ಪಾತ್ ಗಳಲ್ಲಿ ವ್ಯಾಪಾರ ಮಾಡುವವರಿಗೆ ಸ್ಮಾರ್ಟ್ ಸಿಟಿ ಕಾಮಗಾರಿ ಮುಗಿದ ಮೇಲೆ ಅವರಿಗೆ ಐಡೆಂಡಿಟಿ ಕಾರ್ಡ್ ನೀಡಲಾಗುವುದು. ಜಿಲ್ಲೆಯಲ್ಲಿ ಹಕ್ಕಿ ಜ್ವರ ಇಲ್ಲ. ಆದರೂ ಇದರ ಬಗ್ಗೆ ನಿಗಾ‌ ವಹಿಸಲಾಗಿದೆ ಎಂದು ತಿಳಿಸಿದರು.

ಹೆಚ್ಚು ಜನರು ಸೇರದಂತೆ ಮನವಿ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಇನ್ನೂ ಹೆಚ್ಚು ಒತ್ತು ನೀಡಬೇಕು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಸರ್ಕಾರಿ ಕಚೇರಿಯಲ್ಲಿ ಟೋಕನ್ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಈ ಬಗ್ಗೆ ಸಹಕರಿಸಲು ಸೂಚಿಸಲಾಗಿದೆ. ದೇವಸ್ಥಾನ, ಮಸೀದಿ ಮತ್ತು ಚರ್ಚ್ ಗಳಲ್ಲಿ ಜನ ಸೇರದಂತೆ ಎಲ್ಲಾ ಮುಖಂಡರಿಗೆ ಸೂಚಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ 100 ಜನರನ್ನ ಕೆಎಫ್​​ಡಿ ಪಾಸಿಟಿವ್ ಎಂದು ಗುರುತಿಸಲಾಗಿದೆ. 88 ಜನ ಗುಣಮುಖರಾಗಿದ್ದಾರೆ. ಒಬ್ಬರು ನಮ್ಮ ನಿಗಾ ಘಟಕದಿಂದ ತಪ್ಪಿಸಿಕೊಂಡಿದ್ದಾರೆ. ಮನೆಯ‌ ಮುಂದೆ ಆರೋಗ್ಯ ಇಲಾಖೆ ಸಿಬ್ಬಂದಿಗಳನ್ನ ನಿಯೋಜಿಸಲಾಗಿದೆ. ಅವರಿಗೆ ಮನವರಿಕೆ ಮಾಡಲಾಗಿದೆ. ಒಂದು ವೇಳೆ ಕೇಳದಿದ್ದರೆ ಅವರನ್ನ ಮಣಿಪಾಲಿಗೆ ಬಲವಂತವಾಗಿ ಸೇರಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ : ಸರ್ಕಾರದ ಆದೇಶಕ್ಕೆ ಕವಡೆ ಕಿಮ್ಮತ್ತಿಲ್ಲ: ಸರಾಗವಾಗಿ ನಡೆದ ಸಾಮೂಹಿಕ ವಿವಾಹ

ಕರ್ನಾಟಕದ ಕಲಬುರ್ಗಿಯಲ್ಲಿ ಕೊರೋನಾ ವೈರಸ್​​ನಿಂದಾಗಿ ಈಗಾಗಲೇ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಕಲಬುರ್ಗಿಯಲ್ಲಿ ಸಾವನ್ನಪ್ಪಿದ ವೃದ್ಧನ ಕುಟುಂಬಸ್ಥರಿಗೂ ಕೊರೋನಾ ಸೋಂಕು ಹರಡಿರುವುದು ದೃಢಪಟ್ಟಿತ್ತು
 
First published: March 19, 2020, 6:53 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading