ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ವೇಗವಾಗಿ ಹಬ್ಬುತ್ತಿದೆ. ಕೊರೋನಾ ಪರಿಸ್ಥಿತಿ ನಿಯಂತ್ರಿಸಲಾಗದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದ್ದಾರೆ. ಹಾಗೆಯೇ ಕೋವಿಡ್ ನಿಯಂತ್ರಣ ಹೇಗೆ ಮಾಡಬೇಕು ಎಂಬುದರ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದು ಸಲಹೆ ನೀಡಿದ್ದಾರೆ.
ದೇಶದಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡು 15 ತಿಂಗಳಾದವು. ರಾಜ್ಯದಲ್ಲಿ 14 ತಿಂಗಳುಗಳಾದವು. ಕಳೆದ ಒಂದು ತಿಂಗಳಿನಿಂದೀಚೆಗೆ ಎರಡನೇ ಅಲೆ ಪ್ರಾರಂಭವಾಗಿದೆ. ರಾಜ್ಯದಲ್ಲಿ ಮತ್ತು ರಾಷ್ಟ್ರದಲ್ಲಿ ಕಳೆದ ವರ್ಷದ ಆರಂಭದಲ್ಲಿ ಕಾಣಿಸಿಕೊಂಡ ಕೋವಿಡ್ ಸರ್ಕಾರಗಳ ನಿರ್ಲಕ್ಷ್ಯದಿಂದಾಗಿ ಕಾಣಿಸಿಕೊಂಡಿತು. ಇದರ ಮೊದಲ ಹಂತದಲ್ಲಿ ಕೋವಿಡ್ ಸೋಂಕು ವ್ಯಾಪಿಸಲು ನಿಸರ್ಗದಲ್ಲಿನ ಏರುಪೇರುಗಳು ಸಹ ಕಾರಣವಾಗಿದ್ದವು ಎಂದು ಹೇಳಬಹುದು. ಆದರೆ, ಎರಡನೇ ಅಲೆಯ ಸಂದರ್ಭದಲ್ಲಿ ಉಂಟಾಗುತ್ತಿರುವ ಸಾವು- ಸಾವುಗಳಿಗೆ ನೇರವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅದಕ್ಷತೆ ಮತ್ತು ನಿರ್ಲಕ್ಷ್ಯಗಳೇ ಕಾರಣ ಎಂದು ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.
ರಾಜ್ಯದ ಜನರ ಸಂಕಟಗಳನ್ನು ನೋಡಲಾಗುತ್ತಿಲ್ಲ. ಆಕ್ಸಿಜನ್ ವ್ಯವಸ್ಥೆಯೂ ಇದೇ ರೀತಿ ಇದೆ. 1400 ಟನ್ ಆಕ್ಸಿನ್ ಅಗತ್ಯವಿರುವ ಕಡೆ ಕೇವಲ 300-400 ಟನ್ ಆಕ್ಸಿಜನ್ ಹಂಚಿಕೆ ಮಾಡಲಾಗಿದೆ. ವೈರಸ್ಗಳ ನಿಯಂತ್ರಣಕ್ಕೆ ಅತ್ಯಗತ್ಯವಾಗಿ ಬೇಕಾಗಿರುವ ರೆಮ್ಡಿಸಿವಿರ್ ಔಷಧ ಬೇಡಿಕೆಗೆ ಹೋಲಿಸಿದರೆ ಶೇ.20 ರಷ್ಟು ಸರಬರಾಜು ಆಗುತ್ತಿಲ್ಲ. ಘನತೆಯಿಂದ ಶವಸಂಸ್ಕಾರವನ್ನೂ ಮಾಡಲಾಗದ ಪರಿಸ್ಥಿತಿಯನ್ನು ರಾಜ್ಯದಲ್ಲಿ ನಿರ್ಮಿಸಿದ್ದೀರಿ. ಇಂತಹ ಸಂದರ್ಭದಲ್ಲಿ ನಾಗರಿಕ ಸರ್ಕಾರವೊಂದು ನಡೆದುಕೊಳ್ಳಬೇಕಾದ ರೀತಿ ಇದೆನಾ ಎಂದು ಜನ ಕೇಳುತ್ತಿದ್ದಾರೆ. ಆದ್ದರಿಂದ ಸರ್ಕಾರ ತನ್ನೆಲ್ಲಾ ಶಕ್ತಿಯನ್ನು ಬಳಸಿ ಸಾರ್ವಜನಿಕರ ರಕ್ಷಣೆಗೆ ನಿಲ್ಲಬೇಕೆಂದು ಒತ್ತಾಯಿಸುತ್ತೇನೆ. ಅದಕ್ಕಾಗಿ ಈ ಸಲಹೆಗಳನ್ನು ನೀಡಬಯಸುತ್ತೇನೆ.
ಇದನ್ನು ಓದಿ: Covid-19 Vaccine | ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ; ಇಂದಿನಿಂದ ನೋಂದಣಿ ಆರಂಭ
ಸರ್ಕಾರಕ್ಕೆ ಸಿದ್ದರಾಮಯ್ಯ ನೀಡಿರುವ ಸಲಹೆಗಳು
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ