ಕೊರೋನಾ ಚಿಕಿತ್ಸೆ ದೂರುಗಳ ವಿಷಯವಾಗಿ ಸರ್ವಪಕ್ಷಗಳ ಪರಿಶೀಲನಾ ಸಮಿತಿ ರಚನೆಗೆ ಸಿದ್ದರಾಮಯ್ಯ ಆಗ್ರಹ

ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಚಿಕಿತ್ಸೆಗೆ ಅವಕಾಶ ಸ್ವಾಗತಾರ್ಹ‌ ಕ್ರಮ. ಚಿಕಿತ್ಸಾ ಶುಲ್ಕ ಕಡಿಮೆ ಮಾಡಲು ಒಪ್ಪಿರುವ ಖಾಸಗಿಯವರು ಚಿಕಿತ್ಸೆಯ ಗುಣಮಟ್ಟದಲ್ಲಿ ರಾಜಿಯಾಗದಂತೆ ಸರ್ಕಾರ ನಿಗಾ ಇಡಬೇಕು. ಸೋಂಕಿತರಿಗೆ, ನೀಡುತ್ತಿರುವ ಔಷಧಿ , ಅನುಸರಿಸಲಾಗುತ್ತಿರುವ ಚಿಕಿತ್ಸಾ ವಿಧಾನದದ ಸಂಪೂರ್ಣ ಮಾಹಿತಿಯನ್ನು ನೀಡಬೇಕು ಎಂದು ಆಗ್ರಹಿಸಿದ್ದಾರೆ.

news18-kannada
Updated:June 30, 2020, 2:32 PM IST
ಕೊರೋನಾ ಚಿಕಿತ್ಸೆ ದೂರುಗಳ ವಿಷಯವಾಗಿ ಸರ್ವಪಕ್ಷಗಳ ಪರಿಶೀಲನಾ ಸಮಿತಿ ರಚನೆಗೆ ಸಿದ್ದರಾಮಯ್ಯ ಆಗ್ರಹ
ಸಿದ್ದರಾಮಯ್ಯ
  • Share this:
ಬೆಂಗಳೂರು; ಕೊರೋನಾ ಚಿಕಿತ್ಸೆ ಬಗ್ಗೆ ವ್ಯಾಪಕವಾಗಿ ದೂರುಗಳು ಬರುತ್ತಿದ್ದು, ಇವುಗಳ ಮೇಲೆ ನಿಗಾ ಇಡಲು ಸರ್ವಪಕ್ಷಗಳ ಪರಿಶೀಲನಾ ಸಮಿತಿ ರಚಿಸಬೇಕು. ಪಕ್ಷಗಳಲ್ಲಿರುವ ವೃತ್ತಿನಿರತ ನಾಯಕರನ್ನು ಹಾಗೂ ವೈದ್ಯಕೀಯ ಶಿಕ್ಷಣ ಪಡೆದಿರುವವರನ್ನು ಸಮಿತಿಗೆ ಸೇರಿಸಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಈ ವಿಷಯವಾಗಿ ಇಂದು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಸರ್ಕಾರಿ ಅಸ್ಪತ್ರೆಗಳ ಬಗ್ಗೆ ನಿರ್ಲಕ್ಷ್ಯ ಸರಿಯಲ್ಲ. ತಾರತಮ್ಯ ನೀತಿ, ಭ್ರಷ್ಟಾಚಾರದ ಆರೋಪಗಳಿವೆ.  ರಾಜಕೀಯ ಪ್ರಭಾವ ಬಳಸಿ ಬಲವಿದ್ದವರು ಬದುಕಿಕೊಳ್ಳುತ್ತಾರೆ. ಬಡವರಿಗೆ ದಿಕ್ಕಿಲ್ಲದಂತಹ ಸ್ಥಿತಿ ಇದೆ. ಸಿಎಂ ಯಡಿಯೂರಪ್ಪನವರೇ ಇತ್ತ ಕಡೆ ಗಮನಹರಿಸಿ ಎಂದು ಒತ್ತಾಯಿಸಿದ್ದಾರೆ.

ರೋಗಿಗಳಿಗೆ ತಾನು ಪಡೆಯುತ್ತಿರುವ ಚಿಕಿತ್ಸೆಯ ಸಂಪೂರ್ಣ ವಿವರ ಪಡೆಯುವ ಕಾನೂನುಬದ್ದ ಹಕ್ಕಿದೆ. ಸೋಂಕಿತರಿಗೆ ನೀಡುತ್ತಿರುವ ಔಷಧಿ,‌ ಅನುಸರಿಸುತ್ತಿರುವ ಚಿಕಿತ್ಸಾ ವಿಧಾನ ಏನು ಎಂಬುದನ್ನು ತಿಳಿಸದೆ ರೋಗಿಗಳನ್ನು ಕತ್ತಲಲ್ಲಿ ಇಡಲಾಗುತ್ತಿದೆ. ಸಿಎಂ ಯಡಿಯೂರಪ್ಪ ಅವರೇ ಇದು ಅನ್ಯಾಯ ಅಲ್ಲವೇ? ಎಂದು ಸಿದ್ದರಾಮಯ್ಯ ಅವರು ಪ್ರಶ್ನೆ ಮಾಡಿದ್ದಾರೆ.






ಇದನ್ನು ಓದಿ: ಕೊರೋನಾ ತಡೆ ಸಂಬಂಧ ಖಾಸಗಿ ವೈದ್ಯಕೀಯ ಕಾಲೇಜು ಮುಖ್ಯಸ್ಥರ ಜತೆ ಸಿಎಂ ಸಭೆ: ಇಲ್ಲಿವೆ ಮುಖ್ಯಾಂಶಗಳು

ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಚಿಕಿತ್ಸೆಗೆ ಅವಕಾಶ ಸ್ವಾಗತಾರ್ಹ‌ ಕ್ರಮ. ಚಿಕಿತ್ಸಾ ಶುಲ್ಕ ಕಡಿಮೆ ಮಾಡಲು ಒಪ್ಪಿರುವ ಖಾಸಗಿಯವರು ಚಿಕಿತ್ಸೆಯ ಗುಣಮಟ್ಟದಲ್ಲಿ ರಾಜಿಯಾಗದಂತೆ ಸರ್ಕಾರ ನಿಗಾ ಇಡಬೇಕು. ಸೋಂಕಿತರಿಗೆ, ನೀಡುತ್ತಿರುವ ಔಷಧಿ , ಅನುಸರಿಸಲಾಗುತ್ತಿರುವ ಚಿಕಿತ್ಸಾ ವಿಧಾನದದ ಸಂಪೂರ್ಣ ಮಾಹಿತಿಯನ್ನು ನೀಡಬೇಕು ಎಂದು ಆಗ್ರಹಿಸಿದ್ದಾರೆ.
First published:June 30, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading