HOME » NEWS » Coronavirus-latest-news » SENIOR JOURNALIST AND ACTOR SURESH CHANDRA IS NO MORE AE

Covid Death: ಹಿರಿಯ ನಟ-ಪತ್ರಕರ್ತ ಸುರೇಶ್ ಚಂದ್ರ ಇನ್ನಿಲ್ಲ

RIP Suresh Chandra: ಗಣೇಶ್ ನಟನೆಯ ಚೆಲುವಿನ ಚಿತ್ತಾರ ಸಿನಿಮಾದಿಂದ ಹೆಚ್ಚು ಖ್ಯಾತಿಗೆ ಬಂದಿದ್ದ ಸುರೇಶ್ ಚಂದ್ರ, ಅವರು 50ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬೆಳ್ಳಿತೆರೆ ಮೇಲೆ ಕಾಣಿಸಿಕೊಂಡಿದ್ದರು.  ಹಲವಾರು ವರ್ಷಗಳಿಂದ ಸಿನಿಮಾ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸುರೇಶ್​ ಚಂದ್ರ ಅವರು ಇಂದು ಕೊನೆಯುಸಿರೆಳೆದಿದ್ದಾರೆ.

Anitha E | news18-kannada
Updated:June 11, 2021, 3:45 PM IST
Covid Death: ಹಿರಿಯ ನಟ-ಪತ್ರಕರ್ತ ಸುರೇಶ್ ಚಂದ್ರ ಇನ್ನಿಲ್ಲ
ಸುರೇಶ್​ ಚಂದ್ರ
  • Share this:
ಹಿರಿಯ ನಟ ಹಾಗೂ ಪತ್ರಕರ್ತ ಸುರೇಶ್​ ಚಂದ್ರ ಅವರು ಇನ್ನು ನೆನೆಪು ಮಾತ್ರ. ಪತ್ರಕರ್ತರಾಗಿದ್ದ ಸುರೇಶ್​ ಚಂದ್ರ ಅವರು ಪತ್ರಿಕೋದ್ಯಮದ ಜತೆಗೆ ಸಿನಿಮಾಗಳಲ್ಲೂ ನಟಿಸುತ್ತಿದ್ದರು. ಸುಮಾರು 69 ವರ್ಷದವರಾಗಿದ್ದ ಸುರೇಶ್​ ಚಂದ್ರ ಅವರು ಇಂದು ಕೋವಿಡ್​ನಿಂದಾಗಿ ಇಂದು ಅಪೋಲೋ‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಲಾಗುತ್ತಿತ್ತು. ಆದರೆ ಚಿಕತ್ಸೆ ಫಲಿಸದೆ  ಇಂದು ಮಧ್ಯಾಹ್ನ ಸುರೇಶ್ ಚಂದ್ರ ಅವರು ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಸುಬ್ರಹ್ಮಣ್ಯ ನಗರದಲ್ಲಿ ವಾಸವಿದ್ದ ಸುರೇಶ್ ಚಂದ್ರ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಅವರ ಹಳ್ಳಿ ಮಧುಗಿರಿ ತಾಲ್ಲೂಕಿನ ಲಿಂಗೇನಹಳ್ಳಿಯಲ್ಲಿ ನಡೆಯಲಿದೆ.

ಗಣೇಶ್ ನಟನೆಯ ಚೆಲುವಿನ ಚಿತ್ತಾರ ಸಿನಿಮಾದಿಂದ ಹೆಚ್ಚು ಖ್ಯಾತಿಗೆ ಬಂದಿದ್ದ ಸುರೇಶ್ ಚಂದ್ರ, ಅವರು 50ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬೆಳ್ಳಿತೆರೆ ಮೇಲೆ ಕಾಣಿಸಿಕೊಂಡಿದ್ದರು.  ಹಲವಾರು ವರ್ಷಗಳಿಂದ ಸಿನಿಮಾ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸುರೇಶ್​ ಚಂದ್ರ ಅವರಿಗೆ ಶಂಕರ್​ ನಾಗ್​, ಅಂಬರೀಷ್​, ವಿಷ್ಣುವರ್ಧನ್​ ಸೇರಿದಂತೆ ಹಲವಾರು ಹಿರಿಯ ನಟರೊಂದಿಗೆ ಉತ್ತಮ ಸಂಬಂಧವಿತ್ತು.

Suresh Chandra, Actoe and Journalist Suresh Chandra, ovid 19, Senior Journalist and actor Suresh Chandra died due to covid 19 ae
ಸುರೇಶ್​ ಚಂದ್ರ


ಸಂಜೆವಾಣಿ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದ ಸುರೇಶ್​ ಚಂದ್ರ ಅವರು ಕಳೆದ ವರ್ಷವಷ್ಟೆ ನಿವೃತ್ತರಾಗಿದ್ದರು. ನಾಟಕ, ಸಾಹಿತ್ಯ ಹಾಗೂ ಭಾವಗೀತೆಯಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದರು.

ಇದನ್ನೂ ಓದಿ: Yami Gautam: ಅಮ್ಮನ 33 ವರ್ಷದ ಹಳೇ ಸೀರೆಯುಟ್ಟು ಸಪ್ತಪದಿ ತುಳಿದ ನಟಿ ಯಾಮಿ ಗೌತಮ್​..!

ಕೊರೋನಾದಿಂದಾಗಿ ಸ್ಯಾಂಡಲ್​ವುಡ್​ನಲ್ಲಿ ಒಂದರ ಹಿಂದೆ ಒಂದು ಕಹಿ ಘಟನೆಗಳು ನಡೆಯುತ್ತಿವೆ. ಕಲಾ ಸೇವೆ ಮಾಡುತ್ತಿರುವ ಹಲವಾರು ಮಂದಿ ಕಲಾವಿದರು ಕೊರೋನಾಗೆ ಬಲಿಯಾಗುತ್ತಿದ್ದಾರೆ. ಶಂಖನಾದ ಅರವಿಂದ್​, ರೇಣುಕಾ ಶರ್ಮಾ, ರಾಮು, ಹಿರಿಯ ನಟ ಹಾಗೂ ರಂಗಭೂಮಿ ಕಲಾವಿದ ರಾಜಾರಾಂ, ಕನ್ನಡ ಸಿನಿಮಾದ ನಿರ್ಮಾಪಕ ಹಾಗೂ ವಿತರಕ ದೀಪಕ್​ ಸಾಮಿದೊರೈ ಸೇರಿದಂತೆ ಹಲವರು ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ.

ಕೊರೋನಾ ವೈರಸ್, ಹೃದಯಾಘಾತ ಸೇರಿದಂತೆ ಇತರೆ ಕಾಯಿಲೆಗಳಿಂದ ಸ್ಯಾಂಡಲ್​ವುಡ್​ ಕಲಾವಿದರು ಸಾವನ್ನಪ್ಪಿದ್ದಾರೆ. ಅದರಲ್ಲೂ ಇತ್ತೀಚೆಗಷ್ಟೆ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಶ್ರೀರಂಗ ಹಾಗೂ ಬಿ ಜಯಾ ಅವರು ನಿಧನರಾಗಿದ್ದಾರೆ.ಇದನ್ನೂ ಓದಿ: Nusrat Jahan: ನುಸ್ರತ್ ಜಹಾನ್​​ರಂತೆ ವಿದೇಶಕ್ಕೆ ಹೋಗಿ ವಿವಾಹವಾದ ಬಾಲಿವುಡ್​ ಸೆಲೆಬ್ರಿಟಿಗಳು ಇವರೇ..!

ಕಳೆದ ಕೆಲವು ವಾರಗಳಿಂದ ಕೋವಿಡ್ ಸೋಂಕಿಗೆ ಸ್ಯಾಂಡಲ್‌ವುಡ್‌ನ ಸರಿ ಸುಮಾರು ಹತ್ತುಕ್ಕೂ ಹೆಚ್ಚು ಮಂದಿ ಸೆಲೆಬ್ರಿಟಿಗಳು ಬಲಿಯಾಗಿದ್ದಾರೆ. ಮೇ 2ರಂದು ಮಿಸ್ಡ್ ಕಾಲ್ ಎಂಬ ಸಿನಿಮಾ ನಿರ್ಮಿಸಿದ್ದ ಚಂದ್ರ ಅವರು ಕೊರೋನಾ ಸೋಂಕಿಗೆ ಬಲಿಯಾಗಿದ್ದರು. ಹಾಗೇ ಮೇ 1ರಂದು 2011ರಲ್ಲಿ ಒನ್ ಡೇ ಎಂಬ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದ ನವೀನ್ ಕುಮಾರ್ ಕೊರೊನಾ ಸೋಂಕಿನಿಂದ ಕೊನೆಯುಸಿರೆಳೆದಿದ್ದರು. ಅವರಿಗೆ ಕೇವಲ 36 ವರ್ಷ ವಯಸ್ಸಾಗಿತ್ತು. ಏಪ್ರಿಲ್ 22ರಂದು ಹಿರಿಯ ನಿರ್ಮಾಪಕ ಅಣ್ಣಯ್ಯ, ಬಿಂದಾಸ್, ರನ್ನ ಸಿನಿಮಾಗಳನ್ನು ನಿರ್ಮಿಸಿದ್ದ ಎಂ. ಚಂದ್ರಶೇಖರ್ ಅವರು ಕೊವಿಡ್‌ಗೆ ಬಲಿಯಾಗಿದ್ದರು. ಹಾಗೇ ಕರ್ನಾಟಕ ಚಲನಚಿತ್ರ ವರ್ಣಾಲಂಕಾರ ಕಲಾವಿದರ ಸಂಘದ ಉಪಾಧ್ಯಕ್ಷ ಆರ್. ಶ್ರೀನಿವಾಸ್ ಕೂಡ ಕೆಲ ದಿನಗಳ ಹಿಂದಷ್ಟೇ ಈ ಮಹಾಮಾರಿಗೆ ತುತ್ತಾಗಿದ್ದರು.
ನ್ಯೂಸ್18 ಕನ್ನಡ ಕಳಕಳಿ

ಕೊರೋನಾ ಪಾಸಿಟಿವ್ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.
Published by: Anitha E
First published: June 11, 2021, 2:47 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories