ಬೆಂಗಳೂರು (ಏ.22) : ರಾಜ್ಯದಲ್ಲಿ ದಿನೇ ದಿನೇ ತೀವ್ರ ರೀತಿಯಲ್ಲಿ ಉಲ್ಬಣಗೊಳ್ಳುತ್ತಿರುವ ಕೊರೋನಾಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಹಲವು ನಿಯಮಗಳನ್ನು ಜಾರಿಗೆ ತಂದಿದೆ. ಸಭೆಗಳ ಮೇಲೆ ಸಭೆಗಳನ್ನು ಮಾಡುತ್ತಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ಗಳ ಮೂಲಕ ತಿವಿದಿದ್ದಾರೆ. ಕರ್ಫ್ಯೂ ಹಿನ್ನೆಲೆಯಲ್ಲಿ ಪೊಲೀಸರು ರಸ್ತೆಗಿಳಿದು ಜನರಿಗೆ ಲಾಠಿ ರುಚಿ ತೋರಿಸುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಸಿದ್ದರಾಮಯ್ಯ ಸರ್ಕಾರದ ಕ್ರಮಗಳನ್ನು ತೀವ್ರವಾಗಿ ಖಂಡಿಸಿದ್ದಾರೆ. ಕೊರೋನಾ ಪರಿಸ್ಥಿತಿಯನ್ನು ನಿರ್ವಹಿಸಲು ಸಾಧ್ಯವಾಗದಿದ್ದರೆ ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಯಿರಿ ಎಂದು ಸಿಎಂ ಯಡಿಯೂರಪ್ಪ ವಿರುದ್ಧ ಹರಿಹಾಯ್ದಿದ್ದಾರೆ.
ರಾಜ್ಯದಲ್ಲಿ ಚುನಾಯಿತ ಸರ್ಕಾರವಿದೇಯೋ ಇಲ್ಲ, ಹುಚ್ಚರ ಸಂತೆ ಇದೆಯೋ ಎಂದು ಸಿದ್ದರಾಮಯ್ಯ ಗುಡುಗಿದ್ದಾರೆ. ಕ್ಷಣಕ್ಕೊಂದು ನಿಯಮ, ಕ್ಷಣಕ್ಕೊಂದು ಮಾರ್ಗಸೂಚಿ ಹೊರಡಿಸಿ ಅಮಾಯಕ ಜನರ ಮೇಲೆ ದೌರ್ಜನ್ಯ ಮಾಡುತ್ತಿದ್ದೀರ. ಆಡಳಿತ ನಡೆಸಲು ಆಗದಿದ್ದರೆ ಕುರ್ಚಿ ಬಿಟ್ಟು ತೊಲಗಿ, ಜನರನ್ನೇಕೆ ಗೋಳಾಡಿಸುತ್ತೀರಾ ಎಂದು ಪ್ರಶ್ನಿಸಿದ್ದಾರೆ.
ಇದೇನು ಚುನಾಯಿತ ಸರ್ಕಾರವೋ?
ಹುಚ್ಚರ ಸಂತೆಯೋ?
ಕ್ಷಣ ಕ್ಷಣಕ್ಕೂ ಬದಲಾಗುವ ನಿರ್ಧಾರ- ಮಾರ್ಗಸೂಚಿಗಳು, ಅಘೋಷಿತ ಲಾಕ್ ಡೌನ್, ಅಮಾಯಕ ಜನತೆ ಮೇಲೆ ದೌರ್ಜನ್ಯ..
ಏನಿದು @CMofKarnataka ಅವರೇ,
ಆಡಳಿತ
ನಡೆಸಲಾಗದಿದ್ದರೆ ಕುರ್ಚಿಬಿಟ್ಟು ತೊಲಗಿ, ಜನರನ್ನು ಯಾಕೆ ಗೋಳು ಹೊಯ್ಕೊಳ್ತೀರಿ?
1/3#KarnatakaLockdown
— Siddaramaiah (@siddaramaiah) April 22, 2021
ಕೊರೊನಾ ಉಲ್ಭಣಗೊಂಡಿರುವುದು ಸರ್ಕಾರದ ನಿರ್ಲಕ್ಷ್ಯ, ನಿಷ್ಕ್ರಿಯತೆ ಮತ್ತು ದುರಾಡಳಿತದಿಂದ.
ತಮ್ಮ ವೈಫಲ್ಯ ಮುಚ್ಚಿಹಾಕಲು
ಪೊಲೀಸರ ಕೈಗೆ ಲಾಠಿ ಕೊಟ್ಟು ಬೀದಿಗಿಳಿಸಿದರೆ ಕೊರೊನಾ ಓಡಿಹೋಗುವುದೇ @BSYBJP ಅವರೇ?
2/3#KarnatakaLockdown
— Siddaramaiah (@siddaramaiah) April 22, 2021
ಲಾಕ್ ಡೌನ್, ಬಂದ್,
ಕರ್ಪ್ಯೂ.....
ಇನ್ನೇನೋ,
ಯಾವ ನಿರ್ಧಾರ ಕೈಗೊಳ್ಳುವುದಿದ್ದರೂ
ಜನರಿಗೆ ಮನವರಿಕೆ ಮಾಡಿ, ವಿಶ್ವಾಸಕ್ಕೆ ತೆಗೆದುಕೊಂಡು ಪೂರ್ವಸಿದ್ದತೆಯೊಡನೆ ಮಾಡಿ.
ತಟ್ಟೆ ಬಡಿಯುವ,
ಕ್ಯಾಂಡಲ್ ಹಚ್ಚುವ ಶೈಲಿಯ ಇಂತಹ ತುಘಲಕ್ ದರ್ಬಾರ್ ಪುನರಾವರ್ತನೆ ಮಾಡಬೇಡಿ.
3/3@CMofKarnataka
— Siddaramaiah (@siddaramaiah) April 22, 2021
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ