ಕೊರೋನಾ ಚಿಕಿತ್ಸೆ ಬಗ್ಗೆ ವಿವರ ತಿಳಿಯುವುದು ರೋಗಿಗಳ ಹಕ್ಕು: ಸಿದ್ದರಾಮಯ್ಯ

ರೋಗಿಗಳಿಗೆ ತಾನು ಪಡೆಯುತ್ತಿರುವ ಚಿಕಿತ್ಸೆಯ ವಿವರ ಪಡೆಯುವ ಕಾನೂನುಬದ್ದ ಹಕ್ಕಿದೆ. ಸೋಂಕಿತರಿಗೆ ನೀಡುತ್ತಿರುವ ಔಷಧಿ ಏನು ಎಂಬುದನ್ನು ತಿಳಿಸದೆ ಕತ್ತಲಲ್ಲಿಡುವುದು ತಪ್ಪು ಎಂದು ಸಿದ್ದರಾಮಯ್ಯ ಖಂಡಿಸಿದ್ದಾರೆ.

news18-kannada
Updated:June 30, 2020, 6:04 PM IST
ಕೊರೋನಾ ಚಿಕಿತ್ಸೆ ಬಗ್ಗೆ ವಿವರ ತಿಳಿಯುವುದು ರೋಗಿಗಳ ಹಕ್ಕು: ಸಿದ್ದರಾಮಯ್ಯ
ಮಾಜಿ ಸಿಎಂ ಸಿದ್ದರಾಮಯ್ಯ.
  • Share this:
ಬೆಂಗಳೂರು(ಜೂನ್ 30): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊರೋನಾ ವಿಚಾರವಾಗಿ ಸರ್ಕಾರದ ಕಿವಿಹಿಂಡಿ ಟ್ವೀಟ್ ಮಾಡಿದ್ದಾರೆ. ಕೊರೋನಾ ಚಿಕಿತ್ಸೆ ವಿಚಾರದಲ್ಲಿ ಯಾವುದೇ ರಾಜಿಯಾಗಬಾರದು ಸರ್ಕಾರ ಬಹಳ ಕಾಳಜಿ ವಹಿಸಬೇಕು ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ರಾಜ್ಯದಲ್ಲಿ ಕೊರೋನಾ ಚಿಕಿತ್ಸೆ ಬಗ್ಗೆ ವ್ಯಾಪಕ ದೂರುಗಳು ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಸರ್ಕಾರ ಇದರ ಮೇಲೆ ನಿಗಾ ಬೇಕು. ಸಿಎಂ ಯಡಿಯೂರಪ್ಪ ಅವರು ತಕ್ಷಣ ಸರ್ವಪಕ್ಷಗಳ ಪರಿಶೀಲನಾ ಸಮಿತಿ ರಚಿಸಬೇಕು. ಬೇರೆ ಬೇರೆ ಪಕ್ಷಗಳಲ್ಲಿರುವ ವೃತ್ತಿನಿರತ ಮತ್ತು ವೈದ್ಯಕೀಯ ಶಿಕ್ಷಣ ಹೊಂದಿರುವ ನಾಯಕರನ್ನು ಈ ಸರ್ವಪಕ್ಷ ಸಮಿತಿಯಲ್ಲಿ ಸೇರಿಸಿಕೊಳ್ಳಬೇಕೆಂದು ಸಿದ್ದರಾಮಯ್ಯ ಸಿಎಂಗೆ ಸಲಹೆ ನೀಡಿದ್ದಾರೆ.

ಅಲ್ಲದೆ, ಕೊರೋನಾ ಚಿಕಿತ್ಸೆಗೆ ಮೀಸಲಿಟ್ಟಿರುವ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ನಿರ್ಲಕ್ಷ, ತಾರತಮ್ಯ ನೀತಿ ಮತ್ತು ಭ್ರಷ್ಟಾಚಾರದ ಆರೋಪಗಳಿವೆ. ಜೊತೆಗೆ ರಾಜಕೀಯ ಪ್ರಭಾವ ಬಳಸಿ ಬಲವಿದ್ದವರು ಬದುಕಿಕೊಳ್ಳುತ್ತಾರೆ. ಆದ್ರೆ ಬಡವರಿಗೆ ತೊಂದ್ರೆ ಅಗ್ತಾ ಇದೆ. ರೋಗಿಗಳಿಗೆ ತಾನು ಪಡೆಯುತ್ತಿರುವ ಚಿಕಿತ್ಸೆಯ ಸಂಪೂರ್ಣ ವಿವರ ಪಡೆಯುವ ಕಾನೂನುಬದ್ದ ಹಕ್ಕಿದೆ. ಸೋಂಕಿತರಿಗೆ ನೀಡುತ್ತಿರುವ ಔಷಧಿ,‌ ಅನುಸರಿಸುತ್ತಿರುವ ಚಿಕಿತ್ಸಾ ವಿಧಾನ ಏನು ಎಂಬುದನ್ನು ತಿಳಿಸದೆ ರೋಗಿಗಳನ್ನು ಕತ್ತಲಲ್ಲಿಡಲಾಗುತ್ತಿದೆ. ಇದು ತಪ್ಪು. ಸಿಎಂ ಯಡಿಯೂರಪ್ಪ ಅವರೆ, ಇದು ಅನ್ಯಾಯ ಅಲ್ಲವೇ? ಎಂದವರು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಕಾಂಟ್ಯಾಕ್ಟ್ ಟ್ರೇಸಿಂಗ್ ಕಷ್ಟ ಎಂದು ಹೇಳುವುದು ಬರೀ ನೆವ ಅಷ್ಟೇ: ವಿಶ್ವರಾಷ್ಟ್ರಗಳಿಗೆ ಡಬ್ಲ್ಯೂಎಚ್ಒ ಕಟುಮಾತು

ಆದರೆ, ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ಅವಕಾಶ ನೀಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಅವರು ಈ ಸಂದರ್ಭದಲ್ಲಿ ಸ್ವಾಗತಿಸಿದ್ದಾರೆ.









ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಚಿಕಿತ್ಸೆಗೆ ಅವಕಾಶ ಸ್ವಾಗತಾರ್ಹ‌ ಕ್ರಮ. ಆದ್ರೆ ಚಿಕಿತ್ಸಾ ಶುಲ್ಕ ಕಡಿಮೆ ಮಾಡಲು ಒಪ್ಪಿರುವ ಖಾಸಗಿಯವರು ಚಿಕಿತ್ಸೆಯ ಗುಣಮಟ್ಟದಲ್ಲಿ ರಾಜಿಯಾಗದಂತೆ ಸರ್ಕಾರ ನಿಗಾ ಇಡಬೇಕು. ಸೋಂಕಿತರಿಗೆ, ನೀಡುತ್ತಿರುವ ಔಷಧಿ ಮತ್ತು ಅನುಸರಿಸಲಾಗುತ್ತಿರುವ ಚಿಕಿತ್ಸಾ ವಿಧಾನದದ ಸಂಪೂರ್ಣ ಮಾಹಿತಿಯನ್ನು ನೀಡಬೇಕೆಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಒತ್ತಾಯ ಮಾಡಿದ್ದಾರೆ.
First published:June 30, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading