ಅಸಂಘಟಿತ ಕಾರ್ಮಿಕರಿಗಾಗಿ ಅಧಿವೇಶನದಲ್ಲಿ ಎರಡು-ಮೂರು ಬಿಲ್ ಮಂಡನೆ: ಸಚಿವ ಶಿವರಾಮ್ ಹೆಬ್ಬಾರ್

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಂ. ಬಿ ಚಿಕ್ಕನರಸಿಂಹಯ್ಯ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ. ಫೌಜಿಯಾ ತರನ್ನುಮ್, ಅಪರ ಜಿಲ್ಲಾಧಿಕಾರಿ ಆರತಿ ಆನಂದ್, ಜಿಲ್ಲಾ ಕಾರ್ಮಿಕ ಅಧಿಕಾರಿ ವರಲಕ್ಷ್ಮೀ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಮಿಕ ಸಚಿವ ಶಿವರಾಮ್​ ಹೆಬ್ಬಾರ್​

ಕಾರ್ಮಿಕ ಸಚಿವ ಶಿವರಾಮ್​ ಹೆಬ್ಬಾರ್​

  • Share this:
ಚಿಕ್ಕಬಳ್ಳಾಪುರ(ಜು.07): ಬಡವರ ಪರವಾಗಿ ಕೆಲಸ ಮಾಡಬೇಕಾದರೆ ಸರ್ಕಾರಿ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಎಂದು ಕಾರ್ಮಿಕ ಹಾಗೂ ಸಕ್ಕರೆ ಸಚಿವ  ಅರಬೈಲ್ ಶಿವರಾಮ್ ಹೆಬ್ಬಾರ ಅಧಿಕಾರಿಗಳಿಗೆ ಕಿವಿ ಮಾತು ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವ ಶಿವರಾಮ್ ಹೆಬ್ಬಾರ್, ಕೋವಿಡ್-19 ತುರ್ತು ಸಂದರ್ಭದಲ್ಲಿ ಅಭಿವೃದ್ದಿ ಕೆಲಸಗಳು ಕುಂಟಿತವಾಗಬಾರದು. ಸಾರ್ವಜನಿಕರು ಕೊರೊನಾ ಜೊತೆ ಜೊತೆಗೆ ಬದುಕುವುದನ್ನು ಕಲಿಯಬೇಕು ಎಂದರು.

ಕೋವಿಡ್-19 ತುರ್ತು ಸಂದರ್ಭದಲ್ಲಿ ರಾಜ್ಯ ಸರ್ಕಾರ ವಿವಿಧ ಯೋಜನೆಗಳ ಮೂಲಕ ಕೊಡುವ ಪರಿಹಾರ ಧನ ಅರ್ಹ ಫಲಾನುಭವಿಗಳಿಗೆ ತಲುಪಬೇಕು ಹಾಗೂ ಬಡವರಿಗೆ ಕೊಡುವ ಸೌಲಭ್ಯಗಳಲ್ಲಿ ಯಾವುದೇ ಲೋಪದೋಷಗಳು ಆಗಬಾರದು. ಕೊರೋನಾ ವಿರುದ್ದ ಹೋರಾಟದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಅತ್ಯುತ್ತಮ ಕೆಲಸ ಮಾಡಿದೆ, ಉನ್ನತಮಟ್ಟದ ಅಧಿಕಾರಿಗಳು ಉತ್ಸಾಹಿ ಹೆಣ್ಣು ಮಕ್ಕಳಾಗಿದ್ದು ಜಿಲ್ಲೆಯನ್ನ ನಿಭಾಯಿಸಲು ಹಗಲಿರುಳು ಶ್ರಮಿಸಿದ್ದಾರೆ ಎಂದು ಅಭಿನಂದನೆ ಸಲ್ಲಿಸಿದರು.

ಹೀಗೆ ಮುಂದುವರಿದ ಅವರು, ಕಾರ್ಮಿಕರ ಬದ್ಧತೆ ದೃಷ್ಟಿಯಿಂದ ಅಸಂಘಟಿತ ಕಾರ್ಮಿಕರನ್ನು ಸಂಘಟಿತ ವಲಯಕ್ಕೆ ಸೇರಿಸಲು ಮುಂದಿನ ಅಧಿವೇಶನದಲ್ಲಿ ಎರಡು ಮೂರು ಬಿಲ್ಲುಗಳನ್ನು ಮಂಡಿಸಲಾಗುತ್ತದೆ. ಕ್ಷೌರಿಕರಿಗೆ, ಅಗಸರಿಗೆ ಹಾಗೂ ಕಾರ್ಮಿಕರನ್ನು ಕೋವಿಡ್-19 ತುರ್ತು ಸಂದರ್ಭದಲ್ಲಿ ರಾಜ್ಯ ಸರ್ಕಾರ ಅವರಿಗೆ ಪರಿಹಾರಧನವನ್ನು ಘೊಷಿಸಲಾಗಿದೆ. ಮುಂದಿನ ದಿನಗಳಲ್ಲಿ ಕ್ಷೌರಿಕರಿಗೆ ಹಾಗೂ ಅಗಸರಿಗೆ ಡಿ.ಬಿ.ಟಿ ಮೂಲಕ ನೇರವಾಗಿ ಅರ್ಹ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ ಮಾತಾಡಿದ ಆರ್. ಲತಾ, ಜಿಲ್ಲೆಯಲ್ಲಿ ಅಸಂಘಟಿತ ಕಾರ್ಮಿಕರಾದ ಕ್ಷೌರಿಕರು 2077 ಜನರಿದ್ದಾರೆ.  2602 ಅಗಸರಿದ್ದು. ಇವರು  ಈಗಾಗಲೇ ಪರಿಹಾರ ಧನಕ್ಕಾಗಿ ಒಟ್ಟು 4679 ನೊಂದಾಣಿಯಾಗಿದ್ದಾರೆ. ಅದರಲ್ಲಿ ಈಗಾಗಲೇ 661 ಕ್ಷೌರಿಕರು ಮತ್ತು 694 ಅಗಸರ ಅರ್ಜಿಗಳನ್ನು ಪುರಸ್ಕರಿಸಿರಲಾಗಿದೆ ಉಳಿದ ಅರ್ಜಿಗಳ ಪ್ರಕ್ರಿಯೆ ನಡೆಯುತ್ತಿದ್ದು, ಎರಡು ದಿನಗಳ ಒಳಗೆ ಪೂರ್ಣಗೊಳ್ಳುತ್ತದೆ. ಯಾವುದೇ ಕಾರಣಕ್ಕೂ ಯಾವೊಬ್ಬ ಕಾರ್ಮಿಕರಿಗೂ ಪರಿಹಾರ ಧನ ವಿತರಣೆಯಲ್ಲಿ ವಿಳಂಬವಾಗುವುದಿಲ್ಲ ಎಂದರು.

ಅಪಘಾತ ಪರಿಹಾರ ಯೋಜನೆಯಡಿ  ಮೂರು ಜನ ನೋಂದಾಣಿಯಾಗಿರುತ್ತಾರೆ. ಅವರಿಗೆ ಇಲಾಖೆಯಿಂದ ತಲಾ 5 ಲಕ್ಷ ರೂ ನಂತೆ ನೇರವಾಗಿ ಅವರ ಖಾತೆಗೆ ಜಮೆಯಾಗಿರುತ್ತದೆ. ಅದೇ ರೀತಿಯಾಗಿ ಸಾರಿಗೆ ನೌಕರರ ಅಪಘಾತ ಯೋಜನೆಯಡಿ ಶೈಕ್ಷಣಿಕ ಧನ ಸಹಾಯಕ್ಕಾಗಿ ನಾಲ್ಕು ಮಕ್ಕಳು ನೊಂದಾಣಿಯಾಗಿದ್ದು, ನಾಲ್ಕು ಮಕ್ಕಳಿಗೆ ತಲಾ ಒಬ್ಬರಿಗೆ 10,000 ರೂಗಳಂತೆ 40 ಸಾವಿರ ರೂ ಗಳನ್ನು ಮಂಡಳಿಯಿಂದ ಪಾವತಿಯಾಗಿದೆ.

ಇದನ್ನೂ ಓದಿ: Covid-19 test: ಕಳೆದ 24 ಗಂಟೆಯಲ್ಲಿ 2.41 ಲಕ್ಷ ಮಂದಿಗೆ ಕೋವಿಡ್​-19 ಟೆಸ್ಟ್​ - ಐಸಿಎಂಆರ್‌

2019-20ನೇ ಸಾಲಿನಲ್ಲಿ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಸ್ಮಾರ್ಟ್‍ಗಳಿಗೆ 966 ಅರ್ಜಿಗಳು ಬಂದಿದ್ದು, ಅದರಲ್ಲಿ ಜಿಲ್ಲೆಗೆ 385 ಕಾರ್ಡ್‍ಗಳನ್ನು ಕಾರ್ಮಿಕರಿಗೆ ಹಂಚಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು ಆರ್​​ ಲತಾ.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಂ. ಬಿ ಚಿಕ್ಕನರಸಿಂಹಯ್ಯ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ. ಫೌಜಿಯಾ ತರನ್ನುಮ್, ಅಪರ ಜಿಲ್ಲಾಧಿಕಾರಿ ಆರತಿ ಆನಂದ್, ಜಿಲ್ಲಾ ಕಾರ್ಮಿಕ ಅಧಿಕಾರಿ ವರಲಕ್ಷ್ಮೀ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Published by:Ganesh Nachikethu
First published: